< Ilmestys 20 >
1 Ja minä näin tulevan taivaasta alas enkelin, jolla oli syvyyden avain ja suuret kahleet kädessään. (Abyssos )
ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos )
2 Ja hän otti kiinni lohikäärmeen, sen vanhan käärmeen, joka on perkele ja saatana, ja sitoi hänet tuhanneksi vuodeksi
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
3 ja heitti hänet syvyyteen ja sulki ja lukitsi sen sinetillä hänen jälkeensä, ettei hän enää kansoja villitsisi, siihen asti kuin ne tuhat vuotta ovat loppuun kuluneet; sen jälkeen hänet pitää päästettämän irti vähäksi aikaa. (Abyssos )
ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು. (Abyssos )
4 Ja minä näin valtaistuimia, ja he istuivat niille, ja heille annettiin tuomiovalta; ja minä näin niiden sielut, jotka olivat teloitetut Jeesuksen todistuksen ja Jumalan sanan tähden, ja niiden, jotka eivät olleet kumartaneet petoa eikä sen kuvaa eivätkä ottaneet sen merkkiä otsaansa eikä käteensä; ja he virkosivat eloon ja hallitsivat Kristuksen kanssa tuhannen vuotta.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.
5 Muut kuolleet eivät vironneet eloon, ennenkuin ne tuhat vuotta olivat loppuun kuluneet. Tämä on ensimmäinen ylösnousemus.
ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು.
6 Autuas ja pyhä on se, jolla on osa ensimmäisessä ylösnousemuksessa; heihin ei toisella kuolemalla ole valtaa, vaan he tulevat olemaan Jumalan ja Kristuksen pappeja ja hallitsevat hänen kanssaan ne tuhannen vuotta.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.
7 Ja kun ne tuhat vuotta ovat loppuun kuluneet, päästetään saatana vankeudestaan,
ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.
8 ja hän lähtee villitsemään maan neljällä kulmalla olevia kansoja, Googia ja Maagogia, kootakseen heidät sotaan, ja niiden luku on kuin meren hiekka.
ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.
9 Ja he nousevat yli maan avaruuden ja piirittävät pyhien leirin ja sen rakastetun kaupungin. Mutta tuli lankeaa taivaasta ja kuluttaa heidät.
ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.
10 Ja perkele, heidän villitsijänsä, heitetään tuli-ja tulikivijärveen, jossa myös peto ja väärä profeetta ovat, ja heitä vaivataan yöt päivät, aina ja iankaikkisesti. (aiōn , Limnē Pyr )
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn , Limnē Pyr )
11 Ja minä näin suuren, valkean valtaistuimen ja sillä istuvaisen, jonka kasvoja maa ja taivas pakenivat, eikä niille sijaa löytynyt.
ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.
12 Ja minä näin kuolleet, suuret ja pienet, seisomassa valtaistuimen edessä, ja kirjat avattiin; ja avattiin toinen kirja, joka on elämän kirja; ja kuolleet tuomittiin sen perusteella, mitä kirjoihin oli kirjoitettu, tekojensa mukaan.
ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
13 Ja meri antoi ne kuolleet, jotka siinä olivat, ja Kuolema ja Tuonela antoivat ne kuolleet, jotka niissä olivat, ja heidät tuomittiin, kukin tekojensa mukaan. (Hadēs )
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs )
14 Ja Kuolema ja Tuonela heitettiin tuliseen järveen. Tämä on toinen kuolema, tulinen järvi. (Hadēs , Limnē Pyr )
ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs , Limnē Pyr )
15 Ja joka ei ollut elämän kirjaan kirjoitettu, se heitettiin tuliseen järveen. (Limnē Pyr )
ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು. (Limnē Pyr )