< Fiawo 2 14 >

1 Le Israel fia, Yehoas, Yehoahaz ƒe vi ƒe fiaɖuɖu ƒe ƒe evelia me la, Amazia, Yoas ƒe vi zu fia le Yuda.
ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.
2 Amazia xɔ ƒe blaeve vɔ atɔ̃ ɣe ma ɣi eye wòɖu fia le Yerusalem ƒe blaeve-vɔ-asiekɛ. Dadaa ŋkɔe nye Yehoadin, ame si tso Yerusalem.
ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.
3 Amazia wɔ nu si dze Yehowa ŋu. Togbɔ be mede tɔgbuia David nu o hã la, enye fia nyui aɖe abe fofoa Yoas ene.
ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.
4 Megbã nuxeƒewo le toawo dzi o, ale ameawo gasaa vɔ eye wogadoa dzudzɔ ʋeʋĩ le afi ma kokoko.
ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
5 Esi Amazia kpɔ be fiaɖuƒe la li ke ɖe yeƒe asi me la, ewu dumegã siwo katã wu fofoa.
ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.
6 Ke mewu hlɔ̃dolawo ƒe viwo o, abe ale si Yehowa de se gblɔ woŋlɔ ɖe Mose ƒe Segbalẽa me ene bena, “Womawu fofowo ɖe viwo ƒe nu vɔ̃wo ta o, eye nenema ke womawu viwo ɖe fofowo ƒe nu vɔ̃wo ta o. Woawu ame sia ame ɖe eya ŋutɔ ko ƒe nu vɔ̃ ta.”
ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
7 Amaziae wu Edomtɔ akpe ewo le Dze Balime. Exɔ Sela du la hã eye wòtrɔ ŋkɔ nɛ bena Yɔkteel. Ŋkɔ sia tsi eŋu va se ɖe egbe.
ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
8 Gbe ɖeka la, Yuda fia, Amazia ɖo du ɖe Israel fia Yehoas, Yehoahaz ƒe vi kple Yehu tɔgbuiyɔvi la, be ne enye ŋutsu la, wòakplɔ eƒe aʋakɔ vɛ yewoawɔ aʋa.
ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.
9 Fia Yehoas do lo sia na Amazia be, “Ŋuve sue aɖe le Lebanon towo dzi gblɔ na sedati be, ‘Tsɔ viwò nyɔnu nam maɖe na vinye ŋutsu.’ Le ɣe ma ɣi tututu la, lã wɔadã aɖe va nye avuzi le ŋuve la dzi eye wògbãe ɖe anyigba.
ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.
10 Èɖu Edomtɔwo dzi eye wònye adegbeƒoƒo gã aɖe na wò. Ke aɖaŋu si maɖo na wò lae nye nàkpɔ ŋudzedze le wò dziɖuɖu ŋu eye nànɔ mia de kpoo! Nu ka ta nàhe dzɔgbevɔ̃e va ɖokuiwò kple Yuda siaa dzi?”
೧೦ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.
11 Ke Amazia gbe toɖoɖoe, ale Israel fia Yehoas ƒo ƒu aʋakɔ aɖe nu ɖe eŋu. Yoas kple Amazia ƒe aʋakɔwo do go le Bet Semes le Yuda.
೧೧ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
12 Ke Israel si Yuda eye eƒe aʋakɔ katã si yi aƒe.
೧೨ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
13 Israel fia Yehoas lé Amazia, Yuda fia, ame si nye Yoas ƒe vi, Ahazia ƒe vi le Bet Semes. Tete Yehoas yi Yerusalem eye wògbã Yerusalem ƒe gliwo ƒu anyi tso Efraimgbo la nu va se ɖe Dzogoedzigbo la gbɔ. Teƒe si wògbã la didi abe mita alafa ɖeka blaenyi ene.
೧೩ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.
14 Fia Yehoas lɔ sika kple klosalo kple sikakplu siwo le Yehowa ƒe gbedoxɔa me kple fiasã la ƒe nudzraɖoƒewo katã hekpe ɖe awɔbamewo ŋu eye wògbugbɔ yi Samaria.
೧೪ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
15 Woŋlɔ nu mamlɛawo tso Yehoas ƒe fiaɖuɖu kple eƒe aʋawɔwɔ kple Yuda fia Amazia ŋu ɖe Israel fiawo ƒe ŋutinyagbalẽ me.
೧೫ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
16 Esi Yehoas ku la, woɖii ɖe Samaria le Israel fia bubuwo gbɔ eye via Yeroboam ɖu fia ɖe eteƒe.
೧೬ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.
17 Ke Yuda fia Amazia, Yoas vi nɔ agbe ƒe wuiatɔ̃ le Israel fia Yehoas, Yehoahaz vi ƒe ku megbe.
೧೭ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
18 Woŋlɔ Amazia ƒe ŋutinya mamlɛa ɖe Yuda fiawo ƒe ŋutinyagbalẽ me.
೧೮ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
19 Woɖo nugbe ɖe eƒe agbe ŋu le Yerusalem ale wòsi yi Lakis, ke eƒe futɔwo dɔ ame ɖa woyi Lakis ɖawui le afi ma.
೧೯ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
20 Wokɔ eƒe kukua ɖe sɔwo dzi va ɖi ɖe fiawo ƒe ameɖibɔ me le Yerusalem ƒe akpa si nye Fia David ƒe du la me.
೨೦ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.
21 Wotsɔ via, Azaria ɖo fiae ɖe eteƒe, esi Azaria xɔ ƒe wuiade ko.
೨೧ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.
22 Le fofoa ƒe ku megbe la, etu Elat eye wòxɔe na Yuda.
೨೨ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.
23 Azɔ la, Yeroboam Evelia zu Israel fia le Yuda fia Amazia ƒe fiaɖuɖu ƒe ƒe wuiatɔ̃lia me. Yeroboam ɖu fia ƒe blaene-vɔ-ɖekɛ.
೨೩ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.
24 Enye fia vɔ̃ɖi aɖe le Yehowa ŋkume abe Yeroboam Gbãtɔ, Nebat ƒe vi, ame si kplɔ Israel de legbawo subɔsubɔ ƒe nu vɔ̃ me la ene.
೨೪ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
25 Yeroboam Evelia gbugbɔ Israel ƒe anyigba xɔ tso Lebo Hamat va se ɖe Araba ƒu la nu abe ale si Yehowa, Israel ƒe Mawu la gblɔe do ŋgɔ to Yona, Amitai ƒe vi, ame si nye Nyagblɔɖila tso Gat Hefer dzi la ene.
೨೫ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.
26 Nu sia va eme elabena Yehowa kpɔ xaxa gã si me Israel ɖo; kluviwo kple dzɔleaƒeawo siaa le fu kpem, evɔ xɔnametɔ aɖeke menɔ wo si o la dzi ɖa.
೨೬ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
27 Gawu la, Yehowa megblɔ be yeatutu Israel ƒe ŋkɔ ɖa le anyigba dzi o, eya ta wòto Fia Yeroboam Evelia, Yehoas ƒe vi la dzi ɖe Israel.
೨೭ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.
28 Woŋlɔ Fia Yeroboam Evelia ŋutinya, nu siwo katã wòwɔ, ŋusẽ gã si wòkpɔ, eƒe aʋawɔwɔwo kple ale si wògbugbɔ Damasko kple Hamat, du siwo Yuda xɔ le Israel si la, xɔ la ɖe Israel fiawo ƒe ŋutinyagbalẽ me.
೨೮ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
29 Esi Yeroboam Evelia ku la, woɖii ɖe Israel Fia bubuwo gbɔ eye via Zekaria zu Israel Fia yeye la.
೨೯ಯಾರೊಬ್ಬಾಮನು ಇಸ್ರಾಯೇಲರ ರಾಜರಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆಕರ್ಯನು ಅರಸನಾದನು.

< Fiawo 2 14 >