< Eliro 14 >
1 Kaj la Eternulo ekparolis al Moseo, dirante:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ
2 Diru al la Izraelidoj, ke ili iru returne, kaj starigu sian tendaron antaŭ Pi-Haĥirot, inter Migdol kaj la maro, apud Baal-Cefon; tie ili stariĝu tendare super la maro.
೨“ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
3 Faraono diros pri la Izraelidoj: Ili perdis la vojon en la lando, la dezerto ilin ŝlosis.
೩ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
4 Kaj Mi obstinigos la koron de Faraono, kaj li kuros post ili; kaj Mi gloriĝos per Faraono kaj per lia tuta militistaro, kaj la Egiptoj sciiĝos, ke Mi estas la Eternulo. Kaj ili faris tiel.
೪ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
5 Kiam oni diris al la reĝo de Egiptujo, ke la popolo forkuris, tiam la koro de Faraono kaj de liaj servantoj turniĝis kontraŭ la popolon, kaj ili diris: Kion ni faris, forliberiginte la Izraelidojn de servado al ni?
೫ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.
6 Kaj li jungis sian ĉaron kaj prenis kun si sian popolon.
೬ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
7 Kaj li prenis sescent plej bonajn ĉarojn kaj ĉiujn ĉarojn de Egiptujo kaj la ĉefojn de la tuta militistaro.
೭ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
8 Kaj la Eternulo obstinigis la koron de Faraono, la reĝo de Egiptujo, kaj li postkuris la Izraelidojn; sed la Izraelidojn elirigis mano alta.
೮ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
9 La Egiptoj postkuris ilin, kaj ĉiuj ĉevaloj kaj ĉaroj de Faraono kaj liaj rajdantoj kaj lia militistaro atingis ilin, kiam ili staris tendare super la maro, apud Pi-Haĥirot antaŭ Baal-Cefon.
೯ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
10 Kiam Faraono alproksimiĝis, tiam la Izraelidoj levis siajn okulojn, kaj ekvidis, ke jen la Egiptoj iras post ili; kaj ili tre ektimis, kaj la Izraelidoj ekkriis al la Eternulo.
೧೦ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
11 Kaj ili diris al Moseo: Ĉu ne ekzistis tomboj en Egiptujo, ke vi prenis nin, por morti en la dezerto? kion vi faris al ni, elkondukinte nin el Egiptujo?
೧೧ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
12 Tion ni diris ja al vi en Egiptujo: Lasu nin, kaj ni servu la Egiptojn; ĉar pli bone estus por ni servi la Egiptojn, ol morti en la dezerto.
೧೨ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.
13 Tiam Moseo diris al la popolo: Ne timu; staru, kaj vidu la savon de la Eternulo, kiun Li faros al vi hodiaŭ; ĉar la Egiptojn, kiujn vi vidas hodiaŭ, vi eterne neniam plu vidos.
೧೩ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
14 La Eternulo militos por vi, kaj vi silentu.
೧೪ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
15 Kaj la Eternulo diris al Moseo: Kion vi krias al Mi? diru al la Izraelidoj, ke ili ekiru.
೧೫ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.
16 Kaj vi levu vian bastonon kaj etendu vian manon super la maron kaj disfendu ĝin, por ke la Izraelidoj iru tra la mezo de la maro sur seka tero.
೧೬ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
17 Kaj jen, Mi obstinigos la korojn de la Egiptoj, kaj ili iros post vi; kaj Mi gloriĝos per Faraono kaj per lia tuta militistaro, per liaj ĉaroj kaj liaj rajdantoj.
೧೭ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
18 Kaj la Egiptoj sciiĝos, ke Mi estas la Eternulo, kiam Mi gloriĝos per Faraono, per liaj ĉaroj kaj liaj rajdantoj.
೧೮ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.
19 Kaj la Dia anĝelo, kiu iradis antaŭ la tendaro de la Izraelidoj, formoviĝis kaj ekiris post ili; kaj la nuba kolono formoviĝis de antaŭ ili kaj stariĝis post ili;
೧೯ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
20 kaj ĝi aperis inter la tendaro de la Egiptoj kaj la tendaro de la Izraelidoj, kaj ĝi estis nubo malluma, kaj lumis dum la nokto tiamaniere, ke unuj al la aliaj ne povis alproksimiĝi dum la tuta nokto.
೨೦ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
21 Kaj Moseo etendis sian manon super la maron; kaj la Eternulo pelis la maron per forta orienta vento dum la tuta nokto kaj faris la maron seka tero; kaj la akvo disfendiĝis.
೨೧ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
22 Kaj la Izraelidoj ekiris tra la mezo de la maro sur seka tero, kaj la akvo estis por ili muro dekstre kaj maldekstre.
೨೨ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
23 Kaj la Egiptoj postkuris kaj venis post ili, ĉiuj ĉevaloj de Faraono, liaj ĉaroj kaj liaj rajdantoj, en la mezon de la maro.
೨೩ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
24 Kiam venis la matena gardotempo, la Eternulo ekrigardis la tendaron de la Egiptoj el la fajra kaj nuba kolono, kaj Li tumultigis la tendaron de la Egiptoj.
೨೪ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
25 Kaj Li depuŝis la radojn de iliaj ĉaroj kaj malrapidigis ilian iradon. Tiam la Egiptoj diris: Ni forkuru for de la Izraelidoj, ĉar la Eternulo militas por ili kontraŭ la Egiptoj.
೨೫ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.
26 Kaj la Eternulo diris al Moseo: Etendu vian manon super la maron, por ke la akvo revenu sur la Egiptojn, sur iliajn ĉarojn kaj iliajn rajdantojn.
೨೬ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
27 Kaj Moseo etendis sian manon super la maron, kaj la maro revenis en la komenco de la mateno, sur sian lokon, kaj la Egiptoj kuris renkonte al ĝi. Kaj la Eternulo ĵetis la Egiptojn en la mezon de la maro.
೨೭ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
28 Kaj la akvo revenis, kaj kovris la ĉarojn kaj la rajdantojn de la tuta militistaro de Faraono, kiu venis post ili en la maron; ne restis el ili eĉ unu.
೨೮ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
29 Sed la Izraelidoj iris sur seka tero tra la mezo de la maro, kaj la akvo estis por ili muro dekstre kaj maldekstre.
೨೯ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
30 Kaj la Eternulo savis en tiu tago la Izraelidojn el la mano de la Egiptoj; kaj la Izraelidoj vidis la Egiptojn mortintaj sur la bordo de la maro.
೩೦ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
31 Kaj la Izraelidoj vidis la grandan manon, kiun la Eternulo aperigis sur la Egiptoj, kaj la popolo ektimis la Eternulon kaj ekkredis al la Eternulo kaj al Lia sklavo Moseo.
೩೧ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.