< Jérémie 52 >
1 Sédécias était âgé de 21 ans lorsqu’il commença de régner; et il régna onze ans à Jérusalem; et le nom de sa mère était Hamutal, fille de Jérémie de Libna.
೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
2 Et il fit ce qui est mauvais aux yeux de l’Éternel, selon tout ce que Jehoïakim avait fait.
೨ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 Car, parce que la colère de l’Éternel fut contre Jérusalem et Juda, jusqu’à les rejeter de devant sa face, Sédécias se révolta contre le roi de Babylone.
೩ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
4 Et il arriva, en la neuvième année de son règne, au dixième mois, le dixième [jour] du mois, que Nebucadretsar, roi de Babylone, vint contre Jérusalem, lui et toute son armée; et ils campèrent contre elle, et bâtirent contre elle une circonvallation tout à l’entour.
೪ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
5 Et la ville fut assiégée jusqu’à la onzième année du roi Sédécias.
೫ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
6 Au quatrième mois, le neuvième [jour] du mois, la famine se renforça dans la ville, et il n’y avait point de pain pour le peuple du pays.
೬ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
7 Et la brèche fut faite à la ville; et tous les hommes de guerre s’enfuirent et sortirent de nuit de la ville, par le chemin de la porte qui était entre les deux murailles près du jardin du roi (et les Chaldéens étaient près de la ville tout à l’entour); et ils s’en allèrent par le chemin de la plaine.
೭ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
8 Et l’armée des Chaldéens poursuivit le roi; et ils atteignirent Sédécias dans les plaines de Jéricho, et toute son armée se dispersa d’avec lui.
೮ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
9 Et ils prirent le roi, et le firent monter vers le roi de Babylone à Ribla, dans le pays de Hamath; et il prononça son jugement.
೯ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
10 Et le roi de Babylone égorgea les fils de Sédécias devant ses yeux, et il égorgea aussi tous les chefs de Juda à Ribla;
೧೦ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
11 et il creva les yeux à Sédécias, et le lia avec des chaînes d’airain, et le roi de Babylone l’amena à Babylone, et le mit sous garde en prison, jusqu’au jour de sa mort.
೧೧ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
12 Et au cinquième mois, le dixième [jour] du mois (c’était la dix -neuvième année du roi Nebucadretsar, roi de Babylone), Nebuzaradan, chef des gardes, qui se tenait devant le roi de Babylone, vint à Jérusalem.
೧೨ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
13 Et il brûla la maison de l’Éternel, et la maison du roi, et toutes les maisons de Jérusalem; et il brûla par le feu toutes les grandes maisons.
೧೩ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
14 Et toute l’armée des Chaldéens qui était avec le chef des gardes abattit toutes les murailles [qui étaient] autour de Jérusalem.
೧೪ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
15 Et les plus pauvres du peuple, et le reste du peuple, qui était demeuré de reste dans la ville, et les transfuges qui s’étaient rendus au roi de Babylone, et le reste de la multitude, Nebuzaradan, chef des gardes, les transporta;
೧೫ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
16 mais des pauvres du pays, Nebuzaradan, chef des gardes, en laissa pour être vignerons et laboureurs.
೧೬ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
17 Et les Chaldéens brisèrent les colonnes d’airain qui étaient devant la maison de l’Éternel, et les bases, et la mer d’airain qui était dans la maison de l’Éternel, et en emportèrent tout l’airain à Babylone.
೧೭ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
18 Ils prirent aussi les vases [à cendre], et les pelles, et les couteaux, et les bassins, et les coupes, et tous les ustensiles d’airain avec lesquels on faisait le service.
೧೮ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
19 Et le chef des gardes prit les écuelles, et les brasiers, et les bassins, et les vases [à cendre], et les chandeliers, et les coupes et les vases, ce qui était d’or, en or, et ce qui était d’argent, en argent.
೧೯ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
20 Les deux colonnes, la mer unique, et les douze bœufs d’airain qui tenaient lieu de socles, que le roi Salomon avait faits pour la maison de l’Éternel: pour l’airain de tous ces objets il n’y avait point de poids.
೨೦ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
21 Et quant aux colonnes, la hauteur d’une colonne était de 18 coudées, et un filet de douze coudées en faisait le tour, et son épaisseur était de quatre doigts; elle était creuse;
೨೧ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
22 et il y avait dessus un chapiteau d’airain, et la hauteur d’un chapiteau était de cinq coudées; et il y avait un réseau et des grenades tout autour du chapiteau, le tout d’airain: et de même pour la seconde colonne, [elle avait] aussi des grenades;
೨೨ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
23 et il y avait 96 grenades sur les [quatre] côtés; toutes les grenades sur le réseau à l’entour étaient au nombre de 100.
೨೩ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
24 Et le chef des gardes prit Seraïa, le premier sacrificateur, et Sophonie, le second sacrificateur, et les trois gardiens du seuil;
೨೪ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
25 et il prit de la ville un eunuque qui était inspecteur des hommes de guerre, et sept hommes de ceux qui voyaient la face du roi, lesquels furent trouvés dans la ville, et le scribe du chef de l’armée, qui enrôlait le peuple du pays, et 60 hommes du peuple du pays, qui furent trouvés dans la ville.
೨೫ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
26 Et Nebuzaradan, chef des gardes, les prit et les mena vers le roi de Babylone à Ribla.
೨೬ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
27 Et le roi de Babylone les frappa et les fit mourir à Ribla, dans le pays de Hamath. Et Juda fut transporté de dessus sa terre.
೨೭ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
28 C’est ici le peuple que Nebucadretsar transporta: la septième année, 3 023 Juifs;
೨೮ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
29 la dix-huitième année de Nebucadretsar, [il transporta] de Jérusalem 832 âmes;
೨೯ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
30 [et] la vingt-troisième année de Nebucadretsar, Nebuzaradan, chef des gardes, transporta d’entre les Juifs 745 âmes: toutes les âmes furent 4 600.
೩೦ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
31 Et il arriva, en la trente-septième année de la transportation de Jehoïakin, roi de Juda, au douzième mois, le vingt-cinquième [jour] du mois, qu’Évil-Merodac, roi de Babylone, l’année où il commença de régner, éleva la tête de Jehoïakin, roi de Juda, et le fit sortir de prison.
೩೧ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
32 Et il lui parla avec bonté, et mit son trône au-dessus du trône des rois qui étaient avec lui à Babylone.
೩೨ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
33 Et il lui changea ses vêtements de prison, et [Jehoïakin] mangea le pain devant lui constamment, tous les jours de sa vie:
೩೩ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
34 et quant à son entretien régulier, un entretien continuel lui fut donné de la part du roi de Babylone, jour par jour, jusqu’au jour de sa mort, tous les jours de sa vie.
೩೪ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.