< Revelation 13 >
1 And I stood upon the sand of the sea, and I saw out of the sea a beast coming up, having seven heads and ten horns, and upon its horns ten diadems, and upon its heads a name of evil speaking,
೧ಸಮುದ್ರ ತೀರದ ಮರಳಿನ ಮೇಲೆ ನಿಂತನು. ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.
2 and the beast that I saw was like to a leopard, and its feet as of a bear, and its mouth as the mouth of a lion, and the dragon did give to it his power, and his throne, and great authority.
೨ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
3 And I saw one of its heads as slain to death, and its deadly stroke was healed, and all the earth did wonder after the beast,
೩ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
4 and they did bow before the dragon who did give authority to the beast, and they did bow before the beast, saying, 'Who [is] like to the beast? who is able to war with it?'
೪ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
5 And there was given to it a mouth speaking great things, and evil-speakings, and there was given to it authority to make war forty-two months,
೫ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
6 and it did open its mouth for evil-speaking toward God, to speak evil of His name, and of His tabernacle, and of those who in the heaven tabernacle,
೬ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
7 and there was given to it to make war with the saints, and to overcome them, and there was given to it authority over every tribe, and tongue, and nation.
೭ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
8 And bow before it shall all who are dwelling upon the land, whose names have not been written in the scroll of the life of the Lamb slain from the foundation of the world;
೮ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
9 if any one hath an ear — let him hear:
೯ಕಿವಿಯುಳ್ಳವನು ಕೇಳಲಿ,
10 if any one a captivity doth gather, into captivity he doth go away; if any one by sword doth kill, it behoveth him by sword to be killed; here is the endurance and the faith of the saints.
೧೦ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
11 And I saw another beast coming up out of the land, and it had two horns, like a lamb, and it was speaking as a dragon,
೧೧ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
12 and all the authority of the first beast doth it do before it, and it maketh the land and those dwelling in it that they shall bow before the first beast, whose deadly stroke was healed,
೧೨ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
13 and it doth great signs, that fire also it may make to come down from the heaven to the earth before men,
೧೩ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
14 and it leadeth astray those dwelling on the land, because of the signs that were given it to do before the beast, saying to those dwelling upon the land to make an image to the beast that hath the stroke of the sword and did live,
೧೪ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
15 and there was given to it to give a spirit to the image of the beast, that also the image of the beast may speak, and [that] it may cause as many as shall not bow before the image of the beast, that they may be killed.
೧೫ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
16 And it maketh all, the small, and the great, and the rich, and the poor, and the freemen, and the servants, that it may give to them a mark upon their right hand or upon their foreheads,
೧೬ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
17 and that no one may be able to buy, or to sell, except he who is having the mark, or the name of the beast, or the number of his name.
೧೭ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.
18 Here is the wisdom! He who is having the understanding, let him count the number of the beast, for the number of a man it is, and its number [is] six hundred and sixty six.
೧೮ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.