< Psaumes 35 >
1 De David. Eternel, entre en lutte avec mes adversaires, combats ceux qui me font la guerre.
೧ದಾವೀದನ ಕೀರ್ತನೆ. ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
2 Arme-toi du bouclier et de l’écu, lève-toi pour me secourir.
೨ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು.
3 Brandis ta lance et ferme tout accès à mes persécuteurs, dis à mon âme: "Je suis ton sauveur."
೩ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.
4 Qu’ils soient confus et honteux, ceux qui en veulent à ma vie! Qu’ils lâchent pied et reculent, en rougissant, ceux qui méditent mon malheur!
೪ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
5 Qu’ils soient comme le chaume emporté par le vent, et que l’ange du Seigneur les pourchasse!
೫ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
6 Que leur chemin soit sombre et glissant, et que l’ange du Seigneur soit à leurs trousses!
೬ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7 Car gratuitement ils m’ont dressé leur filet meurtrier, gratuitement ils m’ont creusé une fosse.
೭ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
8 Qu’une catastrophe fonde sur eux à l’improviste; qu’ils soient pris dans le filet qu’ils ont dressé et précipités dans la ruine!
೮ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
9 Alors mon âme se réjouira en l’Eternel, elle sera pleine d’allégresse à cause de son secours.
೯ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
10 Tous mes membres diront: "Seigneur, qui est comme toi?" Tu défends le pauvre contre un plus fort que lui, le malheureux et l’indigent contre leur spoliateur.
೧೦ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
11 Des témoins pervers se lèvent: ils m’interrogent sur ce que j’ignore.
೧೧ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
12 Ils me récompensent en rendant le mal pour le bien: on veut me réduire à l’isolement.
೧೨ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.
13 Tandis que moi, quand ils étaient malades, je portais un cilice comme vêtement, je mortifiais mon âme par le jeûne, et ma prière se renouvelait dans mon cœur;
೧೩ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
14 comme s’il se fût agi d’un ami, d’un frère à moi, je vaguais çà et là; comme si je fusse en deuil d’une mère, j’étais tristement courbé vers le sol.
೧೪ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
15 Et eux, ils se réjouissent en bande de ma chute; des misérables s’attroupent contre moi à l’improviste, ils me déchirent sans relâche.
೧೫ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.
16 En vrais hypocrites, en railleurs gloutons, ils grincent des dents contre moi.
೧೬ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.
17 Seigneur, combien de temps le verras-tu? Protège mon âme contre leurs violences, mon bien le plus précieux contre les lionceaux.
೧೭ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.
18 Je t’en rendrai grâce dans une grande assemblée, je t’en louerai au milieu d’un peuple nombreux.
೧೮ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.
19 Qu’ils ne triomphent pas à mon sujet, ceux qui me haïssent sans motif! Qu’ils ne puissent me lancer de mauvais regards, ceux qui me détestent pour rien!
೧೯ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
20 Car leurs paroles ne sont pas des paroles de paix; contre les gens paisibles du pays ils trament des perfidies;
೨೦ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
21 et contre moi ils ouvrent une large bouche, disant: "Ha! Ha! nous l’avons vu de nos yeux!"
೨೧ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.
22 Toi aussi, tu l’as vu, ô Eternel! Ne garde pas le silence; Seigneur, ne te tiens pas éloigné de moi.
೨೨ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?
23 Mets-toi en mouvement, réveille-toi, pour me rendre justice; mon Dieu et mon maître, défends ma cause.
೨೩ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
24 Juge-moi selon ton équité, Eternel, mon Dieu; qu’ils ne puissent se gausser de moi!
೨೪ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
25 Qu’ils ne disent point en leur cœur: "Ha! Tel était notre souhait!" Qu’ils ne disent pas: "Nous l’avons ruiné!"
೨೫ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
26 Qu’ils soient confus et couverts de honte, tous ensemble, ceux qui se réjouissent de mon malheur; qu’ils soient vêtus d’opprobre et d’infamie, ceux qui font les fiers contre moi!
೨೬ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
27 Mais puissent-ils jubiler et se réjouir, ceux qui souhaitent mon salut! Qu’ils redisent sans cesse: "Grand est l’Eternel, qui veut la paix de son serviteur!"
೨೭ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.
28 Quant à moi, ma langue proclamera ta justice; tout le long du jour, tes louanges.
೨೮ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.