< Matteuksen 8 >
1 Kuin hän astui alas vuorelta, seurasi häntä paljo kansaa.
೧“ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
2 Ja katso, niin tuli spitalinen mies, kumarsi häntä ja sanoi: Herra, jos sinä tahdot, niin sinä voit minun puhdistaa.
೨ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
3 Niin Jesus ojensi kätensä ja rupesi häneen, sanoen: minä tahdon, ole puhdas. Ja hän puhdistettiin kohta spitalistansa.
೩ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
4 Ja Jesus sanoi hänelle: katso, ettet kenellekään sano: mutta mene ja näytä itses papille, ja uhraa lahjas, jonka Moses on käskenyt, heille todistukseksi.
೪ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
5 Mutta kuin Jesus meni Kapernaumiin, tuli sadanpäämies hänen tykönsä, ja rukoili häntä,
೫ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,
6 Ja sanoi: Herra! minun palveliani sairastaa kotona halvattuna, ja kovin vaivataan.
೬“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
7 Jesus sanoi hänelle: minä tulen ja parannan hänen.
೭ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,
8 Niin sadanpäämies vastasi ja sanoi: Herra, en ole minä mahdollinen, että sinä tulet minun kattoni alle; vaan sano ainoasti sana, niin palveliani paranee.
೮ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
9 Sillä minä olen myös ihminen toisen vallan alla, ja minun allani on sotamiehiä, ja sanon tälle: mene! ja hän menee, ja toiselle: tule! ja hän tulee, ja palvelialleni: tee tämä! ja hän tekee.
೯ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
10 Kuin Jesus tämän kuuli, ihmetteli hän, ja sanoi heille, jotka seurasivat: totisesti sanon minä teille: en ole minä löytänyt senkaltaista uskoa Israelissa.
೧೦ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
11 Mutta minä sanon teille: monta tulevat idästä ja lännestä, ja pitää Abrahamin, Isaakin ja Jakobin kanssa taivaan valtakunnassa istuman.
೧೧ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
12 Mutta valtakunnan lapset heitetään ulkonaiseen pimeyteen: siellä pitää oleman itku ja hammasten kiristys.
೧೨ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
13 Ja Jesus sanoi sadanpäämiehelle: mene, ja niinkuin sinä uskoit, niin sinulle tapahtukoon. Ja sillä hetkellä parani hänen palveliansa.
೧೩ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
14 Ja kuin Jesus tuli Pietarin huoneeseen, näki hän hänen anoppinsa makaavan ja sairastavan vilutautia.
೧೪ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
15 Niin hän tarttui hänen käteensä, ja vilutauti luopui hänestä. Ja hän nousi, ja palveli heitä.
೧೫ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
16 Mutta kuin ehtoo tuli, niin he toivat hänen tykönsä monta pirulta riivattua; ja hän ajoi ulos sanalla henget, ja teki kaikkinaisia sairaita terveeksi;
೧೬ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
17 Että täytettäisiin, mitä sanottu oli Jesaias prophetan kautta, joka sanoo: hän on ottanut meidän heikkoutemme, ja hän kantoi meidän tautimme.
೧೭ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
18 Kuin Jesus näki paljon kansaa ympärillänsä, käski hän mennä toiselle puolelle (merta).
೧೮ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
19 Ja kirjanoppinut tuli ja sanoi hänelle: Mestari, minä tahdon sinua seurata, kuhunka ikänä sinä menet.
೧೯ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
20 Niin Jesus sanoi hänelle: ketuilla ovat luolat, ja taivaan linnuilla ovat pesät; mutta Ihmisen Pojalla ei ole, kuhunka hän päänsä kallistaa.
೨೦ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
21 Toinen hänen opetuslapsistansa sanoi hänelle: Herra, salli minun ensin mennä hautaamaan isääni.
೨೧ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
22 Niin Jesus sanoi hänelle: seuraa minua, ja anna kuolleet haudata kuolleitansa.
೨೨ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.
23 Ja kuin hän oli haahteen astunut, seurasivat häntä hänen opetuslapsensa.
೨೩ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
24 Mutta katso, suuri ilma nousi merellä, niin että haaksi aalloilta peitettiin. Mutta hän makasi.
೨೪ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
25 Niin tulivat hänen opetuslapsensa ja herättivät hänen, ja sanoivat: Herra, auta meitä, me hukumme.
೨೫ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.
26 Ja hän sanoi heille: te heikko-uskoiset, miksi te olette pelkurit? Niin hän nousi ja asetti tuulen ja meren, ja tuli juuri tyveneksi.
೨೬ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
27 Niin ihmiset ihmettelivät, sanoen: millainen tämä on? sillä tuulet ja meri ovat myös hänelle kuuliaiset.
೨೭ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
28 Ja kuin hän tuli sille puolelle merta, Gerasalaisten maakuntaan, niin häntä vastaan juoksi kaksi pirulta riivattua, jotka olivat haudoista lähteneet, ja olivat sangen hirmuiset, niin ettei kenkään taitanut sitä tietä vaeltaa.
೨೮ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
29 Ja katso, he huusivat sanoen: Jesus, Jumalan Poika, mitä meidän on sinun kanssas? Oletkos tullut tänne meitä vaivaamaan ennen aikaa?
೨೯ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
30 Ja kaukana heistä kävi sangen suuri sikalauma laitumella.
೩೦ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.
31 Niin perkeleet rukoilivat häntä ja sanoivat: jos ajat meidät ulos, niin salli meidän mennä sikalaumaan.
೩೧ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
32 Ja hän sanoi heille: menkäät. Niin he läksivät ulos ja menivät sikalaumaan; ja katso, koko sikalauma syöksi äkisti itsensä jyrkältä mereen ja upposi.
೩೨ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
33 Mutta paimenet pakenivat ja menivät kaupunkiin ja ilmoittivat kaikki, ja kuinka pirulta riivatuille oli tapahtunut.
೩೩ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;
34 Ja katso, koko kaupunki meni ulos Jesusta vastaan. Ja kuin he hänen näkivät, rukoilivat he häntä menemään pois heidän maansa ääristä.
೩೪ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.