< Matteuse 3 >

1 Neil päevil tuli Ristija Johannes, kes kuulutas Juuda kõrbes
ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,
2 ja ütles: „Parandage meelt, sest taevariik on lähedal!“
ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
3 Temast rääkiski prohvet Jesaja: „Hüüdja hääl on kõrbes: „Valmistage Issandale tee, tehke tasaseks tema teerajad!““
“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.
4 Johannesel olid seljas kaamelikarvadest rõivad ja nahkvöö vööl, aga toiduks olid tal rohutirtsud ja metsmesi.
ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 Siis läks Jeruusalemma, kogu Juudamaa ja Jordani ümbruskonna rahvas tema juurde.
ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,
6 Nad tunnistasid üles oma patud ja ta ristis nad Jordani jões.
ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
7 Aga kui ta nägi, kui palju varisere ja sadusere tema juurde ristimisele tuli, ütles ta neile: „Rästikute sugu! Kes teile andis märku põgeneda saabuva viha eest?
ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
8 Seepärast kandke meeleparandusele kohast vilja
ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
9 ja ärge mõtelge endamisi: „Meie isa on Aabraham!“Sest ma ütlen teile, Jumal võib nendest kividest äratada lapsi Aabrahamile.
ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
10 Kirves on juba pandud puude juurte külge. Iga puu, mis ei kanna head vilja, raiutakse maha ja visatakse tulle.
೧೦ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
11 Mina ristin teid veega meeleparanduseks, aga kes tuleb pärast mind, on minust vägevam. Mina pole väärt tema sandaalegi lahti siduma. Tema ristib teid Püha Vaimu ja tulega.
೧೧ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
12 Tal on tuulamiskühvel käes ja ta teeb puhtaks oma rehealuse. Ta kogub nisu aita, aga aganad ta põletab ära kustumatu tulega.“
೧೨ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
13 Sel ajal saabus Jeesus Galileast Jordani äärde, et Johannes teda ristiks.
೧೩ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.
14 Johannes püüdis keelduda, öeldes: „Mul on vaja, et sina mind ristiksid, aga sina tuled hoopis minu juurde!“
೧೪ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,
15 Jeesus aga vastas talle: „Las praegu olla nii! Nõnda on meil kohane täita kõike, mis on õige!“Siis Johannes andis talle järele.
೧೫ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
16 Kui Jeesus oli ristitud, väljus ta kohe veest, ja ennäe, taevas avanes ning ta nägi Jumala Vaimu otsekui tuvi alla laskumas ja tema peale tulemas.
೧೬ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
17 Ning taevast kostis hääl: „See on minu armas Poeg, kelle üle mul on hea meel!“
೧೭ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

< Matteuse 3 >