< Isaïe 58 >

1 Crie de toute ta force, et ne cesse point; élève ta voix comme le son d'une trompette, et fais connaître ses péchés à mon peuple, et à la maison de Jacob ses iniquités.
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
2 Ils me cherchent de jour en jour; ils désirent connaître mes voies comme un peuple qui a pratiqué la justice, et n'a point abandonné le jugement de son Dieu. Ils me demandent maintenant un jugement équitable, et ils désirent s'approcher de Dieu.
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
3 Pourquoi, disent-ils, avons-nous jeûné sans que vous l'ayez vu? Pourquoi avons-nous humilié nos âmes sans que vous en ayez rien su? C'est qu'en vos jours de jeûne vous avez trouvé votre plaisir, et vous affligez tous tous ceux qui vous sont soumis.
“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
4 Si vous jeûnez pour vous livrer à vos procès et à vos querelles, si vous frappez du poing le pauvre, à quel propos jeûnez-vous pour moi, comme aujourd'hui, criant et élevant la voix afin d'être entendus?
ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
5 Je n'ai point choisi ce jeûne ni ce jour pour qu'un homme humilie son âme; cesse donc de courber ton cou comme un cerceau, de t'étendre sur la cendre et les cilices, et après cela d'appeler ce jeûne agréable à Dieu.
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
6 Ce n'est pas un tel jeûne que j'ai choisi, dit le Seigneur; mais romps tous tes liens avec l'iniquité; dénoue les nœuds des contrats violents; renvoie quittes ceux que tu as lésés; déchire toute obligation inique.
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
7 Romps ton pain avec l'affamé; recueille dans ta maison le pauvre sans abri. Si tu vois un homme nu, donne-lui des vêtements, et garde-toi de mépriser ceux de ta propre chair.
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
8 Alors ta lumière éclatera comme le matin; ta guérison sera prompte, ta justice te devancera, et la gloire de Dieu t'environnera.
ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
9 Tu crieras alors, et Dieu t'exaucera; tu n'auras pas fini de parler qu'il te dira: Me voici. Si tu éloignes de toi les pièges et les votes injustes, et les paroles de murmure;
ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,
10 Si tu donnes de bon cœur du pain à l'affamé; si tu rassasies l'âme du pauvre, alors ta lumière brillera dans les ténèbres, et tes ténèbres seront comme le midi.
೧೦ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
11 Et Dieu sera toujours avec toi; et tu seras rassasié selon les désirs de ton âme; et tes os seront pleins de moelle; ils seront comme un verger arrosé, comme une fontaine où l'eau ne tarit jamais.
೧೧ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
12 Et tes places, autrefois désertes, seront rebâties; et tes fondations dureront dans tous les siècles pour les générations des générations; et tu seras appelé le réparateur des haies détruites, et tu feras régner la paix en tes sentiers.
೧೨ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.
13 Si tu défends à tes pieds de transgresser les sabbats pour ne point faire à ta volonté en un jour saint; si tu trouves des délices aux sabbats consacrés à Dieu; si tu t'abstiens de tes travaux; si aucun mot de colère ne sort de ta bouche;
೧೩ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
14 Si tu mets ta confiance dans le Seigneur, il t'élèvera au-dessus des félicités de la terre; il te donnera pour te nourrir l'héritage de ton père Jacob; car ainsi a parlé la bouche du Seigneur.
೧೪ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.

< Isaïe 58 >