< 2 Samuel 18 >

1 Et David passa en revue le peuple qui était avec lui, et il établit sur eux des chefs de milliers et des chefs de centaines.
ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
2 Et David envoya le peuple, un tiers sous la main de Joab, et un tiers sous la main d’Abishaï, fils de Tseruïa [et] frère de Joab, et un tiers sous la main d’Itthaï, le Guitthien. Et le roi dit au peuple: Certainement je sortirai moi aussi avec vous.
ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
3 Mais le peuple dit: Tu ne sortiras point; car quand nous viendrions à fuir, ils ne prendraient pas garde à nous, et quand la moitié d’entre nous mourrait, ils ne prendraient pas garde à nous; car toi, tu es comme 10 000 d’entre nous; et maintenant il est bon que, de la ville, tu nous sois en secours.
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
4 Et le roi leur dit: Je ferai ce qui est bon à vos yeux. Et le roi se tint à côté de la porte, et tout le peuple sortit par centaines et par milliers.
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
5 Et le roi commanda à Joab, et à Abishaï, et à Itthaï, disant: Usez-moi de douceur envers le jeune homme, Absalom. Et tout le peuple entendit lorsque le roi donna ses ordres à tous les chefs touchant Absalom.
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
6 Et le peuple sortit dans la campagne à la rencontre d’Israël; et la bataille eut lieu dans la forêt d’Éphraïm.
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
7 Et le peuple d’Israël fut battu là par les serviteurs de David; et le carnage fut grand ce jour-là, … 20 000 hommes.
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
8 Et la bataille s’étendit là sur toute la surface du pays, et la forêt dévora en ce jour plus de peuple que n’en dévora l’épée.
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
9 Et Absalom se trouva en présence des serviteurs de David, et Absalom montait un mulet; et le mulet entra sous les branches entrelacées d’un grand térébinthe; et la tête d’Absalom se prit dans le térébinthe, et il demeura suspendu entre le ciel et la terre; et le mulet qui était sous lui passa outre.
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
10 Et un homme vit cela, et le rapporta à Joab, et dit: Voici, j’ai vu Absalom suspendu à un térébinthe.
ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
11 Et Joab dit à l’homme qui le lui rapportait: Et voici, tu l’as vu, et pourquoi ne l’as-tu pas abattu là par terre? Et ç’aurait été à moi de te donner dix [pièces] d’argent et une ceinture.
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
12 Et l’homme dit à Joab: Et quand je pèserais dans ma main 1 000 [pièces] d’argent, je n’étendrais pas ma main sur le fils du roi; car à nos oreilles le roi t’a commandé, à toi, et à Abishaï, et à Itthaï, disant: Prenez garde, qui [de vous] que ce soit, au jeune homme Absalom; …
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
13 ou j’aurais agi perfidement contre ma vie, car rien n’est caché au roi, et toi, tu aurais pris parti contre moi.
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
14 Et Joab dit: Je ne m’attarderai pas ainsi devant toi. Et il prit trois javelots dans sa main, et les enfonça dans le cœur d’Absalom, alors qu’il était encore vivant au milieu du térébinthe.
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
15 Et dix jeunes hommes qui portaient les armes de Joab entourèrent et frappèrent Absalom, et le mirent à mort.
ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
16 Et Joab sonna de la trompette, et le peuple revint de la poursuite d’Israël, car Joab retint le peuple.
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
17 Et ils prirent Absalom et le jetèrent dans la forêt, dans une grande fosse, et élevèrent sur lui un très grand monceau de pierres. Et tout Israël s’enfuit, chacun à sa tente.
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
18 Et Absalom avait pris et dressé pour lui, de son vivant, une stèle qui est dans la vallée du Roi; car il disait: Je n’ai pas de fils pour rappeler la mémoire de mon nom. Et il appela la stèle de son nom; et elle est appelée jusqu’à ce jour le monument d’Absalom.
ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
19 Et Akhimaats, fils de Tsadok, dit: Laisse-moi courir et porter au roi la nouvelle que l’Éternel lui a fait justice de la main de ses ennemis.
ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
20 Et Joab lui dit: Tu ne seras pas l’homme qui porteras les nouvelles aujourd’hui, mais tu porteras les nouvelles un autre jour; aujourd’hui tu ne porteras pas les nouvelles, puisque le fils du roi est mort.
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
21 Et Joab dit au Cushite: Va, rapporte au roi ce que tu as vu. Et le Cushite se prosterna devant Joab, et courut.
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
22 Et Akhimaats, le fils de Tsadok, dit encore une fois à Joab: Quoi qu’il arrive, que je coure, moi aussi, je te prie, après le Cushite. Et Joab dit: Pourquoi veux-tu courir, mon fils, puisque tu n’as pas des nouvelles opportunes?
ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
23 – Et quoi qu’il arrive, je veux courir. Et [Joab] lui dit: Cours! Et Akhimaats courut par le chemin de la plaine, et dépassa le Cushite.
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
24 Et David était assis entre les deux portes; et la sentinelle alla sur le toit de la porte, sur la muraille, et elle leva les yeux, et regarda, et voici un homme qui courait seul.
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
25 Et la sentinelle cria et le rapporta au roi; et le roi dit: S’il est seul, il y a des nouvelles dans sa bouche. Et [l’homme] allait toujours, et approchait.
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
26 Et la sentinelle vit un autre homme qui courait, et la sentinelle cria au portier et dit: Voici, un homme qui court seul. Et le roi dit: Celui-ci aussi apporte des nouvelles.
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
27 Et la sentinelle dit: Je vois le premier courir comme court Akhimaats, fils de Tsadok. Et le roi dit: C’est un homme de bien, il vient avec de bonnes nouvelles.
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
28 Et Akhimaats cria, et dit au roi: Paix! Et il se prosterna devant le roi, le visage contre terre, et dit: Béni soit l’Éternel, ton Dieu, qui a livré les hommes qui avaient levé leurs mains contre le roi, mon seigneur!
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
29 Et le roi dit: Y a-t-il paix pour le jeune homme Absalom? Et Akhimaats dit: J’ai vu un grand tumulte lorsque Joab envoya le serviteur du roi et ton serviteur; et je ne sais ce qu’il y avait.
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
30 Et le roi dit: Tourne-toi, et tiens-toi là. Et il se tourna, et se tint là.
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
31 Et voici, le Cushite arriva, et le Cushite dit: Que le roi, mon seigneur, reçoive une bonne nouvelle, car l’Éternel t’a aujourd’hui fait justice de la main de tous ceux qui s’étaient levés contre toi.
ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
32 Et le roi dit au Cushite: Y a-t-il paix pour le jeune homme Absalom? Et le Cushite dit: Que les ennemis du roi, mon seigneur, et tous ceux qui se sont levés contre toi pour le mal, soient comme ce jeune homme!
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
33 Et le roi fut très ému, et il monta à la chambre au-dessus de la porte et pleura; et en allant, il disait ainsi: Mon fils Absalom! mon fils! mon fils Absalom! Fussé-je mort à ta place! Absalom, mon fils, mon fils!
ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.

< 2 Samuel 18 >