< 2 Samuel 14 >
1 Joab, fils de Tseruja, s’aperçut que le cœur du roi était porté pour Absalom.
ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.
2 Il envoya chercher à Tekoa une femme habile, et il lui dit: Montre-toi désolée, et revêts des habits de deuil; ne t’oins pas d’huile, et sois comme une femme qui depuis longtemps pleure un mort.
ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,
3 Tu iras ainsi vers le roi, et tu lui parleras de cette manière. Et Joab lui mit dans la bouche ce qu’elle devait dire.
ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.
4 La femme de Tekoa alla parler au roi. Elle tomba la face contre terre et se prosterna, et elle dit: O roi, sauve-moi!
ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.
5 Le roi lui dit: Qu’as-tu? Elle répondit: Oui, je suis veuve, mon mari est mort!
ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.
6 Ta servante avait deux fils; ils se sont tous deux querellés dans les champs, et il n’y avait personne pour les séparer; l’un a frappé l’autre, et l’a tué.
ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
7 Et voici, toute la famille s’est levée contre ta servante, en disant: Livre le meurtrier de son frère! Nous voulons le faire mourir, pour la vie de son frère qu’il a tué; nous voulons détruire même l’héritier! Ils éteindraient ainsi le tison qui me reste, pour ne laisser à mon mari ni nom ni survivant sur la face de la terre.
ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.
8 Le roi dit à la femme: Va dans ta maison. Je donnerai des ordres à ton sujet.
ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.
9 La femme de Tekoa dit au roi: C’est sur moi, ô roi mon seigneur, et sur la maison de mon père, que le châtiment va tomber; le roi et son trône n’auront pas à en souffrir.
ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.
10 Le roi dit: Si quelqu’un parle contre toi, amène-le-moi, et il ne lui arrivera plus de te toucher.
ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.
11 Elle dit: Que le roi se souvienne de l’Éternel, ton Dieu, afin que le vengeur du sang n’augmente pas la ruine, et qu’on ne détruise pas mon fils! Et il dit: L’Éternel est vivant! Il ne tombera pas à terre un cheveu de ton fils.
ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.
12 La femme dit: Permets que ta servante dise un mot à mon seigneur le roi. Et il dit: Parle!
ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.
13 La femme dit: Pourquoi penses-tu de la sorte à l’égard du peuple de Dieu, puisqu’il résulte des paroles mêmes du roi que le roi est comme coupable en ne rappelant pas celui qu’il a proscrit?
ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.
14 Il nous faut certainement mourir, et nous serons comme des eaux répandues à terre et qui ne se rassemblent plus; Dieu n’ôte pas la vie, mais il désire que le fugitif ne reste pas banni de sa présence.
ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.
15 Maintenant, si je suis venue dire ces choses au roi mon seigneur, c’est que le peuple m’a effrayée. Et ta servante a dit: Je veux parler au roi; peut-être le roi fera-t-il ce que dira sa servante.
“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.
16 Oui, le roi écoutera sa servante, pour la délivrer de la main de ceux qui cherchent à nous exterminer, moi et mon fils, de l’héritage de Dieu.
ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.
17 Ta servante a dit: Que la parole de mon seigneur le roi me donne le repos. Car mon seigneur le roi est comme un ange de Dieu, prêt à entendre le bien et le mal. Et que l’Éternel, ton Dieu, soit avec toi!
“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”
18 Le roi répondit, et dit à la femme: Ne me cache pas ce que je vais te demander. Et la femme dit: Que mon seigneur le roi parle!
ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.
19 Le roi dit alors: La main de Joab n’est-elle pas avec toi dans tout ceci? Et la femme répondit: Aussi vrai que ton âme est vivante, ô roi mon seigneur, il n’y a rien à droite ni à gauche de tout ce que dit mon seigneur le roi. C’est, en effet, ton serviteur Joab qui m’a donné des ordres, et qui a mis dans la bouche de ta servante toutes ces paroles.
ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
20 C’est pour donner à la chose une autre tournure que ton serviteur Joab a fait cela. Mais mon seigneur est aussi sage qu’un ange de Dieu, pour connaître tout ce qui se passe sur la terre.
ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.
21 Le roi dit à Joab: Voici, je veux bien faire cela; va donc, ramène le jeune homme Absalom.
ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.
22 Joab tomba la face contre terre et se prosterna, et il bénit le roi. Puis il dit: Ton serviteur connaît aujourd’hui que j’ai trouvé grâce à tes yeux, ô roi mon seigneur, puisque le roi agit selon la parole de son serviteur.
ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.
23 Et Joab se leva et partit pour Gueschur, et il ramena Absalom à Jérusalem.
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
24 Mais le roi dit: Qu’il se retire dans sa maison, et qu’il ne voie point ma face. Et Absalom se retira dans sa maison, et il ne vit point la face du roi.
ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.
25 Il n’y avait pas un homme dans tout Israël aussi renommé qu’Absalom pour sa beauté; depuis la plante du pied jusqu’au sommet de la tête, il n’y avait point en lui de défaut.
ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
26 Lorsqu’il se rasait la tête, c’était chaque année qu’il se la rasait, parce que sa chevelure lui pesait, le poids des cheveux de sa tête était de deux cents sicles, poids du roi.
ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.
27 Il naquit à Absalom trois fils, et une fille nommée Tamar, qui était une femme belle de figure.
ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.
28 Absalom demeura deux ans à Jérusalem, sans voir la face du roi.
ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
29 Il fit demander Joab, pour l’envoyer vers le roi; mais Joab ne voulut point venir auprès de lui. Il le fit demander une seconde fois; et Joab ne voulut point venir.
ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.
30 Absalom dit alors à ses serviteurs: Voyez, le champ de Joab est à côté du mien; il y a de l’orge; allez et mettez-y le feu. Et les serviteurs d’Absalom mirent le feu au champ.
ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
31 Joab se leva et se rendit auprès d’Absalom, dans sa maison. Il lui dit: Pourquoi tes serviteurs ont-ils mis le feu au champ qui m’appartient?
ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.
32 Absalom répondit à Joab: Voici, je t’ai fait dire: Viens ici, et je t’enverrai vers le roi, afin que tu lui dises: Pourquoi suis-je revenu de Gueschur? Il vaudrait mieux pour moi que j’y fusse encore. Je désire maintenant voir la face du roi; et s’il y a quelque crime en moi, qu’il me fasse mourir.
ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.
33 Joab alla vers le roi, et lui rapporta cela. Et le roi appela Absalom, qui vint auprès de lui et se prosterna la face contre terre en sa présence. Le roi baisa Absalom.
ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.