< Deutéronome 23 >
1 Celui dont les testicules ont été écrasés ou l’urètre coupé n’entrera point dans l’assemblée de l’Éternel.
೧ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.
2 Celui qui est issu d’une union illicite n’entrera point dans l’assemblée de l’Éternel; même sa dixième génération n’entrera point dans l’assemblée de l’Éternel.
೨ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.
3 L’Ammonite et le Moabite n’entreront point dans l’assemblée de l’Éternel, même à la dixième génération et à perpétuité,
೩ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
4 parce qu’ils ne sont pas venus au-devant de vous avec du pain et de l’eau, sur le chemin, lors de votre sortie d’Égypte, et parce qu’ils ont fait venir contre toi à prix d’argent Balaam, fils de Beor, de Pethor en Mésopotamie, pour qu’il te maudisse.
೪ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
5 Mais l’Éternel, ton Dieu, n’a point voulu écouter Balaam; et l’Éternel, ton Dieu, a changé pour toi la malédiction en bénédiction, parce que tu es aimé de l’Éternel, ton Dieu.
೫ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
6 Tu n’auras souci ni de leur prospérité ni de leur bien-être, tant que tu vivras, à perpétuité.
೬ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.
7 Tu n’auras point en abomination l’Édomite, car il est ton frère; tu n’auras point en abomination l’Égyptien, car tu as été étranger dans son pays:
೭ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.
8 les fils qui leur naîtront à la troisième génération entreront dans l’assemblée de l’Éternel.
೮ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.
9 Lorsque tu camperas contre tes ennemis, garde-toi de toute chose mauvaise.
೯ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.
10 S’il y a chez toi un homme qui ne soit pas pur, par suite d’un accident nocturne, il sortira du camp, et n’entrera point dans le camp;
೧೦ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.
11 sur le soir il se lavera dans l’eau, et après le coucher du soleil il pourra rentrer au camp.
೧೧ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
12 Tu auras un lieu hors du camp, et c’est là dehors que tu iras.
೧೨ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.
13 Tu auras parmi ton bagage un instrument, dont tu te serviras pour faire un creux et recouvrir tes excréments, quand tu voudras aller dehors.
೧೩ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.
14 Car l’Éternel, ton Dieu, marche au milieu de ton camp pour te protéger et pour livrer tes ennemis devant toi; ton camp devra donc être saint, afin que l’Éternel ne voie chez toi rien d’impur, et qu’il ne se détourne point de toi.
೧೪ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
15 Tu ne livreras point à son maître un esclave qui se réfugiera chez toi, après l’avoir quitté.
೧೫ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.
16 Il demeurera chez toi, au milieu de toi, dans le lieu qu’il choisira, dans l’une de tes villes, où bon lui semblera: tu ne l’opprimeras point.
೧೬ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.
17 Il n’y aura aucune prostituée parmi les filles d’Israël, et il n’y aura aucun prostitué parmi les fils d’Israël.
೧೭ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.
18 Tu n’apporteras point dans la maison de l’Éternel, ton Dieu, le salaire d’une prostituée ni le prix d’un chien, pour l’accomplissement d’un vœu quelconque; car l’un et l’autre sont en abomination à l’Éternel, ton Dieu.
೧೮ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
19 Tu n’exigeras de ton frère aucun intérêt ni pour argent, ni pour vivres, ni pour rien de ce qui se prête à intérêt.
೧೯ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
20 Tu pourras tirer un intérêt de l’étranger, mais tu n’en tireras point de ton frère, afin que l’Éternel, ton Dieu, te bénisse dans tout ce que tu entreprendras au pays dont tu vas entrer en possession.
೨೦ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
21 Si tu fais un vœu à l’Éternel, ton Dieu, tu ne tarderas point à l’accomplir: car l’Éternel, ton Dieu, t’en demanderait compte, et tu te chargerais d’un péché.
೨೧ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
22 Si tu t’abstiens de faire un vœu, tu ne commettras pas un péché.
೨೨ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
23 Mais tu observeras et tu accompliras ce qui sortira de tes lèvres, par conséquent les vœux que tu feras volontairement à l’Éternel, ton Dieu, et que ta bouche aura prononcés.
೨೩ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.
24 Si tu entres dans la vigne de ton prochain, tu pourras à ton gré manger des raisins et t’en rassasier; mais tu n’en mettras point dans ton vase.
೨೪ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.
25 Si tu entres dans les blés de ton prochain, tu pourras cueillir des épis avec la main, mais tu n’agiteras point la faucille sur les blés de ton prochain.
೨೫ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.