< Jeremian 1 >
1 Jeremian Hilkian pojan sanat, joka oli Anatotin papeista, Benjaminin maata,
೧ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
2 Jolle Herran sana tapahtui Josian Amonin pojan, Juudan kuninkaan aikana, kolmantenatoistakymmenentenä hänen valtakuntansa vuonna;
೨ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
3 Ja sitte Josian pojan, Jojakimin, Juudan kuninkaan aikana, Zedekian Josian pojan, ensimäisen vuoden loppuun toistakymmentä, niin Jerusalemin vankiuteen asti, viidentenä kuukautena.
೩ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
4 Ja Herran sana tapahtui minulle ja sanoi:
೪ಕರ್ತನಾದ ಯೆಹೋವನು ನನಗೆ,
5 Minä tunsin sinun jo ennenkuin minä sinun valmistin äitis kohdussa, ja pyhitin sinun ennenkuin sinä äidistäs synnyitkään, ja panin sinun kansain prophetaksi.
೫“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
6 Mutta minä sanoin: voi Herra, Herra! katso en minä kelpaa saarnaamaan; sillä minä olen nuori.
೬ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
7 Niin Herra sanoi minulle: älä sano: minä olen nuori; mutta sinun pitää kaikkiin niihin menemän, mihin minä sinun lähetän, ja puhuman kaikkia, mitä minä sinulle käsken.
೭ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
8 Älä pelkää heitä; sillä minä olen tykönäs, ja pelastan sinun, sanoo Herra.
೮ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
9 Ja Herra ojensi kätensä ja tarttui minun suuhuni; ja Herra sanoi minulle: katso, minä panen minun sanani sinun suuhus.
೯ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
10 Katso, minä panen sinun tänäpänä kansain ja valtakuntain päälle, repimään, särkemään, hukuttamaan ja kukistamaan: rakentamaan ja istuttamaan.
೧೦ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
11 Ja Herran sana tapahtui minulle ja sanoi: Jeremia, mitäs näet? Minä sanoin: Minä näen mandelpuisen sauvan.
೧೧ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
12 Ja Herra sanoi minulle: oikein sinä olet nähnyt, sillä minä tahdon kiiruhtaa, tehdäkseni minun sanani.
೧೨ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.
13 Ja Herran sana tapahtui toisen kerran minulle ja sanoi: mitäs näet? Minä sanoin: minä näen kiehuvaisen padan, joka näkyy pohjan puoleen.
೧೩ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
14 Ja Herra sanoi minulle: pohjasta on paha tuleva kaikkein maan asuvaisten päälle.
೧೪ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
15 Sillä katso, minä kutsun kaikki valtakuntain sukukunnat, jotka ovat pohjassa, sanoo Herra; ja he tulevat ja kukin asettaa istuimensa Jerusalemin portin eteen, ja ympäri kaikkia hänen muurejansa, ja kaikkia Juudan kaupungeita,
೧೫ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
16 Ja minä annan oikeuden käydä heidän päällensä kaiken heidän pahuutensa tähden; että he ovat minun hyljänneet, ja muille jumalille suitsuttaneet, ja kumartaneet omaa käsialaansa.
೧೬ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
17 Niin vyötä nyt kupees, nouse ja saarnaa heille kaikki, mitä minä sinun käsken; älä pelkää heitä, etten minä sinua surmaisi heidän edessänsä.
೧೭ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
18 Ja katso, minä teen tänäpänä sinun vahvaksi kaupungiksi, rautapatsaaksi ja vaskimuuriksi koko maassa: Juudan kuninkaita ja hänen ruhtinaitansa vastaan, hänen pappejansa ja maan kansaa vastaan.
೧೮ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
19 Ja he sotivat sinua vastaan, ei kuitenkaan heidän pidä sinua voittaman; sillä minä olen sinun tykönäs, sanoo Herra, vapahtamassa sinua.
೧೯ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.