< Psalmaro 92 >
1 Psalmo-kanto por la tago sabata. Bone estas glori la Eternulon Kaj prikanti Vian nomon, ho Plejaltulo;
೧ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
2 Rakonti matene pri Via boneco Kaj nokte pri Via fideleco,
೨ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3 Sur dekkorda instrumento kaj sur psaltero, Per solenaj sonoj de harpo.
೩ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4 Ĉar Vi ĝojigis min, ho Eternulo, per Viaj agoj; La farojn de Viaj manoj mi prikantos.
೪ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5 Kiel grandaj estas Viaj faroj, ho Eternulo! Tre profundaj estas Viaj pensoj.
೫ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6 Malklerulo ne scias, Kaj malsaĝulo tion ne komprenas.
೬ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7 Kiam malvirtuloj verdestas kiel herbo Kaj ĉiuj malbonaguloj floras, Tio kondukas al ilia ekstermiĝo por eterne.
೭ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8 Kaj Vi estas alta eterne, ho Eternulo.
೮ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9 Ĉar jen Viaj malamikoj, ho Eternulo, Jen Viaj malamikoj pereas, Diskuras ĉiuj malbonaguloj.
೯ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10 Sed mian kornon Vi altigas kiel la kornon de bubalo; Mi estas oleita per freŝa oleo.
೧೦ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11 Kaj mia okulo rigardas miajn malamikojn; Pri la malbonaguloj, miaj kontraŭuloj, aŭdas miaj oreloj.
೧೧ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
12 Virtulo verdestas, kiel palmo, Staras alte, kiel cedro sur Lebanon.
೧೨ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
13 Plantitaj en la domo de la Eternulo, Ili verdestas en la kortoj de nia Dio.
೧೩ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
14 Ili floras ankoraŭ en la maljuneco, Estas sukplenaj kaj freŝaj,
೧೪ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
15 Por sciigi, ke la Eternulo estas justa, Mia fortikaĵo, kaj ne ekzistas en Li maljusteco.
೧೫ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.