< 2 Samuel 16 >
1 Kiam David iom malsupreniris de la supro, jen venis al li renkonte Ciba, la servanto de Mefiboŝet, kun paro da selitaj azenoj, sur kiuj estis ducent panoj kaj cent sekvinberaj kukoj kaj cent sekigitaj fruktoj kaj felsako kun vino.
೧ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
2 Kaj la reĝo diris al Ciba: Por kio tio estas kun vi? Kaj Ciba respondis: La azenoj estas por la domo de la reĝo, por rajdi sur ili, kaj la pano kaj la fruktoj por la servantoj por manĝi, kaj la vino por trinki por la laciĝintoj en la dezerto.
೨ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
3 Kaj la reĝo diris: Kie estas la filo de via sinjoro? Ciba respondis al la reĝo: Li sidas en Jerusalem, ĉar li diras: Nun la domo de Izrael redonos al mi la regnon de mia patro.
೩ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು
4 Tiam la reĝo diris al Ciba: Nun al vi apartenu ĉio, kion havas Mefiboŝet. Kaj Ciba diris: Mi adorkliniĝas; mi akiru vian favoron, mia sinjoro, ho reĝo.
೪ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
5 Kiam la reĝo David venis ĝis Baĥurim, jen el tie eliras viro el la familio de la domo de Saul; lia nomo estis Ŝimei, filo de Gera; elirante, li senĉese insultadis.
೫ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
6 Li ĵetis ŝtonojn sur Davidon kaj sur ĉiujn servantojn de la reĝo David; la tuta popolo kaj ĉiuj fortuloj estis dekstre kaj maldekstre de li.
೬ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
7 Kaj tiel parolis Ŝimei, insultante: For, for, sangavidulo, malbonagulo!
೭ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,
8 la Eternulo revenigis sur vin la tutan sangon de la domo de Saul, sur kies loko vi fariĝis reĝo, kaj la Eternulo transdonis la regnon en la manon de via filo Abŝalom; tion vi havas pro via malboneco, ĉar vi estas sangavidulo.
೮ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.
9 Tiam Abiŝaj, filo de Ceruja, diris al la reĝo: Kial insultu tiu senviva hundo mian sinjoron, la reĝon? permesu al mi iri kaj dehaki lian kapon.
೯ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.
10 Sed la reĝo diris: Kiel tio koncernas min kaj vin, filoj de Ceruja? li insultu; ĉar la Eternulo diris al li: Insultu Davidon. Kiu povas diri: Kial vi tion faras?
೧೦ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
11 Kaj David diris al Abiŝaj kaj al ĉiuj siaj servantoj: Jen mia filo, kiu eliris el mia interno, atencas mian animon; tiom pli tion povas fari nun la Benjamenido; lasu lin, kaj li insultu, ĉar la Eternulo tion ordonis al li.
೧೧ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
12 Eble la Eternulo vidos mian mizeron, kaj la Eternulo repagos al mi bonon anstataŭ lia hodiaŭa insultado.
೧೨ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
13 Kaj David kun siaj homoj daŭrigis sian vojon. Kaj Ŝimei iris laŭ la deklivo de la monto, kontraŭ li, iris kaj insultis, ĵetadis ŝtonojn sur lin, kaj ŝutadis sur lin teron.
೧೩ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.
14 La reĝo kaj la tuta popolo, kiu estis kun li, venis lacaj kaj ripozis tie.
೧೪ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.
15 Dume Abŝalom kaj ĉiuj Izraelidoj venis en Jerusalemon, kaj Aĥitofel kun li.
೧೫ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.
16 Kiam Ĥuŝaj, la Arkano, amiko de David, venis al Abŝalom, li diris al Abŝalom: Vivu la reĝo! vivu la reĝo!
೧೬ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.
17 Kaj Abŝalom diris al Ĥuŝaj: Tia estas via amo al via amiko! kial vi ne iris kun via amiko?
೧೭ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
18 Sed Ĥuŝaj respondis al Abŝalom: Ne, sed kiun elektis la Eternulo kaj ĉi tiu popolo kaj ĉiuj Izraelidoj, al tiu mi apartenos, kaj kun li mi restos.
೧೮ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.
19 Due, kiun mi servos? ĉu ne lian filon? kiel mi servis vian patron, tiel mi estos al vi.
೧೯ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.
20 Tiam Abŝalom diris al Aĥitofel: Konsiliĝu inter vi, kion ni devas fari.
೨೦ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
21 Kaj Aĥitofel diris al Abŝalom: Eniru al la kromvirinoj de via patro, kiujn li restigis, por gardi la domon. Kiam ĉiuj Izraelidoj aŭdos, ke vi abomenigis al vi vian patron, tiam fortiĝos la manoj de ĉiuj, kiuj estas kun vi.
೨೧ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.
22 Tiam oni starigis por Abŝalom tendon sur la tegmento, kaj Abŝalom eniris al la kromvirinoj de sia patro antaŭ la okuloj de ĉiuj Izraelidoj.
೨೨ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.
23 La konsiloj de Aĥitofel, kiujn li donadis en tiu tempo, havis tian valoron, kiel se oni demandus la decidon de Dio; tiaj estis ĉiuj konsiloj de Aĥitofel, kiel por David, tiel ankaŭ por Abŝalom.
೨೩ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.