< Jérémie 32 >
1 La parole qui fut adressée à Jérémie de la part de Yahweh, la dixième année de Sédécias, roi de Juda. C’était la dix-huitième année de Nabuchodonosor.
೧ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
2 Alors l’armée du roi de Babylone assiégeait Jérusalem, et Jérémie le prophète était enfermé dans la cour de garde qui était dans la maison du roi de Juda.
೨ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
3 Car Sédécias, roi de Juda, l’avait fait enfermer, en lui disant: « Pourquoi prophétises-tu en ces termes: Ainsi parle Yahweh: Voici que je livre cette ville aux mains du roi de Babylone, et il la prendra;
೩ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
4 et Sédécias, roi de Juda n’échappera pas aux mains des Chaldéens; il sera certainement livré aux mains du roi de Babylone, et il lui parlera bouche à bouche, et ses yeux verront ses yeux.
೪ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
5 Et Nabuchodonosor emmènera Sédécias à Babylone, et il y restera jusqu’à ce que je le visite, — oracle de Yahweh. Si vous combattez contre les Chaldéens, vous ne réussirez point. »
೫ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
6 Et Jérémie dit: La parole de Yahweh m’a été adressée en ces termes:
೬ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
7 Voici Hanaméel, fils de Sellum, ton oncle, qui vient vers toi pour te dire: « Achète-toi mon champ qui est à Anathoth, car tu as le droit de rachat pour l’acheter. »
೭ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
8 Et Hanaméel, fils de mon oncle, vint vers moi selon la parole de Yahweh, dans la cour de garde, et il me dit: « Achète donc mon champ qui est à Anathoth, dans le pays de Benjamin, car tu as le droit d’héritage et le droit de rachat; achète-le donc! » Alors je connus que c’était là une parole de Yahweh.
೮ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
9 Et j’achetai de Hanaméel, fils de mon oncle, le champ qui est à Anathoth, et je lui pesais l’argent, dix-sept sicles d’argent.
೯ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
10 Puis je passai l’acte et je le scellai; je pris des témoins et je pesai l’argent dans la balance.
೧೦ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
11 Ensuite je pris l’acte d’acquisition, celui qui était scellé, renfermant les stipulations et les clauses, et celui qui était ouvert.
೧೧ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
12 Et je remis l’acte d’acquisition à Baruch, fils de Néri, fils de Maasias, en présence de Hanaméel, fils de mon oncle, et en présence des témoins qui avaient signé l’acte d’acquisition, et en présence de tous les Juifs qui étaient assis dans la cour de garde.
೧೨ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
13 Et je donnai devant eux cet ordre à Baruch:
೧೩ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
14 Ainsi parle Yahweh des armées, Dieu d’Israël: Prends ces actes, cet acte d’acquisition qui est scellé, et cet acte qui est ouvert, et mets-les dans un vase de terre pour qu’ils se conservent longtemps.
೧೪“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
15 Car ainsi parle Yahweh des armées, Dieu d’Israël: On achètera encore des maisons, des champs et des vignes en ce pays.
೧೫ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
16 Après que j’eus remis l’acte d’acquisition à Baruch, fils de Néri, j’adressai cette prière à Yahweh:
೧೬ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
17 Ah! Seigneur Yahweh, c’est toi qui as fait le ciel et la terre par ta grande puissance et ton bras étendu; rien ne te sera impossible.
೧೭“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
18 C’est toi qui fais miséricorde à des milliers, et qui paies le salaire de l’iniquité des pères dans le sein de leurs enfants, après eux; Dieu grand et fort, dont le nom est Yahweh des armées;
೧೮ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
19 grand en conseil et puissant en action, dont les yeux sont ouverts sur toutes les voies des enfants d’Adam, pour rendre à chacun selon ses voies, et selon le fruit de ses œuvres.
೧೯ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
20 C’est toi qui as fait des signes et des prodiges dans le pays d’Égypte, et jusqu’à ce jour, en Israël et parmi les hommes, et qui t’es fait un nom tel que nous le voyons aujourd’hui;
೨೦ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
21 c’est toi qui as tiré Israël, ton peuple, du pays d’Égypte, avec des signes et des prodiges, par ta main puissante et ton bras étendu, et en répandant une grande terreur;
೨೧ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
22 et tu leur as donné ce pays, que tu avais juré à leurs pères de leur donner, un pays où coulent le lait et le miel.
೨೨ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
23 Ils y sont entrés, ils en ont pris possession; mais ils n’ont pas écouté ta voix, ils n’ont pas marché dans ta loi; et tout ce que tu leur avais commandé de faire, ils ne l’ont pas fait; et tu as amené sur eux tous ces malheurs.
೨೩ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
24 Voici que des terrasses atteignent la ville, pour la prendre; et la ville va être livrée aux mains des Chaldéens qui l’attaquent, par l’épée, la famine et la peste; ce que tu as dit arrive, et tu le vois.
೨೪ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
25 Et toi, Seigneur Yahweh, tu m’as dit: « Achète-toi ce champ à prix d’argent, et prends des témoins «; et la ville est livrée aux mains des Chaldéens!...
೨೫ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
26 La parole de Yahweh fut adressée à Jérémie en ces termes:
೨೬ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
27 Je suis Yahweh, le Dieu de toute chair; y aurait-il une chose impossible pour moi?
೨೭“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
28 C’est pourquoi ainsi parle Yahweh: Voici que je vais livrer cette ville aux mains des Chaldéens et aux mains de Nabuchodonosor, roi de Babylone, et il la prendra.
೨೮ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
29 Les Chaldéens qui attaquent cette ville y entreront; ils mettront le feu à cette ville, et ils la brûleront, ainsi que les maisons sur les toits desquelles on a offert de l’encens à Baal, et fait des libations à d’autres dieux, afin de m’irriter.
೨೯ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
30 Car les enfants d’Israël et les enfants de Juda, n’ont fait dès leur jeunesse que ce qui est mal à mes yeux; et les enfants d’Israël n’ont fait que m’irriter par l’œuvre de leurs mains, — oracle de Yahweh.
೩೦ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
31 Car cette ville n’a fait qu’exciter ma colère et ma fureur, depuis le jour où ils l’ont bâtie jusqu’à ce jour afin que je la fasse disparaître de devant ma face,
೩೧ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
32 à cause de tout le mal que les enfants d’Israël et les enfants de Juda ont fait pour m’irriter, eux, leurs rois, leurs chefs, leurs prêtres et leurs prophètes, les hommes de Juda et les habitants de Jérusalem.
೩೨ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
33 Ils m’ont tourné le dos et non pas la face, et, quand je les ai instruits, les instruisant dès le matin, ils n’ont pas écouté pour recevoir l’instruction.
೩೩ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
34 Et ils ont mis leurs abominations dans la maison sur laquelle mon nom est invoqué, pour la souiller.
೩೪ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
35 Ils ont bâti les hauts lieux de Baal dans la vallée du fils de Hinnom, faisant passer par le feu leurs fils et leurs filles pour Moloch: ce que je ne leur avais pas commandé, et ce qui ne m’était pas venu à la pensée, faisant cette abomination pour faire pêcher Juda.
೩೫ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
36 Maintenant donc, ainsi parle Yahweh, Dieu d’Israël, touchant cette ville dont vous dites: « Elle sera livrée aux mains du roi de Balylone, par l’épée, la famine et la peste: »
೩೬ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
37 Voici que je les rassemblerai de tous les pays où je les aurai chassés dans ma colère, dans mon indignation et dans mon grand courroux; je les ramènerai dans ce lieu et je les y ferai habiter en sécurité.
೩೭‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
38 Ils seront mon peuple, et moi je serai leur Dieu.
೩೮ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
39 Je leur donnerai un même cœur et je leur ferai suivre une même voie, afin qu’ils me craignent toujours, pour leur bonheur et celui de leurs enfants après eux.
೩೯ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
40 Je conclurai avec eux une alliance éternelle, pour ne pas me détourner d’eux, en cessant de leur faire du bien; et je mettrai ma crainte dans leur cœur pour qu’ils ne se détournent pas de moi.
೪೦ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
41 Je mettrai ma joie à leur faire du bien, et je les planterai fidèlement sur cette terre, de tout mon cœur et de toute mon âme.
೪೧ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
42 Car ainsi parle Yahweh: De même que j’ai fait venir sur ce peuple tous ces grands malheurs, de même je ferai venir sur eux tous ces biens dont je parle à leur sujet.
೪೨ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
43 Et on achètera des champs dans ce pays dont vous dites: « C’est un pays dévasté, où il n’y a plus ni homme ni bête; il est livré aux mains des Chaldéens. »
೪೩ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
44 On achètera des champs à prix d’argent, on en passera les actes, on les scellera et l’on prendra des témoins, dans le pays de Benjamin, et dans les environs de Jérusalem et dans les villes de Juda, dans les villes de la montagne, dans les villes de la sephélah, et dans les villes du négéb; car je ferai revenir les captifs, — oracle de Yahweh.
೪೪ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.