< Johanneksen 2 >
1 Ja kolmantena päivänä oli häät Galilean Kaanassa, ja Jeesuksen äiti oli siellä.
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 Ja myös Jeesus ja hänen opetuslapsensa olivat kutsutut häihin.
ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.
3 Ja kun viini loppui, sanoi Jeesuksen äiti hänelle: "Heillä ei ole viiniä".
ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.
4 Jeesus sanoi hänelle: "Mitä sinä tahdot minusta, vaimo? Minun aikani ei ole vielä tullut."
ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.
5 Hänen äitinsä sanoi palvelijoille: "Mitä hän teille sanoo, se tehkää".
ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.
6 Niin oli siinä juutalaisten puhdistamistavan mukaan kuusi kivistä vesiastiaa, kukin kahden tai kolmen mitan vetoinen.
ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.
7 Jeesus sanoi heille: "Täyttäkää astiat vedellä". Ja he täyttivät ne reunoja myöten.
ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 Ja hän sanoi heille: "Ammentakaa nyt ja viekää edeskäyvälle". Ja he veivät.
ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.
9 Mutta kun edeskäypä maistoi vettä, joka oli muuttunut viiniksi, eikä tiennyt, mistä se oli tullut-mutta palvelijat, jotka veden olivat ammentaneet, tiesivät sen-kutsui edeskäypä yljän
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 ja sanoi hänelle: "Jokainen panee ensin esille hyvän viinin ja sitten, kun juopuvat, huonomman. Sinä olet säästänyt hyvän viinin tähän asti."
“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.
11 Tämän ensimmäisen tunnustekonsa Jeesus teki Galilean Kaanassa ja ilmoitti kirkkautensa; ja hänen opetuslapsensa uskoivat häneen.
ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
12 Sen jälkeen hän meni alas Kapernaumiin, hän ja hänen äitinsä ja veljensä ja opetuslapsensa; ja siellä he eivät viipyneet monta päivää.
ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.
13 Ja juutalaisten pääsiäinen oli lähellä, ja Jeesus meni ylös Jerusalemiin.
ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.
14 Niin hän tapasi pyhäkössä ne, jotka myivät härkiä ja lampaita ja kyyhkysiä, ja rahanvaihtajat istumassa.
ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.
15 Ja hän teki nuorista ruoskan ja ajoi ulos pyhäköstä heidät kaikki lampaineen ja härkineen ja kaasi vaihtajain rahat maahan ja työnsi heidän pöytänsä kumoon.
ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.
16 Ja hän sanoi kyyhkysten myyjille: "Viekää pois nämä täältä. Älkää tehkö minun Isäni huonetta markkinahuoneeksi."
ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.
17 Silloin hänen opetuslapsensa muistivat, että on kirjoitettu: "Kiivaus sinun huoneesi puolesta kuluttaa minut".
ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.
18 Niin juutalaiset vastasivat ja sanoivat hänelle: "Minkä merkin sinä näytät meille, koska näitä teet?"
ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 Jeesus vastasi ja sanoi heille: "Hajottakaa maahan tämä temppeli, niin minä pystytän sen kolmessa päivässä".
ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
20 Niin juutalaiset sanoivat: "Neljäkymmentä kuusi vuotta on tätä temppeliä rakennettu, ja sinäkö pystytät sen kolmessa päivässä?"
ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.
21 Mutta hän puhui ruumiinsa temppelistä.
ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.
22 Kun hän sitten oli noussut kuolleista, muistivat hänen opetuslapsensa, että hän oli tämän sanonut; ja he uskoivat Raamatun ja sen sanan, jonka Jeesus oli sanonut.
ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.
23 Mutta kun hän oli Jerusalemissa pääsiäisenä, juhlan aikana, uskoivat monet hänen nimeensä, nähdessään hänen tunnustekonsa, jotka hän teki.
ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.
24 Mutta Jeesus itse ei uskonut itseänsä heille, sentähden että hän tunsi kaikki
ಆದರೆ ಯೇಸು ಎಲ್ಲರನ್ನೂ ಅರಿತವರಾದ್ದರಿಂದ ತಮ್ಮನ್ನು ಒಪ್ಪಿಸಿಕೊಡಲಿಲ್ಲ.
25 eikä tarvinnut kenenkään todistusta ihmisestä, sillä hän tiesi itse, mitä ihmisessä on.
ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.