< Aggée 2 >
1 Au septième mois le vingt et un du mois, la parole de Yahweh se fit entendre par l’intermédiaire d’Aggée, le prophète, en ces termes:
೧ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
2 Parle donc à Zorobabel, fils de Salathiel, gouverneur de Juda, à Jésus, fils de Josédec, le grand prêtre, et au reste du peuple, en ces termes:
೨“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
3 Quel est parmi vous le survivant qui a vu cette maison dans sa gloire première, et en quel état la voyez-vous maintenant? Ne paraît-elle pas à vos yeux comme rien?
೩‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
4 Et maintenant, courage Zorobabel! — oracle de Yahweh. Courage, Jésus fils de Josédec, grand prêtre! Courage, tout le peuple du pays, — oracle de Yahweh, — et agissez! Car je suis avec vous, — oracle de Yahweh des armées.
೪ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
5 Il y a l’engagement que j’ai pris que j’ai pris avec vous, quand vous êtes sortis d’Égypte; et mon Esprit demeure au milieu de vous: ne craignez rien!
೫‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
6 Car ainsi parle Yahweh des armées: Une fois encore, et ce sera dans peu, j’ébranlerai les cieux et la terre, la mer et le continent.
೬ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
7 J’ébranlerai toutes les nations, et les trésors de toutes les nations viendront; et je remplirai de gloire cette maison, dit Yahweh des armées.
೭ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
8 A moi l’argent, à moi l’or, — oracle de Yahweh des armées.
೮‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 Grande sera la gloire de cette maison; la dernière plus que la première; et en ce lieu je mettrai la paix, — oracle de Yahweh des armées.
೯‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
10 Le vingt-quatrième jour du neuvième mois, la deuxième année de Darius, la parole de Yahweh se fit entendre par l’intermédiaire d’Aggée, le prophète, en ces termes:
೧೦ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
11 Ainsi parle Yahweh des armées: Demande aux prêtres une décision en ces termes:
೧೧ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
12 Voici qu’un homme porte dans le pan de son vêtement de la viande consacrée; il touche de ce pan du pain, un mets bouilli, du vin, de l’huile, ou tout autre aliment: sera-ce consacré? Les prêtres répondirent et dirent: Non.
೧೨ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
13 — Et Aggée dit: si un homme souillé par le contact d’un mort touche à toutes ces choses, seront-elles souillées? Les prêtres répondirent et dirent: elles seront souillées.
೧೩ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
14 — Alors Aggée, reprenant la parole, dit: Tel est ce peuple, telle est cette nation devant moi, — oracle de Yahweh; telles sont toutes les œuvres de leurs mains: ce qu’ils offrent là est souillé.
೧೪ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
15 Et maintenant, portez votre attention de ce jour-ci en arrière, avant qu’on n’eut encore mis pierre sur pierre, au temple de Yahweh.
೧೫“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
16 Alors, quand on venait à un tas de vingt mesures, il n’y en avait que dix; quand on venait au pressoir pour y puiser cinquante mesures, il n’y en avait que vingt.
೧೬ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
17 Je vous ai frappés par la rouille, la nielle et la grêle, j’ai frappé tout le travail de vos mains; et vous n’êtes pas revenus à moi, — oracle de Yahweh.
೧೭ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
18 Portez donc votre attention de ce jour-ci en arrière; depuis le vingt-quatrième jour du neuvième mois jusqu’à partir du jour où a été fondé le temple de Yahweh, portez votre attention!
೧೮“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
19 La semence était-elle encore dans le grenier? Même la vigne, le figuier, le grenadier et l’olivier n’ont rien produit: mais à partir de ce jour, je bénirai.
೧೯ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
20 La parole de Yahweh fut adressée une seconde fois à Aggée le vingt-quatrième jour du mois en ces termes:
೨೦ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
21 Parle ainsi à Zorobabel, gouverneur de Juda: J’ébranlerai les cieux et la terre;
೨೧“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
22 je renverserai le trône des royaumes, je détruirai la puissance des royaumes des nations; je renverserai les chars et ceux qui les montent; les chevaux avec leurs cavaliers tomberont, par l’épée les uns des autres.
೨೨ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
23 En ce jour-là, — oracle de Yahweh des armées, je te prendrai, Zorobabel, fils de Salathiel, mon serviteur, — oracle de Yahweh, et je ferai de toi comme un cachet; car je t’ai élu, — oracle de Yahweh des armées.
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.