< Romains 8 >
1 Il n’y a donc maintenant aucune condamnation pour ceux qui sont dans le christ Jésus;
೧ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
2 car la loi de l’Esprit de vie dans le christ Jésus, m’a affranchi de la loi du péché et de la mort;
೨ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
3 car ce qui était impossible à la loi, en ce qu’elle était faible par la chair, Dieu, ayant envoyé son propre Fils en ressemblance de chair de péché, et pour [le] péché, a condamné le péché dans la chair,
೩ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
4 afin que la juste exigence de la loi soit accomplie en nous, qui ne marchons pas selon [la] chair, mais selon [l’]Esprit.
೪ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
5 Car ceux qui sont selon [la] chair ont leurs pensées aux choses de la chair; mais ceux qui sont selon [l’]Esprit, aux choses de l’Esprit;
೫ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6 car la pensée de la chair est [la] mort; mais la pensée de l’Esprit, vie et paix;
೬ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
7 – parce que la pensée de la chair est inimitié contre Dieu, car elle ne se soumet pas à la loi de Dieu, car aussi elle ne le peut pas.
೭ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
8 Et ceux qui sont dans la chair ne peuvent plaire à Dieu.
೮ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
9 Or vous n’êtes pas dans [la] chair, mais dans [l’]Esprit, si du moins [l’]Esprit de Dieu habite en vous; mais si quelqu’un n’a pas [l’]Esprit de Christ, celui-là n’est pas de lui.
೯ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
10 Mais si Christ est en vous, le corps est bien mort à cause du péché, mais l’Esprit est vie à cause de [la] justice.
೧೦ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
11 Et si l’Esprit de celui qui a ressuscité Jésus d’entre les morts habite en vous, celui qui a ressuscité le Christ d’entre les morts vivifiera vos corps mortels aussi, à cause de son Esprit qui habite en vous.
೧೧ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
12 Ainsi donc, frères, nous sommes débiteurs, non pas à la chair pour vivre selon [la] chair;
೧೨ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
13 car si vous vivez selon [la] chair, vous mourrez; mais si par [l’]Esprit vous faites mourir les actions du corps, vous vivrez.
೧೩ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
14 Car tous ceux qui sont conduits par [l’]Esprit de Dieu, ceux-là sont fils de Dieu.
೧೪ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
15 Car vous n’avez pas reçu un esprit de servitude pour être de nouveau dans la crainte, mais vous avez reçu [l’]Esprit d’adoption, par lequel nous crions: Abba, Père!
೧೫ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
16 L’Esprit lui-même rend témoignage avec notre esprit, que nous sommes enfants de Dieu;
೧೬ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17 et si [nous sommes] enfants, [nous sommes] aussi héritiers; héritiers de Dieu, cohéritiers de Christ; si du moins nous souffrons avec lui, afin que nous soyons aussi glorifiés avec lui.
೧೭ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18 Car j’estime que les souffrances du temps présent ne sont pas dignes [d’être comparées] avec la gloire à venir qui doit nous être révélée.
೧೮ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
19 Car la vive attente de la création attend la révélation des fils de Dieu.
೧೯ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
20 Car la création a été assujettie à la vanité (non de sa volonté, mais à cause de celui qui l’a assujettie),
೨೦ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,
21 dans l’espérance que la création elle-même aussi sera affranchie de la servitude de la corruption, pour [jouir de] la liberté de la gloire des enfants de Dieu.
೨೧ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
22 Car nous savons que toute la création ensemble soupire et est en travail jusqu’à maintenant;
೨೨ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ
23 et non seulement [elle], mais nous-mêmes aussi qui avons les prémices de l’Esprit, nous aussi, nous soupirons en nous-mêmes, attendant l’adoption, la délivrance de notre corps.
೨೩ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
24 Car nous avons été sauvés en espérance: or une espérance qu’on voit n’est pas une espérance; car ce que quelqu’un voit, pourquoi aussi l’espère-t-il?
೨೪ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
25 Mais si ce que nous ne voyons pas, nous l’espérons, nous l’attendons avec patience.
೨೫ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
26 De même aussi l’Esprit nous est en aide dans notre infirmité; car nous ne savons pas ce qu’il faut demander comme il convient; mais l’Esprit lui-même intercède par des soupirs inexprimables;
೨೬ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
27 – et celui qui sonde les cœurs sait quelle est la pensée de l’Esprit, car il intercède pour les saints, selon Dieu;
೨೭ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
28 – mais nous savons que toutes choses travaillent ensemble pour le bien de ceux qui aiment Dieu, de ceux qui sont appelés selon [son] propos.
೨೮ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
29 Car ceux qu’il a préconnus, il les a aussi prédestinés à être conformes à l’image de son Fils, pour qu’il soit premier-né entre plusieurs frères.
೨೯ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
30 Et ceux qu’il a prédestinés, il les a aussi appelés; et ceux qu’il a appelés, il les a aussi justifiés; et ceux qu’il a justifiés, il les a aussi glorifiés.
೩೦ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
31 Que dirons-nous donc à ces choses? Si Dieu est pour nous, qui sera contre nous?
೩೧ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
32 Celui même qui n’a pas épargné son propre Fils, mais qui l’a livré pour nous tous, comment ne nous fera-t-il pas don aussi, librement, de toutes choses avec lui?
೩೨ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
33 Qui intentera accusation contre des élus de Dieu? – C’est Dieu qui justifie;
೩೩ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
34 qui est celui qui condamne? – C’est Christ qui est mort, mais plutôt qui est aussi ressuscité, qui est aussi à la droite de Dieu, qui aussi intercède pour nous;
೩೪ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
35 qui est-ce qui nous séparera de l’amour du Christ? Tribulation, ou détresse, ou persécution, ou famine, ou nudité, ou péril, ou épée?
೩೫ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
36 Selon qu’il est écrit: « Pour l’amour de toi, nous sommes mis à mort tout le jour; nous avons été estimés comme des brebis de tuerie ».
೩೬“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.
37 Au contraire, dans toutes ces choses, nous sommes plus que vainqueurs par celui qui nous a aimés.
೩೭ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.
38 Car je suis assuré que ni mort, ni vie, ni anges, ni principautés, ni choses présentes, ni choses à venir, ni puissances,
೩೮ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
39 ni hauteur, ni profondeur, ni aucune autre créature, ne pourra nous séparer de l’amour de Dieu, qui est dans le christ Jésus, notre Seigneur.
೩೯ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.