< 2 Chroniques 20 >

1 Après cela, les fils de Moab et les fils d’Ammon, et avec eux des Maonites, marchèrent contre Josaphat pour lui faire la guerre.
ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.
2 On vint en informer Josaphat, en disant: Une multitude nombreuse s’avance contre toi depuis l’autre côté de la mer, depuis la Syrie, et ils sont à Hatsatson-Thamar, qui est En-Guédi.
ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.
3 Dans sa frayeur, Josaphat se disposa à chercher l’Éternel, et il publia un jeûne pour tout Juda.
ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.
4 Juda s’assembla pour invoquer l’Éternel, et l’on vint de toutes les villes de Juda pour chercher l’Éternel.
ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.
5 Josaphat se présenta au milieu de l’assemblée de Juda et de Jérusalem, dans la maison de l’Éternel, devant le nouveau parvis.
ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:
6 Et il dit: Éternel, Dieu de nos pères, n’es-tu pas Dieu dans les cieux, et n’est-ce pas toi qui domines sur tous les royaumes des nations? N’est-ce pas toi qui as en main la force et la puissance, et à qui nul ne peut résister?
“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?
7 N’est-ce pas toi, ô notre Dieu, qui as chassé les habitants de ce pays devant ton peuple d’Israël, et qui l’as donné pour toujours à la postérité d’Abraham qui t’aimait?
ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?
8 Ils l’ont habité, et ils t’y ont bâti un sanctuaire pour ton nom, en disant:
ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,
9 S’il nous survient quelque calamité, l’épée, le jugement, la peste ou la famine, nous nous présenterons devant cette maison et devant toi, car ton nom est dans cette maison, nous crierons à toi du sein de notre détresse, et tu exauceras et tu sauveras!
‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?
10 Maintenant voici, les fils d’Ammon et de Moab et ceux de la montagne de Séir, chez lesquels tu n’as pas permis à Israël d’entrer quand il venait du pays d’Égypte, car il s’est détourné d’eux et ne les a pas détruits,
“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.
11 les voici qui nous récompensent en venant nous chasser de ton héritage, dont tu nous as mis en possession.
ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.
12 O notre Dieu, n’exerceras-tu pas tes jugements sur eux? Car nous sommes sans force devant cette multitude nombreuse qui s’avance contre nous, et nous ne savons que faire, mais nos yeux sont sur toi.
ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.
13 Tout Juda se tenait debout devant l’Éternel, avec leurs petits enfants, leurs femmes et leurs fils.
ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.
14 Alors l’esprit de l’Éternel saisit au milieu de l’assemblée Jachaziel, fils de Zacharie, fils de Benaja, fils de Jeïel, fils de Matthania, Lévite, d’entre les fils d’Asaph.
ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.
15 Et Jachaziel dit: Soyez attentifs, tout Juda et habitants de Jérusalem, et toi, roi Josaphat! Ainsi vous parle l’Éternel: Ne craignez point et ne vous effrayez point devant cette multitude nombreuse, car ce ne sera pas vous qui combattrez, ce sera Dieu.
ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.
16 Demain, descendez contre eux; ils vont monter par la colline de Tsits, et vous les trouverez à l’extrémité de la vallée, en face du désert de Jeruel.
ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
17 Vous n’aurez point à combattre en cette affaire: présentez-vous, tenez-vous là, et vous verrez la délivrance que l’Éternel vous accordera. Juda et Jérusalem, ne craignez point et ne vous effrayez point, demain, sortez à leur rencontre, et l’Éternel sera avec vous!
ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.
18 Josaphat s’inclina le visage contre terre, et tout Juda et les habitants de Jérusalem tombèrent devant l’Éternel pour se prosterner en sa présence.
ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.
19 Les Lévites d’entre les fils des Kehathites et d’entre les fils des Koréites se levèrent pour célébrer d’une voix forte et haute l’Éternel, le Dieu d’Israël.
ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.
20 Le lendemain, ils se mirent en marche de grand matin pour le désert de Tekoa. A leur départ, Josaphat se présenta et dit: Écoutez-moi, Juda et habitants de Jérusalem! Confiez-vous en l’Éternel, votre Dieu, et vous serez affermis; confiez-vous en ses prophètes, et vous réussirez.
ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.
21 Puis, d’accord avec le peuple, il nomma des chantres qui, revêtus d’ornements sacrés, et marchant devant l’armée, célébraient l’Éternel et disaient: Louez l’Éternel, car sa miséricorde dure à toujours!
ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.
22 Au moment où l’on commençait les chants et les louanges, l’Éternel plaça une embuscade contre les fils d’Ammon et de Moab et ceux de la montagne de Séir, qui étaient venus contre Juda. Et ils furent battus.
ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.
23 Les fils d’Ammon et de Moab se jetèrent sur les habitants de la montagne de Séir pour les dévouer par interdit et les exterminer; et quand ils en eurent fini avec les habitants de Séir, ils s’aidèrent les uns les autres à se détruire.
ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
24 Lorsque Juda fut arrivé sur la hauteur d’où l’on aperçoit le désert, ils regardèrent du côté de la multitude, et voici, c’étaient des cadavres étendus à terre, et personne n’avait échappé.
ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
25 Josaphat et son peuple allèrent prendre leurs dépouilles; ils trouvèrent parmi les cadavres d’abondantes richesses et des objets précieux, et ils en enlevèrent tant qu’ils ne purent tout emporter. Ils mirent trois jours au pillage du butin, car il était considérable.
ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.
26 Le quatrième jour, ils s’assemblèrent dans la vallée de Beraca, où ils bénirent l’Éternel; c’est pourquoi ils appelèrent ce lieu vallée de Beraca, nom qui lui est resté jusqu’à ce jour.
ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
27 Tous les hommes de Juda et de Jérusalem, ayant à leur tête Josaphat, partirent joyeux pour retourner à Jérusalem, car l’Éternel les avait remplis de joie en les délivrant de leurs ennemis.
ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,
28 Ils entrèrent à Jérusalem et dans la maison de l’Éternel, au son des luths, des harpes et des trompettes.
ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.
29 La terreur de l’Éternel s’empara de tous les royaumes des autres pays, lorsqu’ils apprirent que l’Éternel avait combattu contre les ennemis d’Israël.
ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.
30 Et le royaume de Josaphat fut tranquille, et son Dieu lui donna du repos de tous côtés.
ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.
31 Josaphat régna sur Juda. Il avait trente-cinq ans lorsqu’il devint roi, et il régna vingt-cinq ans à Jérusalem. Sa mère s’appelait Azuba, fille de Schilchi.
ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
32 Il marcha dans la voie de son père Asa, et ne s’en détourna point, faisant ce qui est droit aux yeux de l’Éternel.
ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
33 Seulement, les hauts lieux ne disparurent point, et le peuple n’avait point encore le cœur fermement attaché au Dieu de ses pères.
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.
34 Le reste des actions de Josaphat, les premières et les dernières, cela est écrit dans les mémoires de Jéhu, fils de Hanani, lesquels sont insérés dans le livre des rois d’Israël.
ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.
35 Après cela, Josaphat, roi de Juda, s’associa avec le roi d’Israël, Achazia, dont la conduite était impie.
ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.
36 Il s’associa avec lui pour construire des navires destinés à aller à Tarsis, et ils firent les navires à Étsjon-Guéber.
ಇದಲ್ಲದೆ ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಮಾಡಿಸಲು, ಅವನ ಸಂಗಡ ಒಪ್ಪಂದ ಮಾಡಿಕೊಂಡು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಮಾಡಿಸಿದರು.
37 Alors Éliézer, fils de Dodava, de Maréscha, prophétisa contre Josaphat, et dit: Parce que tu t’es associé avec Achazia, l’Éternel détruit ton œuvre. Et les navires furent brisés, et ne purent aller à Tarsis.
ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.

< 2 Chroniques 20 >