< Kronika 2 14 >
1 Abiya ku eye woɖii ɖe David ƒe du la me. Via ŋutsu, Asa, zu fia ɖe eteƒe eye le eƒe fiaɖuɖu ƒe ŋkekewo me la, ŋutifafa nɔ dukɔ la me ƒe ewo sɔŋ
ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.
2 elabena Asa wɔ nu si dza le Yehowa, eƒe Mawu la ƒe ŋkume.
ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.
3 Egbã trɔ̃subɔlawo ƒe vɔsamlekpui siwo nɔ togbɛawo dzi kple woƒe aƒeliwo, emu Aserim legbawo ƒu anyi
ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.
4 eye wòɖe gbe be, dukɔ blibo la nawɔ Yehowa, wo tɔgbuiwo ƒe Mawu la ƒe sewo dzi.
ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.
5 Hekpe ɖe esiawo ŋu la, eɖe ɣelegbawo ɖa le togbɛawo dzi kple dzudzɔdovɔsamlekpuiwo ɖa le Yuda duwo me. Esia ta Mawu na ŋutifafa nɔ eƒe fiaduƒe me.
ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.
6 Nu sia na wòte ŋu tso duwo eye wòɖo gli ƒo xlã wo le Yudanyigba la ƒe akpa sia akpa.
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
7 Fia Asa gblɔ na eƒe amewo be, “Esi Yehowa yra mí eye ŋutifafa le míaƒe anyigba dzi le esi míeɖo toe ta la, mina míatso duwo fifia eye míaglã wo kple gliwo, xɔ tsralawo, agbowo kple gamedetiwo.” Ale wowɔ nu siawo eye nu sia nu dze edzi nyuie.
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.
8 Aʋawɔla akpe alafa etɔ̃ tso Yuda ƒe viwo dome nɔ Fia Asa ƒe aʋakɔ me. Akpoxɔnu ɖagbitɔwo kple akplɔwo nɔ wo si. Ame akpe alafa eve blaenyi tso Benyamin ƒe viwo dome nɔ eƒe aʋakɔ la me eye akpoxɔnu gãtɔwo kple datiwo kple aŋutrɔwo nɔ wo si. Wohe aʋawɔlawo katã tso to eveawo me eye wonye kalẽtɔwo.
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
9 Zera, Kusitɔ, ho aʋa ɖe wo ŋu kple aʋakɔ gã aɖe kple tasiaɖam alafa etɔ̃ eye wova ɖo keke Maresa.
ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.
10 Asa do go yi be yeakpee eye eƒe amewo dze aʋa ɖi ɖe Zefata bali la me te ɖe Maresa ŋu.
ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
11 Fia Asa do ɣli na Mawu be, “Oo Yehowa, ame bubu aɖeke mate ŋu akpe ɖe mía ŋu o! Míate ŋu anɔ te ɖe aʋakɔ gã sesẽ sia nu o. Oo, xɔ na mí, Yehowa míaƒe Mawu elabena wò ɖeka ko ŋue míeɖo ŋu ɖo be, àxɔ na mí eye le wò ŋkɔ mee míele aʋa kpem kple futɔwo ƒe aʋakɔ gã sia. Mègana amegbetɔ siwo mele ɖeke me o la, naɖu dziwò o!”
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
12 Yehowa na Asa kple Yuda ƒe aʋakɔ la ɖu Kustɔwo dzi eye Kustɔwo si.
ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.
13 Asa ƒe amewo nya wo yi keke Gerar ke eye wofiti Kustɔwo ƒe aʋakɔ blibo la ale gbegbe be, ame ɖeka pɛ gɔ̃ hã metsi agbe o elabena Yehowa kple eƒe aʋakɔ la tsrɔ̃ wo katã. Yuda ƒe aʋakɔ la ha aboyonu geɖewo ŋutɔ.
ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.
14 Esi wonɔ Gerar la, wodze du siwo katã nɔ nuto me ma la dzi eye Yehowa na vɔvɔ̃ ɖo afi ma tɔwo. Le esia ta wogaha aboyonu geɖewo le du siawo hã me.
ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.
15 Womeha nuwo ɖeɖe ko le duawo me o, ke boŋ wogbã lãhawo ƒe agbadɔwo hã eye wokplɔ ale kple kposɔ geɖewo dzoe va Yerusalem.
ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.