< Hezekiel 6 >
1 Yehowa ƒe nya va gbɔnye be,
೧ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2 “Ame vi, trɔ mo de Israel ƒe towo; gblɔ nya ɖi ɖe wo ŋu,
೨“ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
3 eye nàgblɔ be, ‘O Israel ƒe towo, mise Aƒetɔ Yehowa ƒe nyawo. Esiae nye nya si Aƒetɔ Yehowa gblɔ na towo kple togbɛwo, na agadowo kple balimewo: mele yi tsɔ ge ɖe mia ŋu, eye magblẽ miaƒe nuxeƒewo.
೩‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
4 Woagbã miaƒe vɔsamlekpuiwo, woakaka vɔsamlekpui siwo dzi miedoa dzudzɔ ʋeʋĩ le, eye mawu miaƒe amewo le miaƒe legbawo ŋgɔ.
೪“‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.
5 Matsɔ Israelvi kukuwo amlɔ woƒe legbawo ŋgɔ, eye makaka miaƒe ƒuwo aƒo xlã miaƒe vɔsamlekpuiwo.
೫ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.
6 Afi sia afi si mianɔ la, miaƒe duwo azu aƒedo, eye woagbã miaƒe nuxeƒewo, woagbã miaƒe vɔsamlekpuiwo, eye woatsrɔ̃ wo; woagbã miaƒe legbawo, woagbã miaƒe vɔsamlekpui siwo dzi miedoa dzudzɔ ʋeʋĩ le, eye woatsrɔ̃ nu siwo miewɔ.
೬“‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.
7 Woawu miaƒe amewo le mia dome, eye mianya be nyee nye Yehowa.’”
೭ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
8 “Ke maɖe ame aɖewo ya, elabena mia dometɔ aɖewo asi le yinu ne wokaka mi ɖe anyigba dzi kple dukɔwo dome.
೮“‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
9 Ekema le dukɔ siwo me woɖe aboyo wo yi la, ame siwo asi la, aɖo ŋku dzinye. Woaɖo ŋku ale si woƒe ahasiwɔdzi siwo trɔ le yonyeme kple ale si woƒe ŋkuwo nɔ woƒe legbawo ŋu la na mese vevee la dzi, woase veve ɖe nu vɔ̃ɖi siwo wowɔ kple woƒe wɔna nyɔŋuwo katã ta.
೯ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
10 Woanya be nyee nye Yehowa; nyemedo ŋɔdzi na wo dzodzro be mahe dzɔgbevɔ̃e sia va wo dzii o.”
೧೦ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”
11 “Nya si Aƒetɔ Yehowa gblɔe nye, ‘Miƒo asikpe, mitu afɔ anyi, eye miado ɣli be, “Ao!” Le Israel ƒe aƒe la ƒe nu vɔ̃ɖiwo kple ŋunyɔnuwo katã ta, elabena yi, dɔwuame kple dɔvɔ̃ atsrɔ̃ wo.
೧೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
12 Ame si le adzɔge ʋĩi la, dɔvɔ̃ awui, ame si le kpuiƒe la, yi awui, eye ame si atsi agbe la, aku le dɔwuame ta. Alea mawɔ nye dziku ŋu dɔ ɖe wo ŋutie.
೧೨ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.
13 Ale woanya be nyee nye Yehowa, ne woƒe ame kukuwo mlɔ woƒe legbawo dome, eye ɖewo ƒo xlã woƒe vɔsamlekpuiwo le nuxeƒe ɖe sia ɖe kple to ɖe sia ɖe dzi, le ati dama kple oɖumti dama ɖe sia ɖe te, teƒe siwo katã wodoa dzudzɔ ʋeʋĩ na woƒe legbawo katã le.
೧೩ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
14 Mado nye asi ɖa ɖe wo ŋu, eye mana woƒe anyigba nazu gbegbe, tso gbegbe la to yi Dibla, afi sia afi si woanɔ. Ekema woanya be nyee nye Yehowa.’”
೧೪ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”