< Psalmowo 120 >
1 Mɔzɔha. Meyɔ Yehowa le nye xaxa me, eye wòtɔ nam.
೧ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
2 O! Yehowa, ɖem, tso aʋatsonuyiwo kple alakpaɖewo ƒe asi me.
೨ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
3 O! Alakpaɖe, nu ka wòawɔ na wò, eye nu ka wòatsɔ akpee na wò?
೩ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
4 Atsɔ aʋawɔla ƒe aŋutrɔ ɖaɖɛwo ahe to na wòe kpe ɖe yɔkuti ƒe dzoka xɔxɔwo ŋuti.
೪ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
5 Baba nam be mele Mesek, eye mele Kedar ƒe agbadɔwo me!
೫ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
6 Menɔ ame siwo lé fu ŋutifafa la dome wòdidi fũu akpa.
೬ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
7 Ŋutifafamee menye, gake ne meƒo nu la, woawo kpea aʋa.
೭ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.