< 1 Chroniques 3 >
1 Voici les fils de David qui lui naquirent à Hébron; le premier-né fut: Amnon, fils de la Jezraélite Achinaam; le second, Damniel (Daluia), fils d'Abigaïl du Carmel;
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,
2 Le troisième, Absalon, fils de Moha (Maacha), fille de Tholmé, roi de Gedsur; le quatrième, Adonias (Ornia), fils d'Aggith;
ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.
3 Le cinquième, Saphatia, fils d'Abital; le sixième, Jethram, fils de sa femme Agla.
ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು.
4 Il en eut six à Hébron, et il y régna sept ans et demi; après quoi, il régna trente-trois ans à Jérusalem.
ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
5 Voici ceux qui lui naquirent en Jérusalem: Samaa, Sobab, Nathan et Salomon. Quatre fils de Bethsabée, fille d'Amiel.
ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.
6 Puis, Ebaar, Elisa, Eliphaleth,
ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್,
8 Elisama, Eliada et Eliphala; en tout: neuf.
ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು.
9 Tous fils de David, outre les fils de ses concubines, et Thamar, leur sœur.
ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.
10 Fils de Salomon: Roboam, Abias son fils, Asa son fils, Josaphat son fils,
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು;
11 Joram son fils, Ochozias son fils, Joas son. fils,
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.
12 Amasias son fils, Azarias son fils, Joathan son fils,
ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13 Achaz son fils, Ezéchias son fils, Manassé son fils,
ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14 Amon son fils, Josias son fils.
ಇವನ ಮಗನು ಆಮೋನನು; ಇವನ ಮಗನು ಯೋಷೀಯನು.
15 Fils de Josias: Joanan le premier-né, Joacin le second, Sédécias le troisième, et Salum le quatrième.
ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.
16 Fils de Joacin: Jéchonias son fils, Sédécias son fils.
ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.
17 Fils de Jéchonias: Asir, Salathiel son fils,
ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,
18 Melchiram, Phadaïas, Fanesar, Jécimie, Hosamath et Nabadias.
ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
19 Fils de Phadaïas: Zorobabel et Sémeï. Fils de Zorobabel: Mosollam et Ananias; Salometh fut leur sœur.
ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.
20 Il eut encore: Asubé, Ool, Barachie, Asadie et Asobed; cinq fils.
ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್
21 Fils d'Ananias: Phalettie, Jésias son fils, Raphal son fils, Orna son fils, Abdias son fils, et Séchénias son fils.
ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22 Fils de Sechénias: Samaïe. Fils de Samaie: Battus, Johel, Berri, Noadie et Saphat; six issus de Sechénias.
ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.
23 Fils de Noadie: Elithenan, Ezécie, Ezricam; trois.
ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.
24 Fils d'Elithenan: Odolie, Eliasebon, Phadaïe, Acub, Joanan, Dalaaïe et Anan; sept.
ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.