< Jesajan 19 >
1 Ennustus Egyptistä. Katso, Herra ajaa nopealla pilvellä ja tulee Egyptiin. Silloin vapisevat Egyptin epäjumalat hänen edessään, ja sydän raukeaa Egyptin rinnassa.
೧ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
2 Minä kiihoitan Egyptin Egyptiä vastaan, niin että he keskenänsä sotivat, ystävä ystävää vastaan, kaupunki kaupunkia vastaan, valtakunta valtakuntaa vastaan.
೨“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
3 Egyptiltä katoaa rohkeus rinnasta, ja minä hämmennän hänen neuvonsa; ja he kysyvät epäjumalilta, henkienmanaajilta, vainaja-ja tietäjähengiltä.
೩ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
4 Minä annan Egyptin tylyn herran käsiin, ja kova kuningas on hallitseva heitä, sanoo Herra, Herra Sebaot.
೪ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
5 Vedet virrasta loppuvat, joki ehtyy ja kuivuu.
೫ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
6 Joet levittävät löyhkää, Egyptin kanavat mataloituvat ja ehtyvät, ruoko ja kaisla lakastuvat.
೬ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
7 Ruohostot Niilivirran varsilla, virran suussa, ja kaikki Niilivirran kylvömaat kuivuvat, kuihtuvat ja häviävät.
೭ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
8 Kalastajat valittavat ja murehtivat; kaikki, jotka heittävät onkea virtaan ja laskevat verkkoa veteen, nääntyvät.
೮ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
9 Häpeään joutuvat, jotka häkilöityjä pellavia pitelevät ja jotka kutovat pellavakankaita.
೯ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
10 Maan peruspylväät murskataan, ja kaikki palkkalaiset ovat murheellisella mielellä.
೧೦ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
11 Hulluina ovat Sooanin päämiehet kaikki, viisaimmat faraon neuvonantajista ovat neuvossaan tyhmistyneet. Kuinka voitte sanoa faraolle: "Olen viisaitten poika, muinaisajan kuninkaitten jälkeläinen"?
೧೧ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
12 Missä ovat viisaasi? Ilmoittakoot sinulle-hehän sen tietävät-mitä Herra Sebaot on Egyptin osalle päättänyt.
೧೨ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
13 Sooanin päämiehet ovat typertyneet, Noofin päämiehet ovat pettyneet. Egyptiä horjuttavat sen sukukuntain kulmakivet;
೧೩ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
14 Herra on vuodattanut sen keskuuteen sekasorron hengen, ja niin he saattavat Egyptin horjumaan kaikissa menoissansa, niinkuin juopunut horjahtaa oksennukseensa.
೧೪ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
15 Eikä menesty Egyptille mikään teko, tekipä sen pää tai häntä, palmunlehvä tai kaisla.
೧೫ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
16 Sinä päivänä Egypti on oleva naisten kaltainen; se vapisee ja pelkää Herran Sebaotin käden heilutusta, kun hän heiluttaa kättään sitä vastaan.
೧೬ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
17 Ja Juudan maa on oleva Egyptille kauhuksi; niin usein kuin sitä sille mainitaan, pelkää se Herran Sebaotin päätöstä, jonka hän siitä on päättänyt.
೧೭ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.
18 Sinä päivänä on viisi kaupunkia Egyptin maassa puhuva Kanaanin kieltä ja vannova valan Herralle Sebaotille. Yhtä mainitaan nimellä Iir-Heres.
೧೮ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”
19 Sinä päivänä on oleva Herran alttari keskellä Egyptin maata ja sen rajalla Herran patsas.
೧೯ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
20 Ja se on oleva merkkinä ja todistuksena Herralle Sebaotille Egyptin maassa; sillä he huutavat Herraa sortajain tähden, ja hän lähettää heille vapauttajan ja puolustajan, joka pelastaa heidät.
೨೦ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
21 Ja Herra tekee itsensä tunnetuksi egyptiläisille, ja egyptiläiset tuntevat Herran sinä päivänä ja palvelevat häntä teuras-ja ruokauhreilla, ja he tekevät Herralle lupauksia ja täyttävät ne.
೨೧ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
22 Herra lyö egyptiläisiä, lyö ja parantaa; he palajavat Herran tykö, ja hän kuulee heidän rukouksensa ja parantaa heidät.
೨೨ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
23 Sinä päivänä on oleva valtatie Egyptistä Assuriin, ja Assur yhtyy Egyptiin ja Egypti Assuriin, ja he, Egypti ynnä Assur, palvelevat Herraa.
೨೩ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
24 Sinä päivänä on Israel oleva kolmantena Egyptin ja Assurin rinnalla, siunauksena keskellä maata,
೨೪ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
25 sillä Herra Sebaot siunaa sitä sanoen: "Siunattu olkoon Egypti, minun kansani, ja Assur, minun kätteni teko, ja Israel, minun perintöosani".
೨೫“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.