< Jeremian 51 >
1 Näin sanoo Herra: "Katso, minä herätän Baabelia vastaan, Leeb-Kaamain asukkaita vastaan hävittäjän hengen.
೧ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
2 Ja minä lähetän Baabeliin muukalaisia, jotka hajottavat sen ja tyhjentävät sen maan, sillä joka taholta he tulevat sitä vastaan onnettomuuden päivänä.
೨ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
3 Jousimies jännittäköön jousensa sitä vastaan, joka jousen jännittää, ja sitä vastaan, joka uljastelee rintahaarniskassaan. Älkää säälikö sen nuorukaisia, vihkikää tuhon omaksi koko sen sotajoukko.
೩ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
4 Haavoitettuja kaatuu kaldealaisten maassa ja lävistettyjä sen kaduilla.
೪ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.
5 Sillä ei Israel eikä Juuda ole Jumalansa, Herran Sebaotin, hylkäämä, vaan noiden maa on täynnä syntivelkaa Israelin Pyhän edessä.
೫ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
6 Paetkaa Baabelista ja pelastakoon kukin henkensä, älkää hukkuko sen syntiin. Sillä tämä on Herran koston aika, hän maksaa sille, mitä se on ansainnut.
೬ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
7 Baabel oli Herran kädessä kultainen malja, joka juovutti kaiken maan. Sen viinistä joivat kansat; sentähden kansat tulivat mielettömiksi.
೭ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
8 kisti on Baabel kaatunut ja murskaantunut. Valittakaa hänen tähtensä! Hakekaa balsamia hänen kipuunsa, ehkä hän paranee.
೮ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
9 'Me olemme koettaneet parantaa Baabelia, mutta ei hän ole parantunut. Jättäkää hänet ja menkäämme pois, kukin omaan maahansa; sillä hänen tuomionsa ulottuu taivaaseen asti, kohoaa pilviin saakka.
೯ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
10 Herra on tuonut ilmi meidän vanhurskautemme; tulkaa, julistakaamme Siionissa Herran, meidän Jumalamme, tekoja.'
೧೦ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
11 Teroittakaa nuolet, täyttäkää viinet! Herra on herättänyt Meedian kuningasten hengen, sillä hänen ajatuksensa käy Baabelia vastaan, sen hävittämiseksi. Tämä on Herran kosto, kosto hänen temppelinsä puolesta.
೧೧ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
12 Kohottakaa lippu Baabelin muureja vastaan, vahvistakaa vartiosto, asettakaa vartijat, valmistakaa väijytykset; sillä mitä Herra on ajatellut, sen hän tekeekin, sen minkä hän on puhunut Baabelin asukkaita vastaan.
೧೨ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
13 Sinä, joka asut suurten vetten partailla, joka olet aarteista rikas, sinun loppusi on tullut, sinun väärän voittosi raja.
೧೩ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
14 Herra Sebaot on vannonut itse kauttansa: Totisesti, minä täytän sinut ihmisillä niinkuin heinäsirkoilla, ja he virittävät sinusta viininkorjuulaulun.
೧೪ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
15 Hän on tehnyt maan voimallansa, vahvistanut maanpiirin viisaudellansa ja levittänyt taivaat taidollansa.
೧೫ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
16 Kun hän jylisee, käy vetten pauhina taivaalla, ja hän nostaa pilvet maan ääristä, tekee salamat ja sateen ja tuo tuulen sen säilytyspaikoista.
೧೬ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
17 Järjetön on jokainen ihminen, tietoa vailla, häpeän saa jokainen kultaseppä veistetystä kuvasta, petosta on hänen valamansa kuva, eikä niissä henkeä ole.
೧೭ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
18 Turhuutta ne ovat, naurettavia tekeleitä; kun niiden rangaistus tulee, ne hukkuvat.
೧೮ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
19 Näiden kaltainen ei ole hän, joka on Jaakobin osa, sillä hän on kaiken luoja, ja Jaakob on hänen perintösukunsa: Herra Sebaot on hänen nimensä.
೧೯ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
20 Sinä olit minun vasarani, minun sota-aseeni, sinulla minä musersin kansoja, sinulla minä hävitin valtakuntia.
೨೦ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
21 Sinulla minä musersin hevosen ja ratsastajan, sinulla minä musersin vaunut ja ajajan.
೨೧ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
22 Sinulla minä musersin miehen ja vaimon, sinulla minä musersin vanhan ja nuoren, sinulla minä musersin nuorukaisen ja neitosen.
೨೨ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
23 Sinulla minä musersin paimenen ja hänen laumansa, sinulla minä musersin peltomiehen ja hänen juhtaparinsa, sinulla minä musersin käskynhaltijat ja päämiehet.
೨೩ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
24 Minä maksan Baabelille ja kaikille Kaldean asukkaille kaiken sen pahan, minkä he ovat tehneet Siionille teidän silmäinne edessä, sanoo Herra.
೨೪ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.
25 Katso, minä käyn sinun kimppuusi, sinä hävityksen vuori, joka hävitit koko maan, sanoo Herra. Ja minä ojennan käteni sinua vastaan ja vieritän sinut alas kalliolta ja teen sinusta poltetun vuoren.
೨೫ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
26 Eikä sinusta oteta enää kulmakiveä eikä perustuskiveä, vaan sinä jäät ikuiseksi erämaaksi, sanoo Herra.
೨೬ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.
27 Nostakaa lippu maassa, puhaltakaa pasunaan kansoissa, vihkikää kansat häntä vastaan, kutsukaa häntä vastaan Araratin, Minnin ja Askenaan valtakunnat, asettakaa päämies häntä vastaan, antakaa tulla hevosia kuin pörheitä heinäsirkkoja.
೨೭“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
28 Vihkikää kansat häntä vastaan, Meedian kuninkaat, sen käskynhaltijat ja kaikki päämiehet ja koko sen vallan alainen maa.
೨೮ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
29 Ja maa vapisee ja vääntelehtii tuskasta, sillä Herran aivoitukset täyttyvät Baabelia vastaan: hän tekee Baabelin maasta asumattoman erämaan.
೨೯ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
30 Baabelin sankarit lakkaavat taistelemasta, he istuvat linnoituksissaan, heidän voimansa on kuihtunut, he ovat naisiksi muuttuneet; sen asunnot ovat poltetut, sen salvat rikotut.
೩೦ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
31 Juoksija juoksee juoksijaa vastaan, sanansaattaja sanansaattajaa vastaan, ilmoittamaan Baabelin kuninkaalle, että hänen kaupunkinsa on valloitettu äärestä toiseen,
೩೧ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
32 kahlauspaikat vallatut, linnoitukset tulella poltetut ja sotamiehet kauhun vallassa.
೩೨ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
33 Sillä näin sanoo Herra Sebaot, Israelin Jumala: Tytär Baabel on kuin puimatanner poljettaessa; vielä vähän aikaa, niin hänen elonaikansa tulee.
೩೩ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
34 Nebukadressar, Baabelin kuningas, on minut syönyt, hävittänyt minut, pannut syrjään kuin tyhjän astian; hän on niellyt minut niinkuin lohikäärme, täyttänyt vatsansa minun herkuillani ja huuhtonut minut pois.
೩೪ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
35 'Kärsimäni väkivalta ja minun raadeltu lihani tulkoon Baabelin päälle', sanoo Siionin asukas. 'Minun vereni tulkoon Kaldean asukasten päälle', sanoo Jerusalem.
೩೫ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
36 Sentähden näin sanoo Herra: Katso, minä ajan sinun asiasi ja kostan sinun kostosi. Minä kuivaan hänen virtansa ja ehdytän hänen lähteensä.
೩೬ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
37 Ja Baabel tulee kiviroukkioksi, aavikkosutten asunnoksi, kauhistukseksi ja ivan vihellykseksi, aivan asujattomaksi.
೩೭ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
38 He kiljuvat kaikki kuin nuoret leijonat, murisevat kuin naarasleijonain pennut.
೩೮ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
39 Kun he ovat himossansa kiihkeimmillään, teen minä heille juomingit ja juovutan heidät, että he riemastuvat ja nukkuvat ikuiseen uneen eivätkä enää heräjä, sanoo Herra.
೩೯ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
40 Minä vien heidät teurastettaviksi, niinkuin karitsat, niinkuin oinaat ja kauriit.
೪೦“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.
41 Kuinka onkaan valloitettu Seesak, vallattu se, jota ylisti kaikki maa! Kuinka onkaan Baabelista tullut kauhistus kansojen seassa!
೪೧ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
42 Meri nousi Baabelin yli, sen aaltojen pauhuun se peittyi.
೪೨ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
43 Sen kaupungit ovat tulleet autiomaaksi, kuivaksi maaksi ja aromaaksi, maaksi, jossa ei asu kenkään, jossa ei ihmislapsi kulje.
೪೩ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
44 Minä kostan Beelille Baabelissa ja vedän ulos hänen kidastaan sen, mitä hän on niellyt; eivätkä kansat enää virtaa hänen tykönsä. Baabelin muurikin on kaatunut.
೪೪ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
45 Lähde pois sen keskeltä, minun kansani, ja pelastakoon kukin henkensä Herran vihan hehkusta.
೪೫ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
46 Älköön sydämenne säikkykö, älkää peljätkö sitä sanomaa, joka kuuluu maassa, kun tulee tänä vuonna tämä sanoma ja sitten toisena vuonna tuo sanoma, kun maassa on väkivalta ja hallitsija hallitsijaa vastaan.
೪೬ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
47 Sentähden katso, päivät tulevat, jolloin minä kostan Baabelin jumalankuville, jolloin koko sen maa joutuu häpeään ja kaikki kaatuvat surmattuina sen keskellä.
೪೭ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
48 Silloin riemuitsevat Baabelin kohtalosta taivas ja maa ja kaikki, mitä niissä on, kun pohjoisesta tulevat sen hävittäjät, sanoo Herra.
೪೮ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
49 Baabelinkin on kaatuminen, te Israelin surmatut, niinkuin Baabelin tähden kaatui surmatuita kautta kaiken maan.
೪೯“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
50 Te miekasta pelastuneet, menkää, älkää pysähtykö, muistakaa Herraa kaukaisella maalla ja pitäkää mielessänne Jerusalem.
೫೦ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
51 'Me häpeämme, sillä me kuulemme pilkkaa; häpeä peittää meidän kasvomme, sillä muukalaiset ovat käyneet Herran temppelin pyhyyksien kimppuun.'
೫೧ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
52 Sentähden katso, päivät tulevat, sanoo Herra, jolloin minä kostan sen jumalankuville ja sen maa on täynnä haavoitettujen voihkinaa.
೫೨ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
53 Vaikka Baabel astuisi ylös taivaaseen, vaikka se korkeuteen linnansa vahvistaisi, sittenkin tulevat sille minulta hävittäjät, sanoo Herra.
೫೩ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
54 Kuule, huuto Baabelista, suuri hävityksen melske kaldealaisten maasta!
೫೪“ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
55 Sillä Herra hävittää Baabelin ja lopettaa sieltä suuren äänten melun. Heidän aaltonsa pauhaavat kuin suuret vedet, korkea on heidän äänensä kohina.
೫೫ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
56 Sillä hävittäjä käy Baabelin kimppuun, ja sen sankarit vangitaan, heidän jousensa murretaan; sillä Herra on koston Jumala: hän maksaa tarkoin.
೫೬ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
57 Minä juovutan sen ruhtinaat ja tietäjät, sen käskynhaltijat, päämiehet ja sankarit; ja he nukkuvat ikuiseen uneen eivätkä enää heräjä, sanoo Kuningas; Herra Sebaot on hänen nimensä.
೫೭ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
58 Näin sanoo Herra Sebaot: Baabelin leveä muuri hajotetaan maahan, ja sen korkeat portit poltetaan tulella. Niin tekevät kansat työtä tyhjän tähden, kansakunnat tulen hyväksi, ja vaivaavat itsensä väsyksiin."
೫೮ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
59 Asia, jonka profeetta Jeremia antoi Serajalle, Neerian, Mahsejan pojan, pojalle toimitettavaksi, kun tämä lähti Sidkian, Juudan kuninkaan, kanssa Baabeliin hänen neljäntenä hallitusvuotenansa. Seraja oli majoituspäällikkö.
೫೯ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
60 Jeremia kirjoitti kaiken sen onnettomuuden, joka oli tuleva Baabelille, erityiseen kirjaan, kaikki nämä sanat, jotka ovat kirjoitetut Baabelia vastaan.
೬೦ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
61 Ja Jeremia sanoi Serajalle: "Kun tulet Baabeliin, niin katso, että luet kaikki nämä sanat.
೬೧ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
62 Ja sano: Herra, sinä olet puhunut tätä paikkaa vastaan: sinä olet hävittävä sen, niin ettei siinä asukasta ole, ei ihmistä eikä eläintä, vaan että se jää ikuiseksi erämaaksi.
೬೨‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
63 Ja kun olet lukenut tämän kirjan loppuun, sido siihen kivi ja viskaa se keskelle Eufratia,
೬೩ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
64 ja sano: Näin uppoaa Baabel eikä nouse enää siitä onnettomuudesta, jonka minä sille tuotan, vaan he vaipuvat." Näin pitkälle Jeremian sanat.
೬೪ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.