< Johannese 17 >
1 Pärast neid sõnu tõstis Jeesus pilgu taeva poole ja ütles: „Isa, tund on kätte jõudnud, austa oma Poega, et Poeg võiks austada sind!
೧ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
2 Sest sa oled andnud talle meelevalla kõigi inimeste üle, et ta annaks igavese elu kõigile, kelle sa oled talle andnud. (aiōnios )
೨ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. (aiōnios )
3 Igavene elu aga on see, kui nad tunnevad sind, ainsat tõelist Jumalat, ning Jeesust Kristust, kelle sina oled läkitanud. (aiōnios )
೩ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. (aiōnios )
4 Ma olen austanud sind maa peal, viies lõpule töö, mille sa andsid mulle teha.
೪ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
5 Nüüd, Isa, austa mind enda juures austusega, mis kuulus mulle enne maailma algust sinu juures!
೫ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
6 Ma olen näidanud sind inimestele, keda sa oled andnud mulle maailmast. Nad kuulusid sulle, sina andsid nad mulle ja nad on kuulanud su sõna.
೬“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
7 Nüüd nad teavad, et kõik, mis sina oled andnud minule, tuleb sinult.
೭ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8 Sest ma olen andnud neile sõnad, mis sa mulle andsid, ja nad on need vastu võtnud. Nad teadsid kindlalt, et ma tulin sinu juurest, ja nad uskusid, et sina saatsid mu.
೮ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತುನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
9 Nende pärast ma palun. Maailma pärast ma ei palu, küll aga nende pärast, keda sa oled mulle andnud, sest nad kuuluvad sulle.
೯ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10 Kõik, kes on minu päralt, on sinu päralt, ja kes on sinu päralt, on minu päralt. Nende kaudu olen ma austatud.
೧೦ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11 Ma ei jää enam kauemaks maailma. Nemad on veel maailmas, aga mina tulen sinu juurde. Püha Isa, hoia neid oma nime väega, selle nime, mis sa mulle andsid, et nad saaksid olla üks nagu mina ja sina oleme üks.
೧೧ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12 Niikaua kui ma olin nendega koos, kaitsesin ja hoidsin ma neid sinu nimes, mis sa mulle andsid. Ükski neist ei läinud kaduma peale ühe, kes läks hukatusse selleks, et Kiri läheks täide.
೧೨ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
13 Ma tulen nüüd sinu juurde, aga räägin neid sõnu veel maailmas olles, et minu rõõm neis oleks täielik.
೧೩“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14 Mina olen andnud neile sinu sõna ja maailm on neid vihanud, sest nad ei ole maailmast, nii nagu minagi ei ole maailmast.
೧೪ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15 Ma ei palu, et sa nad maailmast ära võtaksid, vaid et sa hoiaksid neid kurja eest.
೧೫ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16 Nemad ei ole maailmast, nii nagu minagi ei ole maailmast.
೧೬ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17 Pühitse neid tões: sinu sõna on tõde!
೧೭ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18 Nagu sina läkitasid minu maailma, nii olen mina saatnud maailma nemad.
೧೮ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19 Nende pärast pühitsen ma ennast, et nemadki oleksid tõeliselt pühitsetud.
೧೯ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
20 Kuid ma ei palu ainult nende, vaid kõikide pärast, kes nende sõnumi läbi hakkavad minusse uskuma,
೨೦“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21 et nad kõik oleksid üks. Nagu sina, Isa, oled minus ja mina olen sinus, nõnda olgu nemadki meis. Et maailm usuks, et sina oled mu läkitanud.
೨೧ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
22 Mina olen andnud neile selle au, mille sina andsid mulle, et nad oleksid üks, nagu meiegi oleme üks,
೨೨ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23 mina neis ja sina minus. Nii et nad võiksid saada täiesti üheks. Siis maailm teab, et sina saatsid minu ja oled armastanud neid, nii nagu sa oled armastanud mind.
೨೩ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
24 Isa, ma tahan, et ka need, keda sa oled mulle andnud, oleksid minuga seal, kus mina olen, ja näeksid mu au, mille sa oled andnud mulle, sest sa oled mind armastanud enne maailma loomist.
೨೪ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
25 Õiglane Isa, kuigi maailm sind ei tunne, tunnen mina sind ja nemad on ära tundnud, et sina oled minu läkitanud.
೨೫ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
26 Ma olen neile näidanud sind ja teen seda veelgi, et armastus, millega sa mind oled armastanud, oleks ka nendes ja mina oleksin nendes.“
೨೬ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.