< 3 Mooseksen 24 >
1 Ja Herra puhui Mosekselle, sanoen:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 Käske Israelin lasten tuoda sinulle selkiää öljypuun öljyä, puserrettua ulos, valaistukseksi, joka aina pitää lampuissa sytytettynä oleman.
೨“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
3 Ulkoiselle puolelle todistuksen esirippua seurakunnan majassa pitää Aaronin sen alati valmistaman, ehtoosta niin aamuun asti Herran edessä. Sen pitää oleman ijankaikkisen säädyn teidän sukukunnissanne.
೩ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
4 Ja hänen pitää valmistaman lamput puhtaasen kynttiläjalkaan, aina Herran edessä.
೪ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
5 Ja sinun pitää ottaman sämpyläjauhoja ja leipoman niistä kaksitoistakymmentä kyrsää: kaksi kymmenestä pitää oleman joka kyrsässä.
೫“ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
6 Ja sinun pitää heidän paneman kahteen läjään, kuusi kumpaankin läjään, puhtaalle pöydälle Herran eteen.
೬ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
7 Ja sinun pitää paneman niiden päälle puhdasta pyhää savua, että ne pitää oleman muistoleivät: se on tuliuhri Herralle.
೭ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
8 Joka sabbatin päivänä pitää hänen aina valmistaman ne Herran edessä, Israelin lapsilta ijankaikkiseksi liitoksi.
೮ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
9 Ja ne pitää Aaronin ja hänen poikainsa omat oleman, heidän pitää ne syömän pyhässä siassa; sillä se on hänelle keikkein pyhin Herran tuliuhreista ijankaikkiseksi säädyksi.
೯ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
10 Ja yhden Israelilaisen vaimon poika läksi ulos, joka Egyptiläisen miehen poika oli Israelin lasten seassa, ja se Israelilaisen vaimon poika riiteli toisen Israelilaisen kanssa leirissä,
೧೦ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
11 Ja se Israelilaisen vaimon poika pilkkasi nimeä ja kirosi. Niin toivat he hänen Moseksen eteen, (ja hänen äitinsä nimi oli Selomit Dibrin tytär, Danin sukukunnasta).
೧೧ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
12 Ja panivat hänen vankeuteen niinkauvaksi, että heille olis selkiä päätös annettu Herran suusta.
೧೨ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
13 Ja Herra puhui Mosekselle, sanoen:
೧೩ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
14 Vie häntä leiristä ulos, joka kiroillut on, ja anna kaikkein, jotka sen kuulivat, laskea kätensä hänen päänsä päälle, ja kaikki kansa kivittäkään häntä.
೧೪“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
15 Ja puhu Israelin lapsille, sanoen: kuka ikänä Jumalaansa kiroilee, häneä pitää kantaman syntinsä.
೧೫ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
16 Ja joka Herran nimeä pilkkaa, sen pitää totisesti kuoleman, kaiken kansan pitää häntä kuoliaaksi kivittämän. Niinkuin muukalaisen, niin pitää myös omaisen oleman: jos hän pilkkaa sitä nimeä, niin hänen pitää kuoleman.
೧೬ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17 Jos joku lyö jonkun ihmisen kuoliaaksi, hänen pitää totisesti kuoleman.
೧೭“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
18 Vaan joka jonkun naudan lyö, hänen pitää maksaman hengen hengestä.
೧೮ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
19 Ja joka tekee jonkun lähimmäisensä virheelliseksi, hänelle pitää niin tehtämän, kuin hänkin tehnyt on:
೧೯ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
20 Haava haavasta, silmä silmästä, hammas hampaasta; niinkuin hän on jonkun ihmisen virheelliseksi tehnyt, niin pitää myös hänelle jälleen tehtämän.
೨೦ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
21 Niin että joka lyö naudan, hänen pitää sen maksaman, vaan joka lyö ihmisen, sen pitää kuoleman.
೨೧ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
22 Yhden oikeuden pitää oleman teidän seassanne, niin muukalaisella kuin omaisellakin; sillä minä olen Herra teidän Jumalanne.
೨೨ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.
23 Koska Moses oli näitä puhunut Israelin lapsille, niin veivät he sen leiristä ulos, joka kiroillut oli, ja kivittivät hänen kuoliaaksi: ja Israelin lapset tekivät niinkuin Herra Mosekselle käskenyt oli.
೨೩ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.