< Jeremian 29 >
1 Nämät ovat kirjoituksen sanat, jotka Jeremia propheta lähetti Jerusalemista jääneille vanhimmille, jotka olivat viedyt pois, ja papeille, ja prophetaille ja kaikelle kansalle, jotka Nebukadnetsar oli vienyt Jerusalemista Babeliin,
ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ
2 Sittekuin kuningas Jekonia ja kuningatar, kamaripalveliat, ja Juudan ja Jerusalemin päämiehet sekä puuseppäin ja seppäin kanssa olivat pois Jerusalemista,
ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.
3 Elasan Saphanin pojan ja Gemarjan Hilkian pojan kautta, jotka Juudan kuningas Zedekia lähetti Nebukadnetsarin, Babelin kuninkaan, tykö Babeliin; sanoen:
ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ:
4 Näin sanoo Herra Zebaot, Israelin Jumala, kaikille vangeille, jotka minä olen antanut viedä pois Jerusalemista Babeliin:
ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:
5 Rakentakaat huoneita, joissa te taidatte asua, istuttakaat puutarhoja, joissa te saisitte syödä hedelmiä.
“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.
6 Naikaat emäntiä, ja siittäkäät poikia ja tyttäriä, ja antakaat pojillenne emäntiä, ja naittakaat tyttärenne miehille, että he synnyttäisivät poikia ja tyttäriä; enentäkäät itsiänne siellä, ettette vähenisi.
ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.
7 Katsokaat sen kaupungin parasta, johonka minä olen teitä antanut vietää, ja rukoilkaat sen edestä Herraa; sillä kuin se menestyy, niin myös te menestytte.
ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”
8 Sillä näin sanoo Herra Zebaot, Israelin Jumala: älkäät antako prophetainne, jotka teidän tykönänne ovat, ja tietäjänne pettää teitä, ja älkäät totelko unianne, joita te unissanne näette.
ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.
9 Sillä he ennustavat teille valhetta minun nimeeni: en minä ole heitä lähettänyt, sanoo Herra.
ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
10 Sillä näin sanoo Herra: kuin Babelissa seitsemänkymmentä vuotta ovat kuluneet, niin minä tahdon etsiä teitä, ja herättää armollisen sanani teidän päällenne, niin että minä tahdon antaa teidän tulla tähän paikkaan jällensä.
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
11 Sillä minä kyllä tiedän, mitkä teistä minun ajatukseni ovat, sanoo Herra: rauhan ja ei murheen ajatukset; että minä olen antava teille sen lopun, jonka te toivotte.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
12 Ja teidän pitää minua rukoileman, käymän ja anoman minulta, ja minä kuulen teitä.
ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.
13 Teidän pitää etsimän minua ja löytämän minun: sillä jos te etsitte minua kaikesta sydämestänne,
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
14 Niin minä tahdon antaa itseni löytää teiltä, sanoo Herra, ja kääntää teidän vankiutenne, ja koota teidän kaikesta kansasta ja kaikista paikoista, joihin minä teidät ajanut olin, sanoo Herra; ja tahdon antaa teidän tulla jällensä tähän paikkaan, josta minä olen antanut viedä teitä pois.
ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”
15 Mutta jos te ajattelette: Herra on herättänyt meille prophetaita Babelissa;
ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,
16 Niin sanoo Herra näin siitä kuninkaasta, joka istuu Davidin istuimella, ja kaikesta kansasta, joka tässä kaupungissa asuu, teidän veljistänne, jotka ei teidän kanssanne lähteneet vankiuteen,
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ
17 Näin tosin sanoo Herra Zebaot: katso, minä lähetän heidän sekaansa miekan, nälän ja ruton, ja teen heille niinkuin pahoille fikunoille, joita ei syödä taideta, että ne niin pahat ovat.
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.
18 Ja vainoon heitä miekalla, nälällä ja rutolla, ja panen heidät kulkiaksi kaikissa valtakunnissa maan päällä, että heidän pitää tuleman kiroukseksi, ihmeeksi, häväistykseksi ja pilkaksi kaikkein kansain seassa, kuhunka minä heidät ajava olen;
ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
19 Ettei he kuulleet minun sanojani, sanoo Herra, joita minä varhain minun palveliaini prophetain kanssa heille lähettänyt olen; mutta ette tahtoneet kuulla, sanoo Herra.
ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
20 Mutta te kaikki, jotka vangittuina olette viedyt pois, jotka minä olen Jerusalemista antanut mennä Babeliin, kuulkaat Herran sanaa:
ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ,
21 Näin sanoo Herra Zebaot, Israelin Jumala, Ahabia Kolajan poikaa ja Zedekiaa Maasejan poikaa vastaan, jotka teille minun nimeeni valhetta ennustavat: katso, minä annan heidät Nebukadnetsarin, Babelin kuninkaan, käsiin, hänen pitää antaman heitä lyödä teidän silmäinne edessä.
ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.
22 Ja heitä pitää sadateltaman kaikkein Juudan vankein seassa, jotka ovat Babelissa, ja sanottaman: Herra tehköön sinulle niinkuin Zedekialle ja Ahabille, jotka Babelin kuningas antoi tulessa paistaa:
ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.
23 Että he tekivät hulluuden Israelissa, ja makasivat muiden emäntiä, ja saarnasivat valhetta minun nimeeni, jota en minä ollut heille käskenyt. Ja minä sen tiedän ja todistan, sanoo Herra.
ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
24 Ja Semajaa vastaan Nehalamista pitää sinun puhuman, sanoen:
ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು:
25 Näin puhuu Herra Zebaot, Israelin Jumala, sanoen: että sinä sinun nimelläs olet lähettänyt kirjoituksen kaikelle kansalle, joka on Jerusalemissa, ja papille Zephanialle Maasejan pojalle, ja kaikille papeille, ja sanonut:
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?
26 Herra on asettanut sinun papiksi, papin Jehojadan siaan, olemaan esimiehet Herran huoneessa, ylitse kaikkein mielipuolten ennustajain, panemaan heitä vankiuteen ja jalkapuuhun.
‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.
27 Miksi et sinä siis nuhtele Jeremiaa Anatotista, joka teille ennustaa?
ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?
28 Sillä hän on lähettänyt meidän tykömme Babeliin, ja antanut meille sanoa: vielä nyt pitää oleman aikaa, rakentakaat huoneita ja asukaat niissä, ja istuttakaat puutarhoja, syödäksenne niistä hedelmiä.
ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’”
29 Ja kuin pappi Zephania oli lukenut sen kirjoituksen Jeremian prophetan kuullen,
ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.
30 Niin tapahtui Herran sana Jeremialle ja sanoi:
ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:
31 Lähetä kaikkein vankein tykö ja anna heille sanoa: näin sanoo Herra Semajaa vastaan Nehalamista: että Semaja ennustaa teille, ja en kuitenkaan minä ole häntä lähettänyt, ja on tehnyt, että te luotatte valheesen,
“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,
32 Sentähden sanoo Herra näin: katso, minä tahdon kostaa Semajalle Nehalamista ja hänen siemenellensä, niin ettei yhdenkään pidä hänen omistansa pysymän tämän kansan seassa, eikä pidä näkemän sitä hyvää, jonka minä tahdon tehdä kansalleni, sanoo Herra; sillä hän on puheellansa kääntänyt heidät pois Herrasta.
ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’”