< Daniel 5 >
1 Le roi Belshatsar fit un grand festin à 1 000 de ses grands, et but du vin devant les 1 000.
೧ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
2 Belshatsar, comme il buvait le vin, commanda d’apporter les vases d’or et d’argent que son père Nebucadnetsar avait tirés du temple qui était à Jérusalem, afin que le roi et ses grands, ses femmes et ses concubines, y boivent.
೨ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
3 Alors on apporta les vases d’or qu’on avait tirés du temple de la maison de Dieu, qui était à Jérusalem; et le roi et ses grands, ses femmes et ses concubines, y burent.
೩ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 Ils burent du vin, et ils louèrent les dieux d’or et d’argent, d’airain, de fer, de bois, et de pierre.
೪ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
5 En ce même moment, les doigts d’une main d’homme sortirent, et écrivirent, vis-à-vis du chandelier, sur le plâtre de la muraille du palais du roi; et le roi vit l’extrémité de la main qui écrivait.
೫ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
6 Alors le roi changea de couleur, et ses pensées le troublèrent; et les liens de ses reins se délièrent, et ses genoux se heurtèrent l’un contre l’autre.
೬ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 Le roi cria avec force d’amener les enchanteurs, les Chaldéens et les augures. Le roi prit la parole et dit aux sages de Babylone: Quiconque lira cette écriture et m’en indiquera l’interprétation sera revêtu de pourpre, et [aura] une chaîne d’or autour de son cou, et sera le troisième gouverneur dans le royaume.
೭ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
8 Alors arrivèrent tous les sages du roi, mais ils ne purent lire l’écriture ni faire connaître au roi l’interprétation.
೮ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
9 Alors le roi Belshatsar fut extrêmement troublé, et il changea de couleur; et ses grands furent bouleversés.
೯ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.
10 La reine, à cause des paroles du roi et de ses grands, entra dans la maison du festin. La reine prit la parole et dit: Ô roi, vis à jamais! Que tes pensées ne te troublent pas, et ne change pas de couleur:
೧೦ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
11 il y a un homme dans ton royaume, en qui est l’esprit des dieux saints; et, aux jours de ton père, de la lumière, et de l’intelligence, et une sagesse comme la sagesse des dieux, ont été trouvées en lui; et le roi Nebucadnetsar, ton père, – ton père, ô roi, l’a établi chef des devins, des enchanteurs, des Chaldéens, des augures,
೧೧“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
12 parce qu’un esprit extraordinaire, et la connaissance et l’intelligence pour interpréter les songes et pour expliquer les énigmes et pour résoudre les problèmes difficiles, ont été trouvés en lui, en Daniel, à qui le roi a donné le nom de Belteshatsar. Que Daniel soit donc appelé, et il indiquera l’interprétation.
೧೨ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
13 Alors Daniel fut introduit devant le roi. Le roi prit la parole et dit à Daniel: Es-tu ce Daniel, l’un des fils de la captivité de Juda, que le roi, mon père, a amenés de Juda?
೧೩ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
14 Et j’ai entendu dire de toi que l’esprit des dieux est en toi, et que de la lumière, et de l’intelligence, et une sagesse extraordinaire se trouvent en toi.
೧೪ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
15 Et maintenant, les sages, les enchanteurs, ont été amenés devant moi, afin qu’ils lisent cette écriture et m’en fassent connaître l’interprétation, et ils n’ont pu indiquer l’interprétation de la chose.
೧೫“ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
16 Et j’ai entendu dire de toi que tu peux donner des interprétations et résoudre les problèmes difficiles. Maintenant, si tu peux lire l’écriture et m’en faire connaître l’interprétation, tu seras vêtu de pourpre, et tu auras une chaîne d’or autour de ton cou, et tu seras le troisième gouverneur dans le royaume.
೧೬ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
17 Alors Daniel répondit et dit devant le roi: Que tes présents te demeurent, et donne tes récompenses à un autre. Toutefois je lirai l’écriture au roi, et je lui en ferai connaître l’interprétation.
೧೭ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
18 Ô roi, le Dieu Très-haut donna à Nebucadnetsar, ton père, le royaume, et la grandeur, et l’honneur, et la majesté;
೧೮ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
19 et, à cause de la grandeur qu’il lui donna, tous les peuples, les peuplades et les langues, tremblaient devant lui, et le craignaient; il tuait qui il voulait, et il conservait en vie qui il voulait; il exaltait qui il voulait, et il abaissait qui il voulait.
೧೯ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
20 Mais quand son cœur s’éleva et que son esprit s’endurcit jusqu’à l’orgueil, il fut précipité du trône de son royaume, et sa dignité lui fut ôtée;
೨೦“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
21 et il fut chassé du milieu des fils des hommes, et son cœur fut rendu semblable à celui des bêtes, et sa demeure fut avec les ânes sauvages; on le nourrit d’herbe comme les bœufs, et son corps fut baigné de la rosée des cieux, jusqu’à ce qu’il connut que le Dieu Très-haut domine sur le royaume des hommes, et qu’il y établit qui il veut.
೨೧ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
22 Et toi, son fils Belshatsar, tu n’as pas humilié ton cœur, bien que tu aies su tout cela.
೨೨“ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.
23 Mais tu t’es élevé contre le Seigneur des cieux; et on a apporté devant toi les vases de sa maison, et toi et tes grands, tes femmes et tes concubines, vous y avez bu du vin; et tu as loué les dieux d’argent et d’or, d’airain, de fer, de bois et de pierre, qui ne voient, et n’entendent, et ne comprennent point; et le Dieu en la main duquel est ton souffle, et à qui appartiennent toutes tes voies, tu ne l’as pas glorifié.
೨೩ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
24 Alors a été envoyée de sa part l’extrémité de la main, et cette écriture a été tracée.
೨೪ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.
25 Et voici l’écriture qui a été tracée: Mené, Mené, Thekel, Upharsin!
೨೫“ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
26 Voici l’interprétation des paroles. Mené: Dieu a compté ton royaume, et y a mis fin.
೨೬ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
27 Thekel: Tu as été pesé à la balance, et tu as été trouvé manquant de poids.
೨೭ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.
28 Pérès: Ton royaume est divisé, et donné aux Mèdes et aux Perses.
೨೮ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
29 Alors Belshatsar donna des ordres, et on vêtit Daniel de pourpre, et [on mit] une chaîne d’or à son cou, et on proclama qu’il serait le troisième gouverneur dans le royaume.
೨೯ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
30 En cette nuit-là, Belshatsar, roi des Chaldéens, fut tué.
೩೦ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
31 Et Darius, le Mède, reçut le royaume, étant âgé d’environ 62 ans.
೩೧ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.