< 2 Reĝoj 1 >
1 Moab defalis de Izrael post la morto de Aĥab.
೧ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
2 Kaj Aĥazja elfalis tra la krado de sia supra ĉambro en Samario, kaj malsaniĝis. Kaj li sendis senditojn, kaj diris al ili: Iru, demandu Baal-Zebubon, la dion de Ekron, ĉu mi resaniĝos de ĉi tiu malsano.
೨ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
3 Sed anĝelo de la Eternulo diris al Elija, la Teŝebano: Leviĝu, iru renkonte al la senditoj de la reĝo de Samario, kaj diru al ili: Ĉu ne ekzistas Dio en Izrael, ke vi iras demandi Baal-Zebubon, la dion de Ekron?
೩ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
4 Pro tio tiele diras la Eternulo: De la lito, sur kiu vi kuŝiĝis, vi ne deiros, sed vi mortos. Kaj Elija foriris.
೪ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
5 Kiam la senditoj revenis al li, li diris al ili: Kial vi revenis?
೫ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
6 Kaj ili respondis al li: Viro venis renkonte al ni, kaj diris al ni: Iru, revenu al la reĝo, kiu sendis vin, kaj diru al li: Tiele diras la Eternulo: Ĉu ne ekzistas Dio en Izrael, ke vi sendas demandi Baal-Zebubon, la dion de Ekron? pro tio, de la lito, sur kiu vi kuŝiĝis, vi ne deiros, sed vi mortos.
೬ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
7 Kaj li diris al ili: Kia estas la aspekto de la viro, kiu venis renkonte al vi kaj diris al vi tiujn vortojn?
೭ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
8 Ili respondis al li: Li estas homo kovrita de haroj, kaj ledan zonon li havas ĉirkaŭ siaj lumboj. Tiam li diris: Tio estas Elija, la Teŝebano.
೮ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
9 Kaj li sendis al li kvindekestron kun lia kvindeko. Kaj tiu iris al li kaj trovis lin sidanta sur la supro de monto, kaj diris al li: Ho homo de Dio! la reĝo diris, ke vi malsupreniru.
೯ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
10 Kaj Elija respondis kaj diris al la kvindekestro: Se mi estas homo de Dio, tiam venu fajro el la ĉielo kaj ekstermu vin kaj vian kvindekon. Kaj venis fajro el la ĉielo kaj ekstermis lin kaj lian kvindekon.
೧೦ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
11 Kaj li denove sendis al li alian kvindekestron kun lia kvindeko. Kaj tiu ekparolis kaj diris al li: Ho homo de Dio! tiele diras la reĝo: Malsupreniru rapide.
೧೧ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
12 Kaj Elija respondis kaj diris al ili: Se mi estas homo de Dio, tiam venu fajro el la ĉielo kaj ekstermu vin kaj vian kvindekon. Kaj venis fajro de Dio el la ĉielo kaj ekstermis lin kaj lian kvindekon.
೧೨ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
13 Kaj li denove sendis triafoje kvindekestron kun lia kvindeko. Kaj la tria kvindekestro iris, kaj venis kaj fleksis siajn genuojn antaŭ Elija, kaj ekpetegis lin kaj diris al li: Ho homo de Dio! mia animo kaj la animo de ĉi tiuj kvindek viaj servantoj havu do ian valoron antaŭ viaj okuloj.
೧೩ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
14 Jen venis fajro el la ĉielo kaj ekstermis la du antaŭajn kvindekestrojn kaj iliajn kvindekojn; nun mia animo havu ian valoron antaŭ viaj okuloj.
೧೪ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
15 Tiam anĝelo de la Eternulo diris al Elija: Iru kun li, ne timu lin. Kaj li leviĝis, kaj iris kun li al la reĝo.
೧೫ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
16 Kaj li ekparolis al li: Tiele diras la Eternulo: Pro tio, ke vi sendis senditojn, por demandi Baal-Zebubon, la dion de Ekron, kvazaŭ ne ekzistus Dio en Izrael, por demandi Lian vorton, tial de la lito, sur kiu vi kuŝiĝis, vi ne deiros, sed vi mortos.
೧೬ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
17 Kaj li mortis, konforme al la vorto de la Eternulo, kiun eldiris Elija. Kaj anstataŭ li ekreĝis Jehoram, en la dua jaro de Jehoram, filo de Jehoŝafat, reĝo de Judujo; ĉar li ne havis filon.
೧೭ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
18 La cetera historio de Aĥazja, kion li faris, estas priskribita en la libro de kroniko de la reĝoj de Izrael.
೧೮ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.