< 2 Chroniques 17 >
1 Josaphat, son fils, régna à sa place.
ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.
2 Il se fortifia contre Israël: il mit des troupes dans toutes les villes fortes de Juda, et des garnisons dans le pays de Juda et dans les villes d’Éphraïm dont Asa, son père, s’était emparé.
ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
3 L’Éternel fut avec Josaphat, parce qu’il marcha dans les premières voies de David, son père, et qu’il ne rechercha point les Baals;
ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.
4 car il eut recours au Dieu de son père, et il suivit ses commandements, sans imiter ce que faisait Israël.
ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.
5 L’Éternel affermit la royauté entre les mains de Josaphat, à qui tout Juda apportait des présents, et qui eut en abondance des richesses et de la gloire.
ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.
6 Son cœur grandit dans les voies de l’Éternel, et il fit encore disparaître de Juda les hauts lieux et les idoles.
ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.
7 La troisième année de son règne, il chargea ses chefs Ben-Haïl, Abdias, Zacharie, Nethaneel et Michée, d’aller enseigner dans les villes de Juda.
ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.
8 Il envoya avec eux les Lévites Schemaeja, Nethania, Zebadia, Asaël, Schemiramoth, Jonathan, Adonija, Tobija et Tob-Adonija, Lévites, et les sacrificateurs Élischama et Joram.
ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.
9 Ils enseignèrent dans Juda, ayant avec eux le livre de la loi de l’Éternel. Ils parcoururent toutes les villes de Juda, et ils enseignèrent parmi le peuple.
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.
10 La terreur de l’Éternel s’empara de tous les royaumes des pays qui environnaient Juda, et ils ne firent point la guerre à Josaphat.
ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.
11 Des Philistins apportèrent à Josaphat des présents et un tribut en argent; et les Arabes lui amenèrent aussi du bétail, sept mille sept cents béliers et sept mille sept cents boucs.
ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
12 Josaphat s’élevait au plus haut degré de grandeur. Il bâtit en Juda des châteaux et des villes pour servir de magasins.
ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13 Il fit exécuter beaucoup de travaux dans les villes de Juda, et il avait à Jérusalem de vaillants hommes pour soldats.
ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.
14 Voici leur dénombrement, selon les maisons de leurs pères. De Juda, chefs de milliers: Adna, le chef, avec trois cent mille vaillants hommes;
ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.
15 et à ses côtés, Jochanan, le chef, avec deux cent quatre-vingt mille hommes;
ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.
16 et à ses côtés, Amasia, fils de Zicri, qui s’était volontairement consacré à l’Éternel, avec deux cent mille vaillants hommes.
ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.
17 De Benjamin: Éliada, vaillant homme, avec deux cent mille hommes armés de l’arc et du bouclier,
ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.
18 et à ses côtés, Zozabad, avec cent quatre-vingt mille hommes armés pour la guerre.
ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು.
19 Tels sont ceux qui étaient au service du roi, outre ceux que le roi avait placés dans toutes les villes fortes de Juda.
ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.