< Eliro 30 >
1 Kaj faru altaron, por fumigi incenson; el akacia ligno faru ĝin.
“ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.
2 Unu ulno estu ĝia longo, kaj unu ulno ĝia larĝo; ĝi estu kvarangula; kaj du ulnoj estu ĝia alto; kornoj elstaru el ĝi.
ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿರಬೇಕು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಬೇಕು.
3 Kaj tegu ĝin per pura oro, ĝian supran platon kaj ĝiajn flankojn ĉirkaŭe kaj ĝiajn kornojn; kaj faru al ĝi oran kronon ĉirkaŭe.
ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
4 Kaj du orajn ringojn faru al ĝi sub ĝia krono, sur ĝiaj du lateroj; sur du flankoj faru ilin; kaj ili estu ingoj por stangoj, per kiuj oni portu ĝin.
ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಬೇಕು. ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಬೇಕು.
5 Kaj faru la stangojn el akacia ligno, kaj tegu ilin per oro.
ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.
6 Kaj starigu ĝin antaŭ la kurteno, kiu estas antaŭ la kesto de atesto, kontraŭ la fermoplato de la kesto de atesto, kie Mi aperados al vi.
ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.
7 Kaj Aaron incensadu sur ĝi aroman incenson; ĉiumatene, kiam li ordigos la lucernojn, li incensu.
“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.
8 Kaj kiam Aaron ekbruligos la lucernojn ĉirkaŭ vespero, li incensu; ĝi estu ĉiama incensado antaŭ la Eternulo en viaj generacioj.
ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.
9 Ne alportu sur ĝi incenson alian, nek bruloferon nek donoferon, kaj verŝoferon ne verŝu sur ĝin.
ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
10 Kaj ĉiopardonan oferon Aaron alportos sur ĝiaj kornoj unu fojon en la jaro; el la sango de la ĉiopardona pekofero unu fojon en jaro li alportu sur ĝi ĉiopardonan oferon en viaj generacioj; tio estos plej granda sanktaĵo antaŭ la Eternulo.
ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”
11 Kaj la Eternulo ekparolis al Moseo, dirante:
ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,
12 Kiam vi kalkulos la kapojn de la Izraelidoj, tiam ĉiu donu liberigan pagon por sia animo al la Eternulo, kiam ili estos kalkulataj; kaj tiam ne estos inter ili epidemio dum la kalkulado.
“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.
13 Jen kion devas doni ĉiu, kiu pasas la kalkulon: duonon de siklo laŭ la grandeco de la sankta siklo (siklo enhavas dudek gerojn); duono de siklo estu oferdono por la Eternulo.
ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
14 Ĉiu, kiu pasas la kalkulon, de la aĝo de dudek jaroj kaj pli, devas doni la oferdonon al la Eternulo.
ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.
15 La riĉulo ne donu pli kaj la malriĉulo ne donu malpli ol duonon de siklo, donante la oferdonon por la Eternulo, por liberigi viajn animojn.
ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
16 Kaj prenu la monon de la liberigo de la Izraelidoj kaj uzu ĝin por la servado en la tabernaklo de kunveno, kaj tio estos por la Izraelidoj kiel memorigaĵo antaŭ la Eternulo, por liberigi viajn animojn.
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.
17 Kaj la Eternulo ekparolis al Moseo, dirante:
ಯೆಹೋವ ದೇವರು ಮೋಶೆಗೆ,
18 Faru kupran lavujon kun kupra piedestalo, por lavado; kaj starigu ĝin inter la tabernaklo de kunveno kaj la altaro, kaj enverŝu tien akvon.
“ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.
19 Kaj Aaron kaj liaj filoj lavu per ĝi siajn manojn kaj piedojn:
ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
20 kiam ili iros en la tabernaklon de kunveno, ili lavu sin per akvo, por ke ili ne mortu; aŭ kiam ili alproksimiĝos al la altaro, por servi, por incensi fajroferon al la Eternulo,
ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.
21 ili lavu siajn manojn kaj piedojn, por ke ili ne mortu; kaj tio estu por ili leĝo eterna, por li kaj por lia idaro en iliaj generacioj.
ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.
22 Plue la Eternulo ekparolis al Moseo, dirante:
ಯೆಹೋವ ದೇವರು ಮೋಶೆಗೆ,
23 Prenu al vi plej bonajn aromaĵojn: da bonodora mirho kvincent siklojn, kaj da aroma cinamo duonon de tio, ducent kvindek, kaj da aroma kano ducent kvindek,
“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,
24 kaj da kasio kvincent siklojn laŭ la mezuro de la sankta siklo, kaj da olivoleo unu hinon.
ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,
25 Kaj faru el tio oleon por sanktoleado, kunmetitan ŝmiraĵon laŭ la arto de la ŝmiraĵisto; ĝi estu oleo por sanktoleado.
ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.
26 Kaj sanktoleu per ĝi la tabernaklon de kunveno kaj la keston de atesto,
ಅದರಿಂದ ಸಭೆಯ ಗುಡಾರವನ್ನೂ ಒಡಂಬಡಿಕೆಯ ಮಂಜೂಷವನ್ನೂ
27 kaj la tablon kaj ĉiujn ĝiajn apartenaĵojn, kaj la kandelabron kaj ĝiajn apartenaĵojn, kaj la altaron de incensado,
ಮೇಜನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಧೂಪದ ವೇದಿಯನ್ನೂ
28 kaj la altaron de bruloferoj kaj ĉiujn ĝiajn apartenaĵojn, kaj la lavujon kaj ĝian piedestalon.
ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು.
29 Kaj sanktigu ilin, ke ili fariĝu plejsanktaĵo; ĉiu, kiu ektuŝos ilin, sanktiĝos.
ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.
30 Kaj Aaronon kaj liajn filojn sanktoleu, kaj sanktigu ilin, ke ili estu Miaj pastroj.
“ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.
31 Kaj al la Izraelidoj diru jene: Tio estu por Mi oleo de sanktoleado en viaj generacioj.
ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.
32 Sur homan karnon ĝi ne estu verŝata, kaj laŭ ĝia konsisto ne faru ion similan; ĝi estas sankta, ĝi estu sankta por vi.
ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು.
33 Se iu konsistigos ion similan kaj ŝmiros per ĝi laikon, li ekstermiĝu el sia popolo.
ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.
34 Kaj la Eternulo diris al Moseo: Prenu al vi aromaĵon: balzamon kaj stakton kaj galbanon bonodoran kaj puran olibanon, po egalaj partoj el ĉio;
ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
35 kaj faru el tio incensaĵon kunmetitan laŭ la arto de la ŝmiraĵisto, bone frotmiksitan, puran, sanktan.
ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.
36 Kaj pistu el tio subtilan pulvoron, kaj metu iom el ĝi antaŭ la keston de atesto en la tabernaklo de kunveno, kie Mi aperados al vi; plejsanktaĵo ĝi estu por vi.
ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.
37 Kaj laŭ la incensaĵo, kiun vi faros, ne faru al vi alian similan; sankta ĝi estu al vi por la Eternulo.
ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು.
38 Se iu faros ion similan, por odorigi per ĝi, li ekstermiĝos el sia popolo.
ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”