< Psalmaro 87 >

1 De la Koraĥidoj. Psalmo-kanto. Lia fundamento estas sur la sanktaj montoj.
ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
2 La Eternulo amas la pordegojn de Cion Pli ol ĉiujn loĝejojn de Jakob.
ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3 Gloraĵojn Li rakontas pri vi, ho urbo de Dio. (Sela)
ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
4 Mi parolas al miaj konatoj pri Egiptujo kaj Babel, Ankaŭ pri Filiŝtujo kaj Tiro kun Etiopujo: Jen tiu tie naskiĝis.
“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5 Sed pri Cion oni diras: Tiu kaj tiu tie naskiĝis, Kaj Li, la Plejaltulo, ĝin fortikigas.
ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6 La Eternulo notos, enskribante la popolojn: Ĉi tiu tie naskiĝis. (Sela)
ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. (ಸೆಲಾ)
7 Kaj la kantistoj kaj muzikistoj: Ĉiuj miaj fontoj estas en Vi.
ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

< Psalmaro 87 >