< Habacuc 1 >
1 Sentence dont Habacuc, le prophète, eut la vision.
೧ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
2 Jusques à quand, Yahweh, t'implorerai-je, sans que tu m'entendes, crierai-je vers toi à la violence, sans que tu me délivres?
೨ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
3 Pourquoi me fais-tu voir l'iniquité, et contemples-tu la souffrance? La dévastation et la violence sont devant moi, il y a des querelles et la discorde s'élève;
೩ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
4 à cause de cela la loi se meurt, et la justice ne voit plus le jour; car le méchant circonvient le juste; c'est pourquoi le droit sort faussé.
೪ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
5 Jetez les yeux sur les nations et regardez; soyez étonnés, stupéfaits. Car je vais faire en vos jours une œuvre, que vous ne croiriez pas si on vous la racontait.
೫ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
6 Car voici que je suscite les Chaldéens, peuple féroce et impétueux, qui s'avance vers les larges espaces de la terre, pour s'emparer de demeures qui ne sont pas à lui.
೬ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
7 Il est terrible et formidable, et c'est de lui-même que vient son droit et sa grandeur.
೭ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
8 Ses chevaux sont plus légers que les léopards, plus ardents que les loups du soir. Ses cavaliers s'élancent, ses cavaliers viennent de loin, ils volent comme l'aigle pressé de dévorer.
೮ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
9 Tout ce peuple vient pour exercer la violence; leurs regards avides se portent en avant; il amasse les captifs comme du sable.
೯ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
10 Lui, il se moque des rois, et les princes sont sa risée; il se rit de toutes les forteresses, il entasse de la poussière et les prend.
೧೦ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
11 Puis l'ouragan s'avance et passe; et il se rend coupable; sa force à lui, voilà son Dieu!
೧೧ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
12 N'es-tu pas dès le commencement, Yahweh, mon Dieu, mon saint? Nous ne mourrons pas. Yahweh, tu as établi ce peuple pour le droit, ô mon Rocher, tu l'as affermi pour châtier.
೧೨ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
13 Tes yeux sont trop purs pour voir le mal, et tu ne peux contempler la souffrance. Pourquoi regarderais-tu les perfides, et te tairais-tu, quand le méchant dévore un plus juste que lui?
೧೩ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?
14 Tu traiterais donc les hommes comme les poissons de la mer, comme les reptiles qui n'ont point de chef!...
೧೪ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
15 Il prend le tout à l'hameçon, il le tire avec son filet, le rassemble dans ses rets; et c'est pourquoi il est dans la joie, il jubile.
೧೫ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
16 C'est pourquoi il sacrifie à son filet, et il offre de l'encens à ses rets; car par eux sa portion est grasse, et sa nourriture succulente.
೧೬ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
17 Continuera-t-il donc de vider son filet, et toujours égorgera-t-il sans pitié les nations!
೧೭ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?