< Samuel 2 10 >

1 Le ɣeyiɣi aɖe megbe la, Amonitɔwo ƒe fia ku eye via Hanun ɖu fia ɖe eteƒe.
ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
2 David gblɔ be, “Manyo dɔ me na Hanun, Nahas ƒe vi abe ale si fofoa nyo dɔ me nam ene.” Ale David dɔ amewo be woado babaa na Hanun le fofoa ƒe ku ta. Esi David ƒe amewo va ɖo Amonitɔwo ƒe anyigba dzi la,
ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
3 Amonitɔwo ƒe amegãwo gblɔ na woƒe kplɔla Hanun be, “Ɖe nèbu be David le bubu dem ye fofo ŋu to ame siawo dɔdɔ ɖe gbɔwò be woado babaa na wò mea? Menye ɖe David dɔ ame siawo be woava tsa ŋku le anyigba la dzi eye yewoaho aʋa ɖe eŋu oa?”
ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
4 Ale Hanun lé David ƒe amewo, ƒlɔ ge afãafã na wo eye wòlã woƒe awuwo ɖe woƒe gɔnu. Ale Hanun do mɔ ameawo.
ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
5 Esi David se nya sia la, edɔ amewo woɖakpe ŋutsuawo kple gbedeasi be woatsi Yeriko va se ɖe esime woƒe ge nato elabena wodo ŋukpe wo ŋutɔ.
ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
6 Esi Amonitɔwo kpɔ be yewozu David ƒe ketɔwo la, wobia aʋawɔla akpe blaeve Aramtɔwo tso Bet Rehobnyigba kple Zobahnyigba dzi kpe ɖe ame akpe ɖeka tso Maaka fia gbɔ kple ame akpe wuieve tso Tobnyigba dzi.
ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
7 Esi David se nya sia la, eɖo Yoab kple aʋakɔ blibo la ɖa.
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
8 Amonitɔwo va nɔ woƒe dua ƒe agbo nu hena aʋawɔwɔ le esime Aramtɔwo tso Zoba kple Rehob kple ame siwo tso Tob kple Maaka nɔ wo ɖokui si le gbedzi.
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
9 Yoab kpɔ be wodze aʋa ɖe ye ŋgɔ kple ye megbe siaa, eya ta etia Israel ƒe asrafo siwo bi ɖe aʋawɔwɔ me, eye wòna woɖakpe aʋa kple Aramtɔwo.
ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
10 Ena akpa evelia si nɔ nɔvia Abisai ƒe kpɔkplɔ te la kpe aʋa kple Amonitɔwo.
೧೦ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
11 Yoab gblɔ na nɔvia be, “Ne Aramtɔwo sẽ nam akpa la, nàva kpe ɖe ŋunye, ke ne Amonitɔwo sẽ na wò akpa la, mava kpe ɖe ŋuwò.
೧೧ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
12 Lé dzi ɖe ƒo, eye na míawɔ aʋa la kalẽtɔe na míaƒe dukɔ kple míaƒe Mawu la ƒe duwo. Yehowa awɔ nu si nyo le eŋkume.”
೧೨ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
13 Ale Yoab kple eƒe aʋakɔwo lũ ɖe Aramtɔwo dzi be woakpe aʋa kpli wo eye Aramtɔwo si le wo nu.
೧೩ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
14 Esi Amonitɔwo kpɔ be Aramtɔwo nɔ sisim la, woawo hã lé du tsɔ le Abisai ŋgɔ eye woɖage ɖe du la me eya ta Yoab trɔ dzo yi Yerusalem.
೧೪ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
15 Esime Aramtɔwo kpɔ be Israelviwo ɖu yewo dzi la, wogbugbɔ ƒo ƒu wo ɖokuiwo.
೧೫ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
16 Hadadezer na Aramtɔwo tso tɔsisi la godo yi Helam eye wonɔ Sobak, Hadadezer ƒe aʋafia ƒe kpɔkplɔ te.
೧೬ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
17 Esi wogblɔ nya sia na David la, eya ŋutɔ kplɔ Israel ƒe aʋakɔ la yi Helam. Aramtɔwo ho aʋa ɖe David ŋu eye wowɔ aʋa kplii.
೧೭ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
18 Ke Aramtɔwo gasi le Israelviwo nu. David wu Aramtɔwo ƒe sɔdola alafa adre kple afɔzɔla akpe blaene. Ede abi woƒe aʋafia, Sobak hã ŋu wòku le afi ma.
೧೮ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
19 Esi Hadadezer ƒe kpeɖeŋutɔwo kpɔ be woɖu Aramtɔwo dzi la wona ta eye wozu David tenɔlawo. Tso ɣe ma ɣi la, Aramtɔwo vɔ̃na be yewoagakpe ɖe Amonitɔwo ŋu.
೧೯ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.

< Samuel 2 10 >