< Psalmaro 57 >
1 Al la ĥorestro. Por Al-taŝĥet. Verko de David, kiam li forkuris de Saul en la kavernon. Korfavoru min, ho Dio, korfavoru min; Ĉar ĉe Vi rifuĝas mia animo, Kaj sub la ombro de Viaj flugiloj mi min kaŝas, Ĝis pasos la mizeroj.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2 Mi vokas al Dio Plejalta, Al Dio, kiu decidas pri mi.
೨ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3 Li sendu el la ĉielo kaj helpu min, Li, kiu hontigas miajn persekutanton; (Sela) Dio sendu Sian favoron kaj Sian veron.
೩ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; (ಸೆಲಾ) ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4 Mia animo estas inter leonoj; Mi kuŝas inter homidoj avidaj, kies dentoj estas ponardegoj kaj sagoj, Kaj kies lango estas akra glavo.
೪ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
5 Altiĝu super la ĉielo, ho Dio; Via gloro estu super la tuta tero.
೫ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6 Reton ili metis antaŭ miaj piedoj; Ili premis mian animon; Ili fosis antaŭ mi foson, Sed ili mem falis en ĝin. (Sela)
೬ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. (ಸೆಲಾ)
7 Fortika estas mia koro, ho Dio, fortika estas mia koro; Mi kantos kaj gloros.
೭ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
8 Vekiĝu, mia honoro, vekiĝu, psaltero kaj harpo; Mi vekos la matenan ĉielruĝon.
೮ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
9 Mi gloros Vin, ho mia Sinjoro, inter la popoloj; Mi prikantos Vin inter la gentoj.
೯ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10 Ĉar granda ĝis la ĉielo estas Via boneco, Kaj ĝis la nuboj estas Via vero.
೧೦ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11 Altiĝu super la ĉielo, ho Dio; Via gloro estu super la tuta tero.
೧೧ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.