< Jeĥezkel 42 >
1 Kaj li elkondukis min sur la korton eksteran, kiu estis en norda direkto; kaj li venigis min al la ofica ĉambro, kiu estis kontraŭ la placo kaj kontraŭ la konstruaĵo norde.
೧ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.
2 Ĝia longo ĝis la norda pordo estis cent ulnoj, kaj la larĝo kvindek ulnoj.
೨ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.
3 Kontraŭ la dudek ulnoj de la interna korto kaj kontraŭ la pavimo de la ekstera korto estis galerio apud galerio trietaĝe.
೩ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.
4 Kaj antaŭ la oficaj ĉambroj estis pasejo, havanta la larĝon de dek ulnoj kaj internen unu ulnon; iliaj pordoj malfermiĝadis norden.
೪ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.
5 La supraj ĉambroj estis malpli ampleksaj, ĉar la galerioj iom deprenis de ili kompare kun la malsupraj kaj mezaj partoj de la konstruaĵo.
೫ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.
6 Ĉar ili estis trietaĝaj kaj ili ne havis kolonojn kiel la kolonoj de la kortoj, tial ili estis malgrandigitaj kompare kun la malsupraj kaj mezaj, komencante de la tero.
೬ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.
7 Kaj la muro ekster la oficaj ĉambroj, en la direkto al la ekstera korto, havis antaŭ la ĉambroj la longon de kvindek ulnoj.
೭ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.
8 Ĉar la longo de la ĉambroj, turnitaj al la ekstera korto, estis kvindek ulnoj, tial la spaco antaŭ la templo estis cent ulnoj.
೮ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು.
9 Kaj malsupre por tiuj ĉambroj estis enirejo de oriente, por ke oni povu veni al ili el la ekstera korto.
೯ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು.
10 Laŭlarĝe de la muro de la korto en la direkto al oriento, antaŭ la placo kaj antaŭ la konstruaĵo estis ĉambroj.
೧೦ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.
11 Kaj pasejo antaŭ ili estis tia sama, kiel antaŭ la ĉambroj, kiuj estis norde, kaj tiaj samaj estis ilia longo kaj larĝo, ĉiuj iliaj eliroj kaj ilia aranĝo kaj iliaj pordoj.
೧೧ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.
12 Kaj simile al la pordoj de la ĉambroj turnitaj suden ankaŭ ĉe la orientaj ĉambroj estis enira pordo ĉe la komenco de la vojo, de tiu vojo, kiu iris laŭlonge de la muro.
೧೨ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
13 Kaj li diris al mi: La ĉambroj nordaj kaj la ĉambroj sudaj, kiuj estas antaŭ la placo, estas ĉambroj sanktaj, en kiuj la pastroj, starantaj proksime al la Eternulo, konsumas la plej sanktajn oferojn; tie ili kuŝigas la plej sanktajn oferojn kaj la farunoferon kaj pekoferon kaj kulpoferon, ĉar la loko estas sankta.
೧೩ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.
14 Kiam la pastroj eniris ĉi tien, ili devas ne eliri el la sanktejo sur la eksteran korton, antaŭ ol ili restigis ĉi tie siajn vestojn, en kiuj ili faris la servadon, ĉar tiuj vestoj estas sanktaj; ili metu sur sin aliajn vestojn, kaj tiam ili povas iri al lokoj de la popolo.
೧೪ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು.
15 Kiam li finis la mezuradon de la interna domo, li elkondukis min tra la pordego, kiu estis turnita orienten, kaj mezuris la domon ĉe ĉiuj flankoj.
೧೫ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.
16 Li mezuris la orientan flankon per la mezura stango, kvincent mezurajn stangojn ĉirkaŭe.
೧೬ಪೂರ್ವದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
17 Li mezuris la nordan flankon, ankaŭ kvincent mezurajn stangojn ĉirkaŭe.
೧೭ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
18 La sudan flankon li mezuris, ankaŭ kvincent mezurajn stangojn.
೧೮ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
19 Li turnis sin al la okcidenta flanko, kaj tie ankaŭ mezuris kvincent mezurajn stangojn.
೧೯ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
20 De kvar flankoj li mezuris; la muro ĉirkaŭe havis kvincent stangojn da longo kaj kvincent stangojn da larĝo, por apartigi la sanktaĵon de la nesanktaĵo.
೨೦ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.