< Roomalaisille 12 >
1 Niin minä Jumalan armahtavan laupeuden kautta kehoitan teitä, veljet, antamaan ruumiinne eläväksi, pyhäksi, Jumalalle otolliseksi uhriksi; tämä on teidän järjellinen jumalanpalveluksenne.
೧ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2 Älkääkä mukautuko tämän maailmanajan mukaan, vaan muuttukaa mielenne uudistuksen kautta, tutkiaksenne, mikä on Jumalan tahto, mikä hyvää ja otollista ja täydellistä. (aiōn )
೨ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn )
3 Sillä sen armon kautta, mikä minulle on annettu, minä sanon teille jokaiselle, ettei tule ajatella itsestänsä enempää, kuin ajatella sopii, vaan ajatella kohtuullisesti, sen uskonmäärän mukaan, minkä Jumala on kullekin suonut.
೩ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
4 Sillä niinkuin meillä yhdessä ruumiissa on monta jäsentä, mutta kaikilla jäsenillä ei ole sama tehtävä,
೪ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5 niin me, vaikka meitä on monta, olemme yksi ruumis Kristuksessa, mutta itsekukin olemme toistemme jäseniä;
೫ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
6 ja meillä on erilaisia armolahjoja sen armon mukaan, mikä meille on annettu; jos jollakin on profetoimisen lahja, käyttäköön sitä sen mukaan, kuin hänellä uskoa on;
೬ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7 Jos virka, pitäköön virastaan vaarin; jos joku opettaa, olkoon uskollinen opettamisessaan;
೭ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8 jos kehoittaa, niin kehoittamisessaan; joka antaa, antakoon vakaasta sydämestä; joka on johtaja, johtakoon toimellisesti; joka laupeutta harjoittaa, tehköön sen iloiten.
೮ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
9 Olkoon rakkaus vilpitön, kammokaa pahaa, riippukaa hyvässä kiinni.
೯ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10 Olkaa veljellisessä rakkaudessa helläsydämiset toisianne kohtaan; toinen toisenne kunnioittamisessa kilpailkaa keskenänne.
೧೦ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
11 Älkää harrastuksessanne olko veltot; olkaa hengessä palavat; palvelkaa Herraa.
೧೧ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12 Olkaa toivossa iloiset, ahdistuksessa kärsivälliset, rukouksessa kestävät.
೧೨ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13 Pitäkää pyhien tarpeet ominanne; harrastakaa vieraanvaraisuutta.
೧೩ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
14 Siunatkaa vainoojianne, siunatkaa, älkääkä kirotko.
೧೪ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15 Iloitkaa iloitsevien kanssa, itkekää itkevien kanssa.
೧೫ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
16 Olkaa keskenänne yksimieliset. Älkää korkeita mielitelkö, vaan tyytykää alhaisiin oloihin. Älkää olko itsemielestänne viisaita.
೧೬ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
17 Älkää kenellekään pahaa pahalla kostako. Ahkeroikaa sitä, mikä on hyvää kaikkien ihmisten edessä.
೧೭ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
18 Jos mahdollista on ja mikäli teistä riippuu, eläkää rauhassa kaikkien ihmisten kanssa.
೧೮ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
19 Älkää itse kostako, rakkaani, vaan antakaa sijaa Jumalan vihalle, sillä kirjoitettu on: "Minun on kosto, minä olen maksava, sanoo Herra".
೧೯ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
20 Vaan "jos vihamiehelläsi on nälkä, ruoki häntä, jos hänellä on jano, juota häntä, sillä näin tehden sinä kokoat tulisia hiiliä hänen päänsä päälle".
೨೦ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
21 Älä anna pahan itseäsi voittaa, vaan voita sinä paha hyvällä.
೨೧ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.