< Lévitique 6 >

1 Et le Seigneur parla à Moïse, et il lui dit:
ಯೆಹೋವನು ಮೋಶೆಗೆ,
2 L'âme qui aura péché, qui aura méprisé et méprisé les commandements du Seigneur, et qui aura frauduleusement agi envers son prochain, au sujet d'un dépôt ou d'une association, ou en le volant, enfin, qui aura commis quelque injustice envers son prochain,
“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
3 Ou qui aura trouvé une chose perdue, et, au sujet de cette chose, aura menti ou qui aura fait un faux serment concernant l'une des affaires que font les hommes, de telle sorte que, par l'un de ces moyens, elle ait péché;
ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
4 Que cette âme, qui aura commis l'un de ces délits, rende le bien dont elle s'est emparée, qu'elle répare le tort qu'elle aura fait, qu'elle rende le dépôt qui lui aura été confié ou la chose qu'elle aura trouvée;
ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
5 Quelle que soit la chose au sujet de laquelle elle aura prêté un faux serment, elle la rendra tout entière, en y ajoutant un cinquième en sus; elle la rendra au maître, le jour même où elle aura été convaincue.
ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
6 Pour son délit, qu'elle présente en outre au Seigneur un bélier sans tache de son troupeau de brebis, d'un prix proportionné à son péché,
ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
7 Et le prêtre priera Dieu pour elle, et son péché lui sera remis en chacune des choses en quoi elle aura failli.
ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
8 Et le Seigneur parla à Moïse, disant:
ಅನಂತರ ಯೆಹೋವನು ಮೋಶೆಗೆ,
9 Donne ces ordres à Aaron et à ses fils; dis-leur: Voici la règle des holocaustes; voici comment on les brûlera: on les brûlera sur l'autel toute la nuit jusqu'au point du jour, et le feu brûlera toujours sur l'autel, et il ne sera pas éteint.
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
10 Le prêtre ensuite revêtira une tunique de lin, et il passera autour de son corps des caleçons de lin, et il enlèvera de l'autel les restes de l'hostie que le feu aura consumée, les restes de l'holocauste, et il les déposera contre l'autel.
೧೦ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
11 Puis, il quittera sa tunique pour un autre vêtement, et il emportera le résidu de l'holocauste hors du camp, dans un lieu pur.
೧೧ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 Le feu brûlera sur l'autel, il ne sera pas éteint, et le prêtre y fera brûler du bois de grand matin, et il y entassera les holocaustes, sur lesquels il posera la graisse des hosties pacifiques.
೧೨ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
13 Le feu brûlera toujours sur l'autel, et il ne sera pas éteint.
೧೩ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
14 Voici la règle du sacrifice que les fils d'Aaron feront devant le Seigneur, en face de l'autel:
೧೪“‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
15 Le prêtre enlèvera une pleine poignée de la fleur de farine du sacrifice, avec l'huile et tout l'encens qui sont sur le sacrifice, et il portera cette part sur l'autel; ce sera le sacrifice, l'odeur de suavité, le mémorial pour le Seigneur.
೧೫ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
16 Aaron et ses fils mangeront le reste du sacrifice; ce sera un azyme mangé en lieu saint; ils le mangeront dans le parvis du tabernacle du témoignage.
೧೬ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 On n'y mettra pas de levain; c'est la part de sacrifices au Seigneur que je leur ai donnée; elle est très sainte, comme celle du sacrifice pour le péché et celle du sacrifice pour le délit.
೧೭ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
18 Tout mâle, parmi les prêtres, la mangera; c'est la loi perpétuelle des sacrifices pour toutes vos générations: quiconque en aura mangé sera sanctifié.
೧೮ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
19 Et le Seigneur parla à Moïse, disant:
೧೯ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
20 Voici l'oblation qu'Aaron et ses fils feront au Seigneur, à partir du jour où tu les oindras; Le dixième d'un éphi de fleur de farine en sacrifice, moitié le matin et moitié le soir.
೨೦“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
21 On le fera frire dans l'huile, à la poêle, on l'offrira en rouleau et brisé par fragments; c'est le sacrifice d'odeur de suavité pour le Seigneur.
೨೧ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
22 L'oint, le prêtre, celui des fils d'Aaron qui lui succèdera, fera le sacrifice; c'est une loi perpétuelle; tout sera consumé.
೨೨ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
23 Car, tout sacrifice de prêtre sera un holocauste; on n'en mangera rien,
೨೩ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24 Le Seigneur parla encore à Moïse, disant:
೨೪ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
25 Parle à Aaron et à ses fils; dis-leur: Voici la loi des sacrifices pour le péché: c'est dans le lieu où l'on immole les holocaustes que l'on immolera devant le Seigneur les victimes pour le péché; elles seront choses très saintes.
೨೫“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 Le prêtre qui les offrira, les mangera; il les mangera en lieu saint, dans le parvis du tabernacle du témoignage.
೨೬ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
27 Quiconque aura touché les chairs d'une victime, sera sanctifié; et quiconque aura eu son manteau aspergé de sang, ou aura été aspergé lui-même, sera lavé en lieu saint.
೨೭ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
28 Le vase de poterie dans lequel on aura fait cuire les chairs, sera brisé et si on les a fait cuire en un vase d'airain, on le nettoiera et on le lavera avec de l'eau.
೨೮ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
29 Tout mâle, parmi les prêtres, les mangera; elles sont choses très saintes devant le Seigneur.
೨೯ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
30 Toute victime, pour le péché, dont on aura introduit du sang dans le tabernacle du témoignage, pour intercéder dans le saint, ne sera pas mangé, mais consumé par le feu.
೩೦ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.

< Lévitique 6 >