< Isaïe 66 >
1 Yahvé dit: « Le ciel est mon trône, et la terre est mon marchepied. Quel genre de maison allez-vous me construire? Où vais-je me reposer?
೧ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
2 Car c'est ma main qui a fait toutes ces choses, et c'est ainsi que toutes ces choses se sont produites », dit Yahvé: « mais je regarderai cet homme, même à celui qui est pauvre et à l'esprit contrit, et qui tremble devant ma parole.
೨ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
3 Celui qui tue un bœuf est comme celui qui tue un homme; celui qui sacrifie un agneau, comme celui qui brise le cou d'un chien; celui qui offre une offrande, comme celui qui offre du sang de porc; celui qui brûle de l'encens, comme celui qui bénit une idole. Oui, ils ont choisi leur propre voie, et leur âme se complaît dans leurs abominations.
೩ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
4 Je choisirai aussi leurs illusions, et feront retomber leurs craintes sur eux, parce que quand j'ai appelé, personne n'a répondu; quand je parlais, ils n'écoutaient pas, mais ils ont fait ce qui est mal à mes yeux, et choisi ce qui ne me plaisait pas. »
೪ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”
5 Écoutez la parole de Yahvé, vous qui tremblez devant sa parole: « Tes frères qui te détestent, qui vous ont chassés à cause de mon nom, ont dit, Que Yahvé soit glorifié, afin que nous puissions voir votre joie; mais ce sont ceux qui seront déçus.
೫ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
6 Une voix de tumulte venant de la ville, une voix venant du temple, une voix de Yahvé qui rend à ses ennemis ce qu'ils méritent.
೬ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
7 « Avant d'avoir cédé, elle a accouché. Avant que la douleur ne vienne, elle a accouché d'un fils.
೭ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.
8 Qui a entendu parler d'une telle chose? Qui a vu de telles choses? Une terre peut-elle naître en un jour? Une nation doit-elle naître tout de suite? Car dès que Sion a accouché, elle a donné naissance à ses enfants.
೮ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.
9 Vais-je faire naître, et ne pas faire accoucher? dit l'Éternel. « Moi qui fais naître, fermerai-je le ventre de la mère? » dit votre Dieu.
೯“ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.
10 « Réjouissez-vous avec Jérusalem, et soyez dans l'allégresse pour elle, vous tous qui l'aimez. Réjouissez-vous de joie avec elle, vous tous qui la pleurez;
೧೦ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
11 pour que vous puissiez téter et être rassasiés aux seins réconfortants; pour que vous puissiez boire profondément, et se réjouir de l'abondance de sa gloire. »
೧೧ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
12 Car Yahvé dit: « Voici, je vais répandre la paix sur elle comme un fleuve, et la gloire des nations comme un torrent débordant, et vous allez allaiter. Vous serez porté à ses côtés, et se fera dandiner sur ses genoux.
೧೨ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
13 Comme celui que sa mère réconforte, alors je te réconforterai. Tu seras réconforté à Jérusalem. »
೧೩ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
14 Tu le verras, et ton cœur se réjouira, et tes os s'épanouiront comme l'herbe tendre. La main de Yahvé sera connue parmi ses serviteurs; et il s'indignera contre ses ennemis.
೧೪ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
15 Car voici, Yahvé viendra avec le feu, et ses chars seront comme un tourbillon; pour rendre sa colère avec férocité, et sa réprimande avec des flammes de feu.
೧೫ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
16 Car Yahvé exercera son jugement par le feu et par son épée sur toute chair; et ceux qui seront tués par Yahvé seront nombreux.
೧೬ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
17 « Ceux qui se sanctifient et se purifient pour aller dans les jardins, en se suivant au milieu, en mangeant de la viande de porc, des choses abominables, et la souris, ceux-là finiront ensemble, dit Yahvé.
೧೭ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.
18 « Car je connais leurs œuvres et leurs pensées. Le temps vient où je rassemblerai toutes les nations et toutes les langues, et elles viendront, et elles verront ma gloire.
೧೮“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
19 « J'établirai un signe au milieu d'eux, et j'enverrai ceux qui en réchapperont vers les nations, vers Tarsis, Pul et Lud, qui tirent l'arc, vers Tubal et Javan, vers les îles lointaines, qui n'ont pas entendu ma renommée et n'ont pas vu ma gloire; et ils proclameront ma gloire parmi les nations.
೧೯ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
20 Ils amèneront tous tes frères de toutes les nations en offrande à Yahvé, sur des chevaux, sur des chars, sur des litières, sur des mulets et sur des chameaux, à ma montagne sainte, Jérusalem, dit Yahvé, comme les enfants d'Israël apportent leur offrande dans un vase pur dans la maison de Yahvé.
೨೦ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
21 Parmi eux, je choisirai aussi des prêtres et des lévites, dit l'Éternel.
೨೧ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.
22 « Car, comme les nouveaux cieux et la nouvelle terre que je vais créer subsisteront devant moi, dit Yahvé, ainsi subsisteront ta descendance et ton nom.
೨೨“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
23 D'une nouvelle lune à l'autre, et d'un sabbat à l'autre, toute chair viendra se prosterner devant moi, dit l'Éternel.
೨೩ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
24 « On sortira, et on regardera les cadavres des hommes qui ont transgressé contre moi; car leur ver ne mourra pas, leur feu ne s'éteindra pas, et ils seront odieux à toute l'humanité. »
೨೪“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”