< Hezekiel 35 >
1 Yehowa ƒe nya va nam be,
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2 “Ame vi, trɔ mo ɖe Seir to la gbɔ, gblɔ nya ɖi ɖe eŋu,
“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,
3 eye nàgblɔ be nya si Aƒetɔ Yehowa gblɔe nye, ‘Metso ɖe ŋuwò, Seir to la, mado nye asi ɖa ɖe ŋuwò, eye matsɔ wò awɔ aƒedo kple gbegbee.
ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
4 Matrɔ wò duwo woazu aƒedo, eye wò ŋutɔ àzu gbegbe. Ekema ànya be, nyee nye Yehowa.’
ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
5 “‘Esi nèlé fu nye dukɔ Israelviwo ɖikaɖika tso blema ke, eye nètsɔ wo de asi na yi le esime woƒe tohehe ɖo kɔkɔƒe la,
“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.
6 eya ta meta ɖokuinye ƒe agbe, Aƒetɔ Yehowae gblɔe, be matsɔ wò ade asi na ʋukɔkɔɖi, eye wòanɔ wò yome. Esi mèlé fu ʋukɔkɔɖi o ta la, ʋukɔkɔɖi akplɔ wò ɖo.
ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.
7 Mawɔ Seir to la aƒedo kple gbegbe, eye maɖe ame siwo vana, gadzona ɖa le wo dzi.
ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
8 Mana ame kukuwo nayɔ toawo dzi, ame siwo tsi yi nu la nayɔ wò togbɛwo dzi, wò baliwo me kple wò gbadzaƒewo katã.
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.
9 Matsɔ wò awɔ gbegbee ɖika, eye amewo maganɔ wò duwo me o. Ekema ànya be, nyee nye Yehowa.’
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.
10 “Elabena ègblɔ be, ‘Dukɔ eve kple anyigba eve siawo anye mía tɔwo, eye míaxɔ wo’ togbɔ be nye, Yehowa, menɔ afi ma hã.
“‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
11 Eya ta Aƒetɔ Yehowa ta eƒe agbe be, ‘Mawɔ na mi ɖe dziku kple ŋuʋaʋã si mieɖe fia le miaƒe fuléle wo me nu, eye mana woanyam ne medrɔ̃ ʋɔnu wo.
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
12 Ekema mianya be, nye Yehowa mese vlodoamenya siwo katã miegblɔ tso Israel ƒe towo kple togbɛwo ŋuti. Miegblɔ be, “Wozu gbegbe, eye wotsɔ wo na mí be míaɖu.”
ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.
13 Mieƒo adegbe, tsi tsitre ɖe ŋunye, miegblɔ nya vɔ̃wo bababa ɖe ŋunye, eye mese wo.
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
14 Ale Aƒetɔ Yehowa gblɔe nye esi, “Esime xexea me katã le aseye tsom la, mana nàzu gbegbe.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
15 Esi miekpɔ dzidzɔ esime Israel ƒe aƒe ƒe domenyinu zu gbegbe ta la, nu si mawɔ wòe nye àzu gbegbe, O! Seir to, wò kple Edom blibo la. Ekema mianya be nyee nye Yehowa.”’”
ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’”