< Yesaya 23 >

1 Esiae nye nyagblɔɖi ɖe Tiro ŋu. Mifa konyi, o meli siwo tsa asi le Tarsis, elabena wogbã Tiro, eye aƒe alo melidzeƒe megali na mi o. Wose nya sia esi wole Kipro ke.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
2 Mizi ɖoɖoe, mi ame siwo le ƒukpo la dzi kple mi asitsala siwo tso Sidon. Mi ame siwo ƒudzidɔwɔlawo wɔ kesinɔtɔwoe,
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
3 Wotsɔ bli tso Sidon, nuŋeŋe si tso Nil Nutowo me to tɔ gãwo dzi va Tiro abe adzɔnuwo ene, ale Tiro zu asiɖiƒe na dukɔwo.
ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
4 Ŋu nekpe wò, O! Sidon, wò mɔ sesẽ si le ƒuta, elabena atsiaƒu gblɔ na wò be, “Nyemelé ku kpɔ alo dzi vi kpɔ o. Nyemenyi ŋutsuviwo alo nyɔnuviwo kpɔ o.”
ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.
5 Ne gbe va ɖo Egipte la, woaxa nu vevie tso nu si wose tso Tiro ŋuti.
ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
6 Mitso ƒu va Tarsis; mifa konyi, mi ame siwo le ƒukpo la dzi.
ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
7 Alea wò blemadu si yɔ fũu kple dzidzɔkpɔkpɔ, wo ame si zɔ mɔ yi didiƒenyigbawo dzi la va zue nye esia?
ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
8 Ame kae ɖo nugbe sia ɖe Tiro ŋu, ame si ɖɔa fiakuku na amewo, eƒe adzɔdolawo nye amegãwo, eye eƒe asitsalawo nye ame xɔŋkɔwo le anyigba dzii?
ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
9 Yehowa, Dziƒoʋakɔwo ƒe Aƒetɔ lae ɖo esia be yeaɖi gbɔ̃ atsyɔ̃ɖoɖowo katã ƒe dada, eye yeabɔbɔ ame xɔŋkɔwo katã ɖe anyi le anyigba dzi.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
10 O! Tarsis ƒe vinyɔnu, de agble ɖe Nil tɔsisi la to, elabena melidzeƒe megali na wò o.
೧೦ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
11 Yehowa kɔ eƒe asi dzi ɖe atsiaƒu la dzi, eye wòna eƒe fiaɖuƒewo dzo nyanyanya. Eɖe gbe be woagbã Foenisia ƒe mɔ sesẽwo.
೧೧ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
12 Yehowa gblɔ be, “O! Sidon ƒe vinyɔnu si menya ŋutsu o, wò dzidzɔkpɔkpɔ nu tso! “Tsi tsitre, tso ƒu la, eye nàyi Kipro, afi ma gɔ̃ hã la, màkpɔ dzudzɔƒe o.”
೧೨ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
13 Kpɔ Babiloniatɔwo ƒe anyigba la ɖa; tsã la, bubu menɔ wo ŋu o va se ɖe esime Asiriatɔwo fɔe hetsɔe wɔ nɔƒee na ame siwo nɔ gbegbe. Wotu dziƒoxɔ kɔkɔwo kple fiasãwo ɖe afi ma; ke ena wòzu aƒedo.
೧೩ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
14 Mi Tarsis melikulawo mifa avi, elabena wogbã miaƒe mɔ sesẽ la!
೧೪ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
15 Le ɣe ma ɣi me la, woaŋlɔ Tiro be ƒe blaadre sɔŋ; siwo nye fia ƒe agbenɔƒe. Le ƒe blaadre siawo ƒe nuwuwu la, ava eme na Tiro abe ale si woŋlɔe ɖe gboloha ƒe hagbewo me nɛ ene be,
೧೫ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
16 “Tsɔ kasaŋku. Ɖi tsa le dua me. O! Gbolo si wogbe, ƒo kasaŋku la nyuie, eye nàdzi ha geɖewo, ale be woaɖo ŋku dziwò.”
೧೬ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.
17 Le ƒe blaadre ƒe nuwuwu la, Yehowa ahe to na Tiro. Agatrɔ ayi ɖe eƒe gbolowɔwɔ dzi, eye wòatsa asi sia kple fiaɖuƒe siwo katã le anyigba dzi;
೧೭ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
18 Ke hã la, woatsɔ viɖe siwo wòkpɔ la na Yehowa. Womadzrae ɖo ɖe nudzraɖoƒe alo aɣlae o. Woatsɔ eƒe viɖe siwo wòkpɔ la na ame siwo nɔ agbe le Yehowa ŋkume be, woatsɔ aƒle nuɖuɖu geɖe kple nudodo nyuiwoe.
೧೮ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

< Yesaya 23 >