< 1 Reĝoj 1 >
1 La reĝo David maljuniĝis kaj atingis profundan aĝon; kaj oni kovris lin bone per vestoj, sed li ne povis varmiĝi.
ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.
2 Tiam diris al li liaj servantoj: Oni elserĉu por nia sinjoro la reĝo junulinon virgulinon, kaj ŝi staru antaŭ la reĝo kaj flegu lin kaj dormu ĉe lia brusto, kaj tiam al nia sinjoro la reĝo fariĝos varme.
ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು.
3 Kaj oni serĉis belan junulinon en la tuta regiono de Izrael, kaj oni trovis la Ŝunemaninon Abiŝag kaj venigis ŝin al la reĝo.
ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.
4 La junulino estis tre bela; kaj ŝi fariĝis flegantino de la reĝo kaj servis al li; sed la reĝo ne ekkonis ŝin.
ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ.
5 Dume Adonija, filo de Ĥagit, fieriĝis, kaj diris: Mi fariĝos reĝo. Kaj li havigis al si ĉarojn kaj rajdistojn kaj kvindek homojn por kuradi antaŭ li.
ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.
6 Kaj lia patro neniam afliktis lin per demando: Kial vi tion faras? Krom tio li estis tre belaspekta, kaj li estis naskita post Abŝalom.
ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.
7 Kaj li interkonsentis kun Joab, filo de Ceruja, kaj kun la pastro Ebjatar, kaj ili helpadis Adonijan.
ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.
8 Sed la pastro Cadok, kaj Benaja, filo de Jehojada, kaj la profeto Natan kaj Ŝimei kaj Rei kaj la fortuloj de David ne estis kun Adonija.
ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
9 Adonija buĉis ŝafojn kaj bovojn kaj grasigitajn brutojn ĉe la ŝtono Zoĥelet, kiu kuŝas apud En-Rogel; kaj li invitis ĉiujn siajn fratojn, la filojn de la reĝo, kaj ĉiujn Jehudaanojn, kiuj servis al la reĝo.
ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು.
10 Sed la profeton Natan kaj Benajan kaj la fortulojn kaj sian fraton Salomono li ne invitis.
ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
11 Kaj Natan diris al Bat-Ŝeba, patrino de Salomono, jene: Ĉu vi ne aŭdis, ke Adonija, filo de Ĥagit, fariĝis reĝo, kaj nia sinjoro David tion ne scias?
ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ?
12 Venu do, mi donos al vi konsilon, por ke vi savu vian animon kaj la animon de via filo Salomono.
ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.
13 Iru kaj venu al la reĝo David, kaj diru al li: Mia sinjoro, ho reĝo, vi ĵuris ja al via servantino, dirante: Via filo Salomono reĝos post mi, kaj li sidos sur mia trono; kial do Adonija fariĝis reĝo?
ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು.
14 Dum vi ankoraŭ estos parolanta tie kun la reĝo, mi venos post vi kaj kompletigos viajn vortojn.
ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು.
15 Kaj Bat-Ŝeba venis al la reĝo en la ĉambron; la reĝo estis tre maljuna, kaj la Ŝunemanino Abiŝag servis al la reĝo.
ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು.
16 Bat-Ŝeba salutis kaj adorkliniĝis antaŭ la reĝo; kaj la reĝo diris: Kio estas al vi?
ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.
17 Kaj ŝi diris al li: Mia sinjoro, vi ĵuris al via servantino per la Eternulo, via Dio: Via filo Salomono reĝos post mi, kaj li sidos sur mia trono.
ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ.
18 Sed nun jen Adonija fariĝis reĝo; kaj vi, mia sinjoro, ho reĝo, tion ne scias.
ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ.
19 Li buĉis multe da bovoj kaj grasigitaj brutoj kaj ŝafoj, kaj invitis ĉiujn filojn de la reĝo kaj la pastron Ebjatar kaj la militestron Joab, sed vian servanton Salomono li ne invitis.
ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.
20 Sed vi, mia sinjoro, ho reĝo — la okuloj de ĉiuj Izraelidoj estas turnitaj al vi, por ke vi diru al ili, kiu sidos sur la trono de mia sinjoro la reĝo post li.
ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.
21 Kiam mia sinjoro la reĝo kuŝiĝos kun siaj patroj, tiam mi kaj mia filo Salomono estos proklamitaj kulpuloj.
ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.
22 Dum ŝi ankoraŭ estis parolanta kun la reĝo, venis la profeto Natan.
ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು.
23 Kaj oni raportis al la reĝo: Jen estas la profeto Natan; kaj ĉi tiu venis antaŭ la reĝon kaj adorkliniĝis antaŭ la reĝo vizaĝaltere.
ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
24 Kaj Natan diris: Mia sinjoro, ho reĝo! ĉu vi diris: Adonija fariĝos reĝo post mi, kaj li sidos sur mia trono?
ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ?
25 Ĉar li iris hodiaŭ kaj buĉis multe da bovoj kaj grasigitaj brutoj kaj ŝafoj, kaj invitis ĉiujn filojn de la reĝo kaj la militestron kaj la pastron Ebjatar; kaj jen ili manĝas kaj trinkas antaŭ li, kaj proklamas: Vivu la reĝo Adonija!
ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.
26 Sed min, vian servanton, kaj la pastron Cadok, kaj Benajan, filon de Jehojada, kaj vian servanton Salomono li ne invitis.
ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.
27 Ĉu laŭ ordono de mia sinjoro la reĝo tio fariĝis, kaj vi ne sciigis al via servanto, kiu sidos sur la trono de mia sinjoro la reĝo post li?
ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು.
28 Tiam la reĝo David respondis kaj diris: Voku al mi Bat-Ŝeban. Kaj ŝi venis antaŭ la reĝon kaj stariĝis antaŭ la reĝo.
ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು.
29 Kaj la reĝo ĵuris kaj diris: Kiel vivas la Eternulo, kiu liberigis mian animon el ĉiuj malfeliĉoj,
ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ,
30 kiel mi ĵuris al vi per la Eternulo, Dio de Izrael, dirante: Via filo Salomono reĝos post mi kaj li sidos sur mia trono anstataŭ mi — tiel mi faros hodiaŭ.
ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು.
31 Tiam Bat-Ŝeba salutis vizaĝaltere kaj adorkliniĝis antaŭ la reĝo, kaj diris: Vivu mia sinjoro la reĝo David eterne!
ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು.
32 Kaj la reĝo David diris: Voku al mi la pastron Cadok kaj la profeton Natan, kaj Benajan, filon de Jehojada. Kaj ili venis antaŭ la reĝon.
ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.
33 Kaj la reĝo diris al ili: Prenu kun vi la servantojn de via sinjoro, kaj rajdigu mian filon Salomono sur mia mulo kaj venigu lin en Giĥonon.
ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.
34 Kaj tie la pastro Cadok kaj la profeto Natan lin sanktoleu reĝo super Izrael; kaj blovu per trumpeto, kaj proklamu: Vivu la reĝo Salomono!
ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.
35 Poste revenu, sekvante lin, kaj li venu kaj sidiĝu sur mia trono; kaj li reĝos anstataŭ mi, al li mi ordonas esti estro de Izrael kaj Jehuda.
ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಹಾಗೆ, ನೀವು ಅವನ ಹಿಂದೆ ಬನ್ನಿರಿ. ಏಕೆಂದರೆ ಅವನು ನನಗೆ ಬದಲಾಗಿ ಅರಸನಾಗಿರುವನು. ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ, ನಾಯಕನಾಗಿರಲು ನಾನು ಅವನನ್ನು ನೇಮಿಸಿದ್ದೇನೆ,” ಎಂದನು.
36 Tiam respondis Benaja, filo de Jehojada, al la reĝo, kaj diris: Amen! tiel diru la Eternulo, Dio de mia sinjoro la reĝo.
ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ.
37 Kiel la Eternulo estis kun mia sinjoro la reĝo, tiel Li estu kun Salomono, kaj Li faru lian tronon pli granda, ol la trono de mia sinjoro, la reĝo David.
ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.
38 Kaj iris la pastro Cadok kaj la profeto Natan, kaj Benaja, filo de Jehojada, kaj la Keretidoj kaj la Peletidoj, kaj ili rajdigis Salomonon sur la mulo de la reĝo David kaj kondukis lin en Giĥonon.
ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.
39 Kaj la pastro Cadok prenis la kornon kun oleo el la tabernaklo kaj sanktoleis Salomonon; kaj oni ekblovis per trumpeto, kaj la tuta popolo diris: Vivu la reĝo Salomono!
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.
40 Kaj la tuta popolo ekiris post li, kaj la popolo muzikis per flutoj kaj estis tre gaja, tiel ke la tero resonis de iliaj krioj.
ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
41 Tion aŭdis Adonija, kaj ĉiuj invititoj, kiuj estis kun li; ili jam finis la manĝadon; kaj aŭdis Joab la sonadon de la trumpeto, kaj li diris: Kion signifas la tumulta bruo de la urbo?
ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.
42 Kiam li estis ankoraŭ parolanta, jen venis Jonatan, filo de la pastro Ebjatar. Kaj Adonija diris: Eniru, ĉar vi estas brava homo kaj vi sciigos bonon.
ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.
43 Kaj Jonatan respondis kaj diris al Adonija: Jes, nia sinjoro la reĝo David faris Salomonon reĝo;
ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.
44 kaj la reĝo sendis kun li la pastron Cadok kaj la profeton Natan, kaj Benajan, filon de Jehojada, kaj la Keretidojn kaj la Peletidojn, kaj ili rajdigis lin sur la mulo de la reĝo;
ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,
45 kaj la pastro Cadok kaj la profeto Natan sanktoleis lin reĝo en Giĥon, kaj ili revenis de tie gajaj, kaj la urbo tumultiĝis; tio estas la bruo, kiun vi aŭdis.
ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.
46 Kaj Salomono jam sidiĝis sur la reĝa trono.
ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
47 Kaj jam venis la servantoj de la reĝo, por gratuli nian sinjoron, la reĝon David, dirante: Via Dio faru la nomon de Salomono pli fama, ol via nomo, kaj Li faru lian tronon pri granda, ol via trono; kaj la reĝo adorkliniĝis sur la kuŝejo.
ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,
48 Kaj ankaŭ tiele diris la reĝo: Benata estu la Eternulo, Dio de Izrael, kiu donis hodiaŭ sidanton sur mia trono, kaj miaj okuloj vidas.
‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.
49 Kaj ektimis kaj leviĝis ĉiuj invititoj de Adonija, kaj foriris ĉiu sian vojon.
ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.
50 Sed Adonija timis Salomonon, kaj li leviĝis kaj iris kaj ekkaptis la kornojn de la altaro.
ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.
51 Kaj oni raportis al Salomono jene: Jen Adonija timas la reĝon Salomono, kaj li tenas la kornojn de la altaro, dirante: La reĝo Salomono ĵuru al mi hodiaŭ, ke li ne mortigos sian servanton per glavo.
ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು.
52 Kaj Salomono diris: Se li estos homo brava, tiam eĉ unu el liaj haroj ne falos teren; sed se en li troviĝos malbono, tiam li mortos.
ಅದಕ್ಕೆ ಸೊಲೊಮೋನನು, “ಅವನು ಉತ್ತಮನಾಗಿ ನಡೆಯುವುದಾದರೆ, ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು. ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು,” ಎಂದನು.
53 Kaj la reĝo Salomono sendis forprenigi lin de la altaro, kaj li venis kaj adorkliniĝis antaŭ la reĝo Salomono; kaj Salomono diris al li: Iru en vian domon.
ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.