< Ijob 25 >
1 Ekparolis Bildad, la Ŝuĥano, kaj diris:
೧ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
2 Regado kaj timigo estas ĉe Li, Kiu faras pacon en Siaj altaj sferoj.
೨“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
3 Ĉu oni povas kalkuli Liajn taĉmentojn? Kaj super kiu ne leviĝas Lia lumo?
೩ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
4 Kiel povas homo esti prava antaŭ Dio? Kaj kiel naskito de virino povas esti pura?
೪ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
5 Vidu, eĉ la luno ne estas hela Kaj la steloj ne estas puraj antaŭ Liaj okuloj:
೫ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
6 Des pli homo, la vermo! Kaj homido, la tineo!
೬ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”