< Roomalaisille 8 >

1 Niin ei ole nyt yhtään kadotusta niissä, jotka Jesuksessa Kristuksessa ovat, ja ei vaella lihan, vaan hengen jälkeen.
ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
2 Sillä hengen laki, joka eläväksi tekee Kristuksessa Jesuksessa, on minun synnin ja kuoleman laista vapahtanut.
ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
3 Sillä se, mikä laille oli mahdotoin, että hän lihan kautta oli heikoksi tullut, sen Jumala teki, ja lähetti Poikansa syntisen lihan hahmossa ja tuomitsi synnin lihassa, synnin kautta:
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
4 Että lain vanhurskaus täytetyksi tulis meissä, jotka emme lihan jälkeen vaella, vaan hengen jälkeen.
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
5 Sillä ne, jotka lihan jälkeen ovat, ajattelevat niitä, mitkä lihan ovat; mutta ne, jotka hengen jälkeen ovat, ajattelevat hengellisiä.
ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6 Sillä lihan halu on kuolema, ja hengen halu on elämä ja rauha.
ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
7 Että lihan halu on viha Jumalaa vastaan, ettei se ole Jumalan laille kuuliainen, sillä ei se voikaan.
ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
8 Mutta jotka lihassa ovat, ei ne taida olla Jumalalle otolliset.
ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
9 Mutta ette ole lihassa, vaan hengessä, jos muutoin Jumalan Henki asuu teissä; mutta jolla ei ole Kristuksen Henkeä, ei se ole hänen omansa.
ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
10 Jos siis Kristus teissä on, niin ruumis tosin on kuollut synnin tähden, mutta henki on elämä vanhurskauden tähden.
೧೦ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
11 Jos nyt sen Henki, joka Jesuksen kuolleista herätti, asuu teissä, niin myös se, joka Kristuksen kuolleista herätti, on teidän kuolevaiset ruumiinne eläväksi tekevä, sen teissä asuvaisen hengen kautta.
೧೧ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
12 Niin emme nyt ole, rakkaat veljet, velkapäät lihalle, lihan jälkeen elämään.
೧೨ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
13 Sillä jos te lihan jälkeen elätte, niin teidän pitää kuoleman; mutta jos te lihan työt hengen kautta kuoletatte, niin te saatte elää.
೧೩ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
14 Sillä kaikki, jotka Jumalan Hengeltä vaikutetaan, ne ovat Jumalan lapset.
೧೪ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
15 Sillä ette ole saaneet orjuuden henkeä, että teidän vielä pitäis pelkäämän, mutta te olette saaneet valittuin lasten hengen, jossa me huudamme: Abba, rakas Isä.
೧೫ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
16 Se Henki todistaa meidän henkemme kanssa, että me olemme Jumalan lapset.
೧೬ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17 Jos me olemme lapset, niin me olemme myös perilliset, nimittäin Jumalan perilliset ja Kristuksen kanssaperilliset: jos me muutoin ynnä kärsimme, että me ynnä hänen kanssansa kunniaan tulisimme.
೧೭ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18 Sillä siksi minä sen pidän, ettei tämän nykyisen ajan vaivat ole sen kunnian vertaa, joka meille ilmoitetaan.
೧೮ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
19 Sillä ikävä luontokappaleen ikävöitsemys odottaa Jumalan lasten ilmoitusta,
೧೯ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
20 Että luontokappale on turmeluksen alle annettu, ei mielellänsä, vaan sentähden, joka ne alle antanut on,
೨೦ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,
21 Toivossa, että myös itse luontokappale pitää turmeluksen orjuudesta vapaaksi tuleman, Jumalan lasten kunnian vapauteen.
೨೧ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
22 Sillä me tiedämme, että jokainen luontokappale huokaa ja ahdistetaan aina tähän asti meidän kanssamme.
೨೨ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ
23 Mutta ei ainoastaan ne, vaan myös itse me, joilla hengen uutiset ovat, huokaamme itsellämme, odottain sitä lapseksi ottamista, meidän ruumiimme lunastusta.
೨೩ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
24 Sillä me olemme toivossa vapahdetut. Mutta jos toivo näkyy, niin ei se ole toivo; sillä kuinka joku taitaa toivoa jota hän näkee?
೨೪ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
25 Mutta jos me sitä toivomme, jota emme näe, niin me odotamme sitä kärsivällisyydessä.
೨೫ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
26 Mutta niin myös Henki auttaa meidän heikkouttamme; sillä emmepä me tiedä mitään rukoilla niinkuin tulis, vaan Henki rukoilee meidän edestämme sanomattomilla huokauksilla.
೨೬ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
27 Mutta joka sydämet tutkii, hän tietää, mitä Hengen mielessä on; sillä hän rukoilee pyhäin edestä Jumalan tahdon jälkeen.
೨೭ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
28 Mutta me tiedämme niille, jotka Jumalaa rakastavat, kaikki kappaleet ynnä parhaaksi kääntyvän, niille, jotka aivoituksen jälkeen kutsutut ovat.
೨೮ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
29 Sillä jotka hän on katsonut edes, ne hän on Poikansa kuvan kaltaiseksi säätänyt, että hän olis esikoinen monen veljen keskellä.
೨೯ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
30 Mutta jotka hän on säätänyt, ne hän on myös kutsunut, ja jotka hän kutsunut on, ne hän on myös vanhurskaiksi tehnyt, ja jotka hän vanhurskaiksi teki, ne hän on myös kunniallisiksi tehnyt.
೩೦ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
31 Mitäs me siis näihin sanomme? Jos Jumala on meidän edestämme, kuka voi meitä vastaan olla?
೩೧ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
32 Joka ei omaakaan Poikaansa armahtanut, vaan antoi hänen kaikkein meidän edestämme, eikös hän myös lahjoita meille kaikkia hänen kanssansa?
೩೨ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
33 Kuka tahtoo Jumalan valittuin päälle kantaa? Jumala on, joka tekee vanhurskaaksi.
೩೩ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
34 Kuka on, joka tahtoo kadottaa? Kristus on kuollut. Ja, hän on myös herätetty ylös, on myös Jumalan oikialla kädellä, joka myös rukoilee meidän edestämme.
೩೪ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
35 Kuka pitää meitä Kristuksen rakkaudesta eroittaman? vaivako, eli ahdistus, eli vaino, eli nälkä, eli alastomuus, eli hätä, eli miekka?
೩೫ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
36 Niinkuin kirjoitettu on: sinun tähtes me kuoletetaan yli päivää: me pidetään niinkuin teurastettavat lampaat.
೩೬“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.
37 Mutta niissä kaikissa me voitamme hänen kauttansa, joka meitä on rakastanut.
೩೭ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.
38 Sillä minä olen vahva siitä, ettei kuolema, eikä elämä, eikä enkelit, eikä esivallat, eikä väkevyydet, eikä nykyiset, eikä tulevaiset,
೩೮ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
39 Eikä korkeus, eikä syvyys, eli joku muu luontokappale taida meitä Jumalan rakkaudesta eroittaa, joka on Jesuksessa Kristuksessa, meidän Herrassamme.
೩೯ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.

< Roomalaisille 8 >