< 2 Reĝoj 9 >

1 La profeto Eliŝa alvokis unu el la profetidoj, kaj diris al li: Zonu viajn lumbojn, kaj prenu en vian manon ĉi tiun vazon kun oleo, kaj iru en Ramoton en Gilead.
ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
2 Kiam vi venos tien, elserĉu tie Jehun, filon de Jehoŝafat, filo de Nimŝi, kaj aliru kaj starigu lin el meze de liaj fratoj kaj enkonduku lin en la plej internan ĉambron.
ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
3 Kaj prenu la vazon kun la oleo kaj verŝu sur lian kapon, kaj diru: Tiele diras la Eternulo: Mi sanktoleis vin reĝo super Izrael. Poste malfermu la pordon kaj forkuru, ne prokrastu.
ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.
4 Kaj iris la junulo, la junulo la profeto, al Ramot en Gilead.
ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
5 Kiam li venis, li vidis, ke sidas la militestroj. Kaj li diris: Mi havas ion por diri al vi, ho estro. Kaj Jehu diris: Al kiu el ni ĉiuj? Li respondis: Al vi, ho estro.
ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
6 Tiu leviĝis kaj iris en la domon. Li verŝis la oleon sur lian kapon, kaj diris: Tiele diras la Eternulo, Dio de Izrael: Mi sanktoleis vin reĝo super la popolo de la Eternulo, super Izrael.
ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
7 Kaj vi ekstermos la domon de via sinjoro Aĥab, por ke Mi venĝu la sangon de Miaj servantoj, la profetoj, kaj la sangon de ĉiuj servantoj de la Eternulo, verŝitajn de la mano de Izebel.
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
8 Kaj pereos la tuta domo de Aĥab; kaj Mi ekstermos ĉe Aĥab ĉiun virseksulon, malliberulon kaj liberulon en Izrael.
ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
9 Kaj mi faros al la domo de Aĥab kiel al la domo de Jerobeam, filo de Nebat, kaj kiel al la domo de Baaŝa, filo de Aĥija.
ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
10 Kaj Izebelon manĝos la hundoj sur la kampo de Jizreel, kaj neniu enterigos ŝin. Kaj li malfermis la pordon kaj forkuris.
೧೦ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
11 Kiam Jehu eliris al la servantoj de sia sinjoro, ili diris al li: Ĉu ĉio estas en ordo? por kio venis al vi tiu frenezulo? Li respondis al ili: Vi konas ja tiun homon kaj lian parolon.
೧೧ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
12 Ili diris: Ne vero, tamen diru al ni. Kaj li diris: Tiel kaj tiel li parolis al mi, dirante: Tiele diras la Eternulo: Mi sanktoleis vin reĝo super Izrael.
೧೨ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
13 Kaj rapide ili prenis ĉiu sian veston kaj sternis sub li sur la altaj ŝtupoj, kaj ekblovis per trumpeto, kaj diris: Jehu fariĝis reĝo.
೧೩ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
14 Tiam Jehu, filo de Jehoŝafat, filo de Nimŝi, faris konspiron kontraŭ Joram. (Dume Joram staris garde en Ramot en Gilead, li kaj la tuta Izrael, kontraŭ Ĥazael, reĝo de Sirio.
೧೪ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
15 Kaj la reĝo Joram revenis, por kuraci sin en Jizreel de la vundoj, kiujn faris al li la Sirianoj, kiam li batalis kontraŭ Ĥazael, reĝo de Sirio.) Tiam Jehu diris: Se vi konsentas, neniu eliĝu el la urbo, por iri kaj sciigi en Jizreel.
೧೫ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು.
16 Kaj Jehu ekrajdis kaj direktis sin al Jizreel; ĉar tie kuŝis Joram, kaj Aĥazja, reĝo de Judujo, venis, por viziti Joramon.
೧೬ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
17 La gardostaranto staris sur la turo en Jizreel, kaj li ekvidis la alproksimiĝantan amason de Jehu, kaj diris: Mi vidas amason. Tiam Joram diris: Prenu rajdanton kaj sendu kontraŭ ili, por ke li demandu, ĉu ĉio estas en ordo.
೧೭ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
18 Kaj la rajdanto sur ĉevalo direktis sin renkonte al li, kaj diris: Tiele diras la reĝo: Ĉu ĉio estas en ordo? Sed Jehu respondis: La ordo ne estas via afero, turnu vin kaj sekvu min. Kaj la gardostaranto raportis, dirante: La sendito venis al ili, sed ne revenis.
೧೮ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.
19 Tiam li sendis duan rajdanton, kaj ĉi tiu venis al ili, kaj diris: Tiele diras la reĝo: Ĉu ĉio estas en ordo? Jehu respondis: La ordo ne estas via afero, turnu vin kaj sekvu min.
೧೯ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
20 La gardostaranto raportis, dirante: Li venis al ili, sed ne revenis; la kondukado estas kiel kondukado de Jehu, filo de Nimŝi, ĉar li kondukas rapidege.
೨೦ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
21 Tiam Joram diris: Oni jungu! Kaj oni jungis lian ĉaron. Kaj eliris Joram, reĝo de Izrael, kaj Aĥazja, reĝo de Judujo, ĉiu sur sia ĉaro, kaj ili direktis sin renkonte al Jehu, kaj ili renkontis lin sur la kampo de Nabot, la Jizreelano.
೨೧ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
22 Kiam Joram ekvidis Jehun, li diris: Ĉu ĉio estas en ordo, Jehu? Sed tiu respondis: Kia ordo povas esti ĉe la malĉastado de via patrino Izebel kaj ĉe ŝiaj multaj sorĉaĵoj?
೨೨ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
23 Tiam Joram turnis sian manon kaj forkuris, kaj diris al Aĥazja: Perfido, ho Aĥazja!
೨೩ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
24 Sed Jehu streĉis per sia mano la pafarkon kaj pafe frapis Joramon inter liaj brakoj, kaj la sago iris tra lian koron, kaj li falis genue sur sia ĉaro.
೨೪ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
25 Kaj Jehu diris al sia altrangulo Bidkar: Prenu kaj ĵetu lin sur la kampon de Nabot, la Jizreelano; ĉar rememoru, kiel mi kaj vi sur ĉaro veturis post lia patro Aĥab kaj la Eternulo eldiris pri li jenan profetaĵon:
೨೫ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
26 Vere, diris la Eternulo, la sangon de Nabot kaj la sangon de liaj filoj Mi vidis hieraŭ, kaj Mi venĝos al vi sur ĉi tiu kampo, diris la Eternulo. Prenu do nun kaj ĵetu lin sur la kampon, konforme al la vorto de la Eternulo.
೨೬ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.
27 Kiam Aĥazja, reĝo de Judujo, tion vidis, li forkuris en la direkto al la ĝardena domo. Sed Jehu postkuris lin, kaj diris: Lin ankaŭ batu sur la ĉaro. Kaj oni frapis lin sur la altaĵo Gur, kiu estas apud Jibleam. Kaj li forkuris en Megidon kaj mortis tie.
೨೭ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
28 Kaj liaj servantoj forveturigis lin en Jerusalemon kaj enterigis lin en lia tombo kun liaj patroj en la urbo de David.
೨೮ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
29 En la jaro dek-unua de Joram, filo de Aĥab, Aĥazja ekreĝis super Judujo.
೨೯ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
30 Jehu venis al Jizreel. Kiam Izebel tion aŭdis, ŝi kolorigis siajn okulojn kaj beligis sian kapon kaj ekrigardis tra la fenestro.
೩೦ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
31 Kiam Jehu eniris en la pordegon, ŝi diris: Ĉu nun estos paco, ho Zimri, mortiginto de sia sinjoro?
೩೧ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
32 Tiam li levis sian vizaĝon al la fenestro, kaj diris: Kiu estas kun mi? kiu? Kaj ekrigardis al li du aŭ tri korteganoj.
೩೨ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.
33 Kaj li diris: Elĵetu ŝin! Kaj ili ŝin elĵetis. Kaj ŝia sango ŝprucis sur la muron kaj sur la ĉevalojn, kaj oni dispremis ŝin per la piedoj.
೩೩ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
34 Li eniris kaj manĝis kaj trinkis, kaj diris: Rigardu, kie estas tiu malbenitino, kaj enterigu ŝin, ĉar ŝi estas reĝidino.
೩೪ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
35 Kaj oni iris, por enterigi ŝin, sed oni trovis nenion de ŝi krom la kranio, la piedoj, kaj la manplatoj.
೩೫ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
36 Oni revenis kaj raportis al li. Tiam li diris: Tio estas la vorto de la Eternulo, kiun Li diris per Sia servanto Elija, la Teŝebano, nome: Sur la kampo de Jizreel la hundoj formanĝos la karnon de Izebel;
೩೬ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
37 kaj la kadavro de Izebel estos kiel sterko sur la tero sur la kampo de Jizreel, tiel, ke neniu povos diri: Tio estas Izebel.
೩೭ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.

< 2 Reĝoj 9 >