< 1 Pierre 5 >
1 Voici les exhortations que j’adresse aux anciens qui sont parmi vous, moi ancien comme eux, témoin des souffrances de Christ, et participant de la gloire qui doit être manifestée:
೧ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
2 Paissez le troupeau de Dieu qui est sous votre garde, non par contrainte, mais volontairement, selon Dieu; non pour un gain sordide, mais avec dévouement;
೨ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
3 non comme dominant sur ceux qui vous sont échus en partage, mais en étant les modèles du troupeau.
೩ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
4 Et lorsque le souverain pasteur paraîtra, vous obtiendrez la couronne incorruptible de la gloire.
೪ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
5 De même, vous qui êtes jeunes, soyez soumis aux anciens. Et tous, dans vos rapports mutuels, revêtez-vous d’humilité; car Dieu résiste aux orgueilleux, Mais il fait grâce aux humbles.
೫ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
6 Humiliez-vous donc sous la puissante main de Dieu, afin qu’il vous élève au temps convenable;
೬ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
7 et déchargez-vous sur lui de tous vos soucis, car lui-même prend soin de vous.
೭ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8 Soyez sobres, veillez. Votre adversaire, le diable, rôde comme un lion rugissant, cherchant qui il dévorera.
೮ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
9 Résistez-lui avec une foi ferme, sachant que les mêmes souffrances sont imposées à vos frères dans le monde.
೯ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
10 Le Dieu de toute grâce, qui vous a appelés en Jésus-Christ à sa gloire éternelle, après que vous aurez souffert un peu de temps, vous perfectionnera lui-même, vous affermira, vous fortifiera, vous rendra inébranlables. (aiōnios )
೧೦ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios )
11 A lui soit la puissance aux siècles des siècles! Amen! (aiōn )
೧೧ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
12 C’est par Silvain, qui est à mes yeux un frère fidèle, que je vous écris ce peu de mots, pour vous exhorter et pour vous attester que la grâce de Dieu à laquelle vous êtes attachés est la véritable.
೧೨ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
13 L’Église des élus qui est à Babylone vous salue, ainsi que Marc, mon fils.
೧೩ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
14 Saluez-vous les uns les autres par un baiser d’affection. Que la paix soit avec vous tous qui êtes en Christ!
೧೪ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.