< Matteuksen 9 >
1 Ja hän astui venheeseen, meni jälleen toiselle rannalle ja tuli omaan kaupunkiinsa.
ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.
2 Ja katso, hänen tykönsä tuotiin halvattu mies, joka makasi vuoteella. Kun Jeesus näki heidän uskonsa, sanoi hän halvatulle: "Poikani, ole turvallisella mielellä; sinun syntisi annetaan sinulle anteeksi".
ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
3 Ja katso, muutamat kirjanoppineista sanoivat mielessään: "Tämä pilkkaa Jumalaa".
ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 Mutta Jeesus ymmärsi heidän ajatuksensa ja sanoi: "Miksi te ajattelette pahaa sydämessänne?
ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?
5 Sillä kumpi on helpompaa, sanoako: 'Sinun syntisi annetaan sinulle anteeksi', vai sanoa: 'Nouse ja käy'?
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
6 Mutta tietääksenne, että Ihmisen Pojalla on valta maan päällä antaa syntejä anteeksi, niin" -hän sanoi halvatulle-"nouse, ota vuoteesi ja mene kotiisi."
ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
7 Ja hän nousi ja lähti kotiinsa.
ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
8 Mutta kun kansanjoukot sen näkivät, peljästyivät he ja ylistivät Jumalaa, joka oli antanut senkaltaisen vallan ihmisille.
ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
9 Ja sieltä kulkiessaan ohi Jeesus näki miehen, jonka nimi oli Matteus, istumassa tulliasemalla ja sanoi hänelle: "Seuraa minua". Niin tämä nousi ja seurasi häntä.
ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
10 Ja kun hän aterioi hänen kodissaan, niin katso, tuli monta publikaania ja syntistä, ja he aterioivat Jeesuksen ja hänen opetuslastensa kanssa.
ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.
11 Ja kun fariseukset sen näkivät, sanoivat he hänen opetuslapsilleen: "Miksi teidän opettajanne syö publikaanien ja syntisten kanssa?"
ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
12 Mutta kun Jeesus sen kuuli, sanoi hän: "Eivät terveet tarvitse parantajaa, vaan sairaat.
ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
13 Mutta menkää ja oppikaa, mitä tämä on: 'Laupeutta minä tahdon enkä uhria'. Sillä en minä ole tullut kutsumaan vanhurskaita, vaan syntisiä."
ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
14 Silloin Johanneksen opetuslapset tulivat hänen tykönsä ja sanoivat: "Me ja fariseukset paastoamme paljon; miksi sinun opetuslapsesi eivät paastoa?"
ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
15 Niin Jeesus sanoi heille: "Eiväthän häävieraat voi surra, niinkauan kuin ylkä on heidän kanssaan? Mutta päivät tulevat, jolloin ylkä otetaan heiltä pois, ja silloin he paastoavat.
ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.
16 Ei kukaan pane vanuttamattomasta kankaasta paikkaa vanhaan vaippaan, sillä semmoinen täytetilkku repii palasen vaipasta, ja reikä tulee pahemmaksi.
“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
17 Eikä nuorta viiniä lasketa vanhoihin nahkaleileihin; muutoin leilit pakahtuvat, ja viini juoksee maahan, ja leilit turmeltuvat; vaan nuori viini lasketaan uusiin leileihin, ja niin molemmat säilyvät."
ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.
18 Kun hän tätä heille puhui, niin katso, eräs päämies tuli ja kumartui maahan hänen eteensä ja sanoi: "Minun tyttäreni kuoli juuri ikään, mutta tule ja pane kätesi hänen päällensä, niin hän virkoaa eloon".
ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.
19 Niin Jeesus nousi ja seurasi häntä opetuslapsinensa.
ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.
20 Ja katso, nainen, joka oli sairastanut verenjuoksua kaksitoista vuotta, tuli takaapäin ja kosketti hänen vaippansa tupsua.
ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,
21 Sillä hän sanoi itsekseen: "Jos vain saan koskettaa hänen vaippaansa, niin minä tulen terveeksi".
“ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.
22 Silloin Jeesus kääntyi, näki hänet ja sanoi: "Tyttäreni, ole turvallisella mielellä; sinun uskosi on tehnyt sinut terveeksi". Ja sillä hetkellä nainen tuli terveeksi.
ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.
23 Ja kun Jeesus tuli päämiehen taloon ja näki huilunsoittajat ja hälisevän väkijoukon,
ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,
24 sanoi hän: "Menkää pois, sillä tyttö ei ole kuollut, vaan nukkuu". Niin he nauroivat häntä.
ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.
25 Mutta kun väkijoukko oli ajettu ulos, meni hän sisälle ja tarttui hänen käteensä; ja tyttö nousi.
ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.
26 Ja sanoma tästä levisi koko siihen maahan.
ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.
27 Ja kun Jeesus kulki sieltä, seurasi häntä kaksi sokeaa huutaen ja sanoen: "Daavidin poika, armahda meitä".
ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.
28 Ja hänen mentyänsä huoneeseen sokeat tulivat hänen tykönsä; ja Jeesus sanoi heille: "Uskotteko, että minä voin sen tehdä?" He sanoivat hänelle: "Uskomme, Herra".
ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.
29 Silloin hän kosketti heidän silmiänsä ja sanoi: "Tapahtukoon teille uskonne mukaan".
ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.
30 Ja heidän silmänsä aukenivat. Ja Jeesus varoitti heitä vakavasti sanoen: "Katsokaa, ettei kukaan saa tästä tietää".
ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.
31 Mutta he menivät pois ja levittivät sanomaa hänestä koko siihen maahan.
ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.
32 Ja katso, näiden lähdettyä tuotiin hänen tykönsä mykkä mies, joka oli riivattu.
ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.
33 Ja kun riivaaja oli ajettu ulos, niin mykkä puhui, ja kansa ihmetteli sanoen: "Tällaista ei ole Israelissa ikinä nähty".
ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.
34 Mutta fariseukset sanoivat: "Riivaajain päämiehen voimalla hän ajaa ulos riivaajia".
ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
35 Ja Jeesus vaelsi kaikki kaupungit ja kylät ja opetti heidän synagoogissaan ja saarnasi valtakunnan evankeliumia ja paransi kaikkinaisia tauteja ja kaikkinaista raihnautta.
ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
36 Ja nähdessään kansanjoukot hänen tuli heitä sääli, kun he olivat nääntyneet ja hyljätyt niinkuin lampaat, joilla ei ole paimenta.
ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.
37 Silloin hän sanoi opetuslapsillensa: "Eloa on paljon, mutta työmiehiä vähän.
ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.
38 Rukoilkaa siis elon Herraa, että hän lähettäisi työmiehiä elonkorjuuseensa."
ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.