< Amos 5 >
1 “O! Israel ƒe aƒe, metsɔ blanuiléle dzi konyifaha sia na wò:
೧ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:
2 “Ɖetugbi Israel dze anyi, eye magafɔ akpɔ o. Wogbe nu le egbɔ le eya ŋutɔ ƒe anyigba dzi, eye ame aɖeke meli alé eƒe alɔnu afɔe ɖe tsitre o,
೨ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
3 elabena Aƒetɔ Yehowa gblɔ na Israel be, ‘Ne du aɖe ɖo ame akpe ɖeka ɖe aʋa la, ame alafa ɖeka koe agbɔ, eye du si ɖo ame alafa ɖeka ɖa la ame ewo koe agbɔ.’”
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
4 Yehowa gblɔ na Israel ƒe aƒe la be, “Midim, ne mianɔ agbe.
೪ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
5 Migati legba siwo le Betel, Gilgal alo Beerseba yome o, elabena maɖe aboyo Gilgatɔwo, eye Betel atsrɔ̃.”
೫ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
6 Midi Yehowa ne mianɔ agbe, ne menye nenema o la; miabi abe dzo ene ato Yosef ƒe aƒe dzi, afia Betel, eye ame aɖeke mate ŋu atsii o.
೬ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
7 O, mi ame siwo trɔ afia nyui tsotso wòzu vevesese, eye mietsɔ dzɔdzɔenyenye ƒu gbe ɖe anyigba!
೭ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
8 Midi ame si wɔ ɣletiviwo ƒe ha siwo woyɔna be atifieŋui, avu kple avutɔ, ame si trɔa viviti tsiɖitsiɖi wòzua kekeli, eye wòtrɔa ŋkeke wòzua zã. Eyae yɔa tsi tso atsiaƒu me be wòaho ayi dzi ahadza ɖe anyigba dzi. Aƒetɔ Yehowae nye eƒe ŋkɔ.
೮ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
9 Le aɖabaƒoƒo ɖeka me la, enana gbegblẽ vaa ame sesẽ dzi, eye wògbãa eƒe gli sesẽwo.
೯ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
10 Mielé fu ame siwo toa nyateƒe le ʋɔnu, eye miele fu nyateƒetola.
೧೦ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
11 Esi miefanya ame dahewo kple afɔ, eye mieba wo le blidzɔxɔxɔ me ta la, mianɔ kpexɔ nyui siwo tum miele la me alo ano wain tso waingble siwo dem miele la me o.
೧೧ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
12 Elabena wò nu vɔ̃wo sɔ gbɔ hetri akɔ. Menya wo katã nyuie. Èsẽa ŋuta le ame dzɔdzɔe ŋu, eye nèxɔa zãnu hetrɔa gbo ame dahe ƒe nya dzɔdzɔe,
೧೨ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
13 eya ta ame siwo nye nunyalawo la, azi ɖoɖoe le ɣeyiɣi mawo me, elabena ɣeyiɣi vɔ̃e wònye.
೧೩ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
14 Midi nyui, miasi le vɔ̃ nu ne mianɔ agbe! Ekema Yehowa, Mawu Dziƒoʋakɔwo ƒe Aƒetɔ la, anye kpeɖeŋutɔ vavã na mi abe ale si miawo ŋutɔ miegblɔ la ene.
೧೪ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
15 Mitsri nu vɔ̃ eye mialɔ̃ nyui. Mitrɔ miaƒe ʋɔnudrɔ̃ƒewo woazu afia nyui tsoƒewo. Ɖewohĩ Yehowa, Dziƒoʋakɔwo ƒe Mawu la, akpɔ nublanui na Yosef ƒe aƒe ƒe ame mamlɛawo.
೧೫ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
16 Ale Yehowa, Mawu Dziƒoʋakɔwo ƒe Aƒetɔ la gblɔe nye esi: “Avifafa anɔ kpɔdomewo, eye asiƒonu anɔ mɔ dodowo dzi. Míyɔ agbledelawo hã be woafa avi kpli mi; miyɔ konyifalawo hã vɛ be woafa avi kpli mi.
೧೬ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
17 Avifafa anɔ waingble ɖe sia ɖe me, elabena mava to afi ma akaka agbleawo.” Yehowae gblɔe.
೧೭ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
18 Baba na mi, ame siwo tsi dzi ɖe Yehowa ƒe ŋkeke la ƒe vava ŋuti. Nu ka ta mietsi dzi ɖe Yehowa ƒe ŋkeke la ƒe vava ŋuti ɖo? Ŋkeke ma anye viviti, manye kekeli o.
೧೮ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
19 Le ŋkeke ma dzi la, mianɔ abe ame si si le dzata nu ɖake ɖe sisiblisi ŋuti la ene, eye esi wòƒu du ɖo aƒe me heziɔ ɖe gli ŋuti la, da ɖui.
೧೯ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
20 Ɖe Yehowa ƒe ŋkeke la menye viviti, eye menye kekeli oa? Ɖe menye blukɔe wònye, eye keklẽ mele eme oa?
೨೦ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
21 “Melé fu miaƒe ŋkekenyuiwo, eye metsri wo. Nyemaʋẽ miaƒe takpekpewo kple ŋkekenyuiwo ase o.
೨೧“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
22 Ne miewɔ numevɔsa kple nuɖuvɔsawo nam hã la, nyemaxɔ wo o. Ne mietsɔ miaƒe lã damiwo sa vɔe nam hã la, nyemanye kɔ akpɔ wo o.
೨೨ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
23 Te wò hawo ƒe ɖiɖi ɖe megbe tso gbɔnye, wò saŋkuƒoƒowo hã le to me vem nam!
೨೩ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
24 Nya dzɔdzɔe nesi abe tsi ene, eye dzɔdzɔenyenye abe tɔʋu si memiena o ene!
೨೪ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
25 “O, Israelviwo, nyee mietsɔ lã wuwuwo kple numemewo sa vɔ na esi mienɔ gbedzi ƒe blaene sɔŋ?
೨೫ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
26 Miekɔ miaƒe fia, Sakut kple Kaiwan, miaƒe ɣletivimawu siwo ƒe nɔnɔme miewɔ na mia ɖokuiwo la ɖe dzi,
೨೬ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
27 eya ta maɖo mi ɖe aboyo me le Damasko godo.” Yehowa, ame si ŋkɔe nye Dziƒoʋakɔwo ƒe Mawu lae gblɔe.
೨೭ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.